ಕೃಷಿ ಸಾಲಮನ್ನಾ: ಆರ್‌ಬಿಐ ಎಚ್ಚರಿಕೆ

ನವದೆಹಲಿ: ಕೃಷಿ ಸಾಲಮನ್ನಾಕ್ಕೆ ಕಡಿವಾಣ ಹಾಕುವಂತೆ ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ರಾಜ್ಯ ಸರ್ಕಾರಗಳಿಗೆ ತಾಕೀತು ಮಾಡಿದೆ. ರಾಜ್ಯಸರ್ಕಾರಗಳ ಸಾಲಮನ್ನಾ ನಿರ್ಧಾರದಿಂದ ಭವಿಷ್ಯದಲ್ಲಿ ಬ್ಯಾಂಕ್‌ಗಳ ಕೃಷಿ ಸಾಲ ವಿತರಣೆ ಸಾಮರ್ಥ್ಯಕ್ಕೆ ದೊಡ್ಡ ಪೆಟ್ಟು ಬೀಳುವ ಸಾಧ್ಯತೆ ಇದೆ. ರಾಜ್ಯ ಸರ್ಕಾರಗಳ ಕೃಷಿ ಸಾಲಮನ್ನಾ ನಿರ್ಧಾರದಿಂದಾಗಿ ಬ್ಯಾಂಕ್‌ಗಳ ಕೃಷಿ ಸಾಲ ವಿತರಣೆ ಪ್ರಮಾಣ ಶೇ 70ರವರೆಗೂ ಕುಂಠಿತಗೊಂಡಿದೆ ಎಂದು ಆರ್‌ಬಿಐ ಎಚ್ಚರಿಕೆ ನೀಡಿದೆ. 2016–17ರಲ್ಲಿ ಬ್ಯಾಂಕ್‌ಗಳ ಕೃಷಿ ಸಾಲ ನೀಡಿಕೆ ಪ್ರಮಾಣ ಶೇ 12.4ರಷ್ಟು ಪ್ರಗತಿ ಸಾಧಿಸಿತ್ತು. 2017–18ರಲ್ಲಿ […]

ತುಳು ಭಾಷೆ ಸಂಶೋಧಕ ಪ್ರೊ|ಪೀಟರ್‌ ಜೆ.ಕ್ಲಾಸ್‌ ನಿಧನ

ಮಂಗಳೂರು: ತುಳು ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಸಂಶೋಧನೆ ನಡೆಸಿದ್ದ ಪ್ರೊ|ಪೀಟರ್‌ ಜೆ.ಕ್ಲಾಸ್‌ ಭಾನುವಾರ ಅಮೆರಿಕದಲ್ಲಿ ನಿಧನರಾದರು. ಅಮೆರಿಕದ ಕ್ಯಾಲಿಫೋರ್ನಿಯಾ ಸ್ಟೇಟ್‌ ವಿಶ್ವವಿದ್ಯಾಲಯದ ಮಾನವ ಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿದ್ದ ಪ್ರೊ| ಕ್ಲಾಸ್‌ ಅವರು ಕರ್ನಾಟಕದ ಕರಾವಳಿಯಲ್ಲಿ 30 ವರ್ಷಗಳ ಕಾಲ ಜನರೊಂದಿಗೆ ಬೆರೆತು ತುಳು ಭಾಷೆಯನ್ನು ಕಲಿತು, ಇಲ್ಲಿನ ಪಾಡ್ದನಗಳ ಬಗ್ಗೆ ಅನೇಕ ಲೇಖನ ಹಾಗೂ ಪುಸ್ತಕಗಳನ್ನು ಪ್ರಕಟಿಸಿ ತುಳುಭಾಷೆ ಮತ್ತು ಸಂಸ್ಕೃತಿಯ ಅಧ್ಯಯನಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದರು.

ಹಿರಿಯ ಪತ್ರಕರ್ತ, ಕಲಾ ವಿಮರ್ಶಕ ಎ.ಈಶ್ವರಯ್ಯ ನಿಧನ

ಉಡುಪಿ: ಹಿರಿಯ ಪತ್ರಕರ್ತ, ಕಲಾ ವಿಮರ್ಶಕ ಎ.ಈಶ್ವರಯ್ಯ (78) ಭಾನುವಾರ ಬೆಳಿಗ್ಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಛಾಯಾಗ್ರಾಹಕರೂ ಆಗಿದ್ದ ಅವರಿಗೆ ಇಬ್ಬ ಪುತ್ರ, ಇಬ್ಬರು ಪುತ್ರಿಯರು ಇದ್ದರು. ಮೂತ್ರಪಿಂಡ ವೈಫಲ್ಯದಿಂದ ತೀವ್ರ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲೋಕೋಪಯೋಗಿ ಇಲಾಖೆಯಲ್ಲಿ ಕೆಲಸ ಮಾಡಿದ್ದ ಅವರು ಸುಧಾ, ಮಯೂರ, ಕಸ್ತೂರಿ ಪತ್ರಿಕೆಗಳಿಗೆ 50ಕ್ಕೂ ಹೆಚ್ಚು ಕಥೆಗಳನ್ನು ಬರೆದಿದ್ದರು. ಉದಯವಾಣಿ ಮೂಲಕ ಪತ್ರಿಕಾ ವೃತ್ತಿ ಆರಂಭಿಸಿ, ಕಲಾವಿಮರ್ಶಕರಾಗಿ ಹೆಸರು ಮಾಡಿದ್ದರು. ಬಳಿಕ ತುಷಾರ ಮಾಸಪತ್ರಿಕೆಯ ಸಂಪಾದಕರಾಗಿದ್ದರು. ಸಂಗೀತ ಕ್ಷೇತ್ರದಲ್ಲೂ […]