ಬಾಲಿವುಡ್ ಹಿರಿಯ ನಟ ಖಾದರ್ ಖಾನ್ ನಿಧನ

ಹಿಂದಿ ಚಿತ್ರರಂಗದ ಹಿರಿಯ ನಟ, ಸಂಭಾಷಣೆಕಾರ ಖಾದರ್ ಖಾನ್ ವಿಧಿವಶರಾಗಿದ್ದಾರೆ. 81 ವರ್ಷ ವಯಸ್ಸಾಗಿದ್ದ ಅವರು ಉಸಿರಾಟದ ತೊಂದರೆಯಿಂದ ಬಳಲುತಿದ್ದರು. ಕೆನಾಡದ ಟೋರಾಂಟೋದಲ್ಲಿರುವ ಆಸ್ಪತ್ರೆಯೊದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖಾದರ್ ಖಾನ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕವನ್ನು ತ್ಯಜಿಸಿದರು. ಅವರ ಸಾವಿಗೆ ಕುಟುಂಬದ ಹಾಗೂ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಖಾದರ್ ಖಾನ್ ಅವರು ನಟನೆ, ಸಂಭಾಷಣೆ ಹಾಗೂ ಚಿತ್ರಕತೆ ಬರೆಯುವ ಮೂಲಕ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಸುಮಾರು 250ಕ್ಕೂ ಹೆಚ್ಚು ಸಿನಿಮಾಗಳಿಗೆ ಸಂಭಾಷಣೆಯನ್ನು ಬರೆದಿದ್ದಾರೆ. 1973 ರಲ್ಲಿ ಮೊದಲ ಬಾರಿಗೆ ಖಾದರ್ […]
ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್‌ಪಿಯಾಗಿ ಬಿ.ಎಂ.ಲಕ್ಷ್ಮೀಪ್ರಸಾದ್ ನೇಮಕ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್‌ಪಿಯನ್ನಾಗಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಎಸ್‌ಪಿ ದರ್ಜೆಯಲ್ಲಿದ್ದ ರವಿಕಾಂತೇಗೌಡ ಅವರಿಗೂ ಬಡ್ತಿ ದೊರಕಿದ್ದು, ಅವರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಐಜಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಎಂಜಿನಿಯರಿಂಗ್ ಪದವೀಧರರಾ ಗಿರುವ ಲಕ್ಷ್ಮೀಪ್ರಸಾದ್, 2014ರಲ್ಲಿ ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಐಪಿಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಾಗಲಕೋಟೆ ಸಹಾಯಕ ಎಸ್‌ಪಿ, ವಿಜಯಪುರ ಮತ್ತು ನಕ್ಸಲ್ ನಿಗ್ರಹ ಪಡೆ ಎಸ್‌ಪಿ ಹುದ್ದೆಯಲ್ಲಿ ಕೆಲಸ ಮಾಡಿದ ಇವರು, ಪ್ರಸ್ತುತ ಆಂತರಿಕ ಭದ್ರತಾ ವಿಭಾಗದ ಭಯೋತ್ಪದನಾ ತಡೆ ಕೇಂದ್ರದ […]
ತಂದೆಯಾದ ರೋಹಿತ್ ಶರ್ಮಾ

ನವದೆಹಲಿ: ಭಾರತ ಟೆಸ್ಟ್ ಕ್ರಿಕೆಟ್ ತಂಡದ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಅವರು ಭಾನುವಾರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಭಾನುವಾರ ಮುಂಬೈಗೆ ವಾಪಸಾಗಿದ್ದು ಜನವರಿ ಮೂರರಿಂದ ಸಿಡ್ನಿಯಲ್ಲಿ ನಡೆಯಲಿರುವ ಮೂರನೇ ಟೆಸ್ಟ್‌ಗೆ ಅಲಭ್ಯರಾಗಿದ್ದಾರೆ. ಜನವರಿ 12ರಂದು ಆರಂಭವಾಗಲಿರುವ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಯಲ್ಲಿ ಅವರು ಆಡಲಿದ್ದಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.
ಖ್ಯಾತ ಹಿರಿಯ ನಟ ‘ಅಂಕಲ್ ಲೋಕನಾಥ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಹಿರಿಯ ನಟ ಅಂಕಲ್ ಲೋಕನಾಥ್(89) ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಸಾವಿನ ಸುದ್ದಿ ಕನ್ನಡ ಚಿತ್ರರಂಗಕ್ಕೆ ಬರಸಿಡಿಲಿನಂತೆ ಬಡಿದಿದೆ. ಸುಮಾರು 1000ಕ್ಕೂ ಹೆಚ್ಚು ನಾಟಕಗಳು 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಲೋಕನಾಥ್ ಇಂದು ಕೇವಲ ನೆನಪು ಮಾತ್ರ. ‘ಗೆಜ್ಜೆಪೂಜೆ’, ‘ನಾಗರಹಾವು’, ‘ಭೂತಯ್ಯನ ಮಗ ಅಯ್ಯು’, ‘ಬಂಗಾರದ ಪಂಜರ’, ‘ಮಿಂಚಿನ ಓಟ’ ಸೇರಿದಂತೆ ಹಲವು ಚಿತ್ರಗಳಲ್ಲಿ ಹಲವು ಪಾತ್ರಗಳಿಗೆ ಲೋಕನಾಥ್ ಜೀವ ತುಂಬಿದ್ದರು. ಲೋಕನಾಥ್ ನಿಧನಕ್ಕೆ ಸ್ಯಾಂಡಲ್ ವುಡ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ.
ಹೊಸ ವರ್ಷಕ್ಕೆ – ಎಲ್‍ಪಿಜಿ ಸಿಲಿಂಡರ್ ಬೆಲೆ ಭಾರೀ ಇಳಿಕೆ

ನವದೆಹಲಿ: ಗೃಹ ಬಳಕೆ ಸಬ್ಸಿಡಿ ಸಹಿತ ಅಡುಗೆ ಅನಿಲ ಸಿಲಿಂಡರ್ ದರ ರೂ.5.91 ಇಳಿಕೆಯಾಗಿದೆ. ಬೆಲೆ ಇಳಿಕೆಯಾಗುವ ಮೂಲಕ ಜನರಿಗೆ ಹೊಸ ವರ್ಷಕ್ಕೆ ಗಿಫ್ಟ್ ಸಿಕ್ಕಿದಂತಾಗಿದೆ. ಡಿಸೆಂಬರ್ ತಿಂಗಳಲ್ಲಿ ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು 2ನೇ ಬಾರಿ ಇಳಿಕೆ ಮಾಡಿದ್ದು, ಡಿ.1 ರಂದು ರೂ.6.52 ಕಡಿತಗೊಳಿಸಿತ್ತು. ಇದರೊಂದಿಗೆ ರೂ.12.43 ಒಂದೇ ತಿಂಗಳಿನಲ್ಲಿ ಕಡಿಮೆ ಆಗಿದೆ. ಜೂನ್ ನಿಂದ ನವೆಂಬರ್ ತಿಂಗಳ ಅವಧಿಯಲ್ಲಿ ತಿಂಗಳಿನಿಂದ ಸತತ 6 ಬಾರಿ ರೂ.14.13 ಹೆಚ್ಚಳವಾಗಿತ್ತು. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಎಲ್‍ಪಿಜಿ ಅನಿಲದ ಬೆಲೆ […]