ಪ್ರಧಾನ ಮಂತ್ರಿ ಉಜ್ವಲ ಯೋಜನೆ-2 ಜಾರಿ: ಬಡವರಿಗೆ ಉಚಿತ ಅಡುಗೆ, ಅನಿಲ ಸಂಪರ್ಕ
ಉಡುಪಿ: ಅಡುಗೆ ಅನಿಲ ಸಂಪರ್ಕದಿಂದ ವಂಚಿತರಾಗಿರುವ ಬಡ ಕುಟುಂಬದವರನ್ನು ಗುರುತಿಸಿ, ಅವರಿಗೆ ಅನಿಲ ಸಂಪರ್ಕ ಒದಗಿಸಲು ಪ್ರಧಾನ ಮಂತ್ರಿ ಉಜ್ವಲ ಯೋಜನೆ-2 ಅನ್ನು ಅನುಷ್ಠಾನಗೊಳಿಸಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವ ಬಡವರು ಇದರ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಯೋಜನೆಯ ಉಡುಪಿ ಜಿಲ್ಲಾ ನೋಡಲ್ ಅಧಿಕಾರಿ ಜುನೈದ್ ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಕೇಂದ್ರ ಸರ್ಕಾರವು 2017ರಲ್ಲಿ ಆರಂಭಿಸಿರುವ ಪ್ರಧಾನಮಂತ್ರಿ ಉಜ್ವಲ ಯೋಜನೆ (ಪಿಎಂಯುವೈ)ಯಲ್ಲಿ ಅಡುಗೆ ಅನಿಲ(ಎಲ್.ಪಿ.ಜಿ.) ಸಂಪರ್ಕ ಸಿಗದೇ ಇರುವ ಬಿಪಿಎಲ್ ಕುಟುಂಬಗಳನ್ನು ಗುರುತಿಸಿ ಈ ನೂತನ ಯೋಜನೆಯಲ್ಲಿ ಸಂಪರ್ಕ ನೀಡಲಾಗುವುದು […]
“ಸುವರ್ಣ ತ್ರಿಭುಜ” ಬೋಟ್ ನಾಪತ್ತೆ ಪ್ರಕರಣ, ರಾಜ್ಯ ಸರಕಾರದ ನಿರ್ಲಕ್ಷ್ಯ: ಯಶ್ ಪಾಲ್ ಸುವರ್ಣ
“ಸುವರ್ಣ ತ್ರಿಭುಜ” ಬೋಟ್ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ನಿರ್ಲಕ್ಷ್ಯ ವಹಿಸಿದೆ. ಬೋಟ್ ಪತ್ತೆ ಮಾಡಲು ಯಾವುದೇ ತುರ್ತು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ದೂರಿದರು. ಕರಾವಳಿ ಕಾವಲು ಪಡೆಯಲ್ಲಿ ಈಜು ಬರುವ ಹಾಗೂ ಪರಿಣತಿ ಹೊಂದಿದ ಸಿಬ್ಬಂದಿಗಳಲ್ಲಿ. ಅಲ್ಲದೆ ಇಂತಹ ತುರ್ತು ಅವಘಡಗಳು ಸಂಭವಿಸಿದಂತಹ ಸಂದರ್ಭದಲ್ಲಿ ತುರ್ತು ಕಾರ್ಯಾಚರಣೆ ಮಾಡಲು ಬೇಕಾದ ಸೂಕ್ತ ವ್ಯವಸ್ಥೆ […]
ಡಿ. 30ರಂದು ಮಲ್ಪೆ ಕಡಲ ಕಿನಾರೆಯಲ್ಲಿ ಬೃಹತ್ ಮತ್ಸ್ಯಮೇಳ
ಉಡುಪಿ: ಮೀನುಗಾರಿಕೆ ಹಾಗೂ ಮೀನು ಸೇವನೆ ಪ್ರೋತ್ಸಾಹಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಮೀನುಗಾರಿಕಾ ಇಲಾಖೆಯ ಸಹಭಾಗಿತ್ವದಲ್ಲಿ ಬೃಹತ್ ಮತ್ಸ್ಯ ಮೇಳ ‘ಫಿಶ್ ಫೆಸ್ಟ್-2018’ ಅನ್ನು ಡಿ. 30ರಂದು ಮಲ್ಪೆ ಕಡಲ ಕಿನಾರೆಯಲ್ಲಿ ಆಯೋಜಿಸಿದೆ ಎಂದು ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸುವುದರೊಂದಿಗೆ ರಾಜ್ಯದಾದ್ಯಂತ ಮುಂಬರುವ ದಿನಗಳಲ್ಲಿ ಫೆಡರೇಷನ್ ವತಿಯಿಂದ ಮತ್ಸ್ಯ ಕ್ಯಾಂಟೀನ್ ಆರಂಭಿಸಿ ತಾಜಾ ಮೀನಿನ ಖಾದ್ಯಗಳನ್ನು […]
ಕೋಟಿಗೆ ತೂಗುವ ತಿಮಿಂಗಿಲ ಮಂಜುನಾಥಯ್ಯ ಎಸಿಬಿ ಅಧಿಕಾರಿಗಳ ಬಲೆಗೆ
ಉಡುಪಿ: ಉಡುಪಿಯ ಮಾಜಿ ನಗರಸಭೆಯ ಆಯುಕ್ತ ಹಾಗೂ ಮಂಗಳೂರು ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ರೀಡರ್ ಡಿ. ಮಂಜುನಾಥಯ್ಯ ಅವರಿಗೆ ಸೇರಿದ ಮಣಿಪಾಲದ ಫ್ಲ್ಯಾಟ್ ಗೆ ಶುಕ್ರವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳ ತಂಡ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಮುಂಜಾನೆ 6ಗಂಟೆ ಸುಮಾರಿಗೆ ಪಶ್ಚಿಮ ವಲಯ ಎಸಿಬಿ ಎಸ್ಪಿ ಶೃತಿ ನೇತೃತ್ವದ 15 ಮಂದಿ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಮಣಿಪಾಲ ಪ್ರಿಯದರ್ಶಿನಿ ಎನ್ಕ್ಲೈವ್ ಫ್ಲಾೃಟ್ ಸಂಖ್ಯೆ 302 […]
ಡಿ.29 ರಂದು ಕಡ್ತಲ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಾರ್ಷಿಕೋತ್ಸವ
ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಡ್ತಲ, ಇಲ್ಲಿನ ವಾರ್ಷಿಕೋತ್ಸವು ಡಿ.29ರಂದು ಶನಿವಾರ ನಡೆಯಲಿದೆ. ಬೆಳಿಗ್ಗೆ ಗಂಟೆ 9ಕ್ಕೆ ಧ್ವಜಾರೋಹಣವನ್ನು ನಿವೃತ್ತ ಮುಖ್ಯೋಪಾಧ್ಯಾಯರ ಚಂದ್ರಹಾಸ ಹೆಗ್ಡೆ ವಹಿಸಲಿದ್ದು, ಬಾಲವನದ ಉದ್ಘಾಟನೆಯನ್ನು ಲಯನ್ಸ್ ಡಿಸ್ಟಿಕ್ಟ್ ಗವರ್ನರ್ ತಲ್ಲೂರು ಶಿವರಾಮ ಶೆಟ್ಟಿ ಅವರು ನೆರವೇರಿಸಲಿದ್ದಾರೆ. ಶನಿವಾರ ರಾತ್ರಿ 7:30ಕ್ಕೆ ಶಾಲಾ ವಾರ್ಷಿಕೋತ್ಸವದ ಉದ್ಘಾಟನೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಕಳ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ವಿ ಸುನಿಲ್ ಕುಮಾರ್ ಉದ್ಘಾಟಿಸಲಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷ ಅರುಣ್ ಕುಮಾರ್ […]