ಕಣ್ಮರೆಯಾಗಿರುವ ಮೀನುಗಾರರು ಸುರಕ್ಷಿತವಾಗಿ ವಾಪಸ್ಸು ಬರಲೆಂದು ಮಸೀದಿಯಲ್ಲಿ ಪ್ರಾರ್ಥನೆ
ಮಲ್ಪೆ: ಕಳೆದ 20 ದಿನಗಳಿಂದ ಕಣ್ಮರೆಯಾಗಿರುವ ಏಳು ಮಂದಿ ಮೀನುಗಾರರು ಸುರಕ್ಷಿತವಾಗಿ ಹಿಂದಿರುಗಿ ಬರಲೆಂದು ಮಲ್ಪೆಯ ಸಯ್ಯದೀನ್ ಅಬೂಬಕರ್ ಸಿದ್ದೀಕ್ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ಜುಮಾ ನಮಾಝಿನ ಖುತ್ಬಾದಲ್ಲಿ ವಿಶೇಷವಾಗಿ ಪ್ರಾರ್ಥನೆ ಮಾಡಲಾಯಿತು. ಮಸೀದಿಯ ಇಮಾಮ್ ಮೌಲಾನ ಇಮ್ರಾನುಲ್ಲಾ ಖಾನ್ ಮನ್ಸೂರಿ ‘ಮಾನವೀಯ ಹಕ್ಕುಗಳು’ ಎಂಬ ವಿಷಯದ ಕುರಿತ ಖುತ್ಬಾ ಪ್ರವಚನದಲ್ಲಿ ಮೀನುಗಾರಿಕೆ ತೆರಳಿದ್ದ ವೇಳೆ ನಾಪತ್ತೆಯಾಗಿರುವ ಎಲ್ಲ ಮೀನುಗಾರರು ಸುರಕ್ಷಿತವಾಗಿ ಮನೆ ಸೇರಲು ಪ್ರಾರ್ಥನೆ ಮಾಡಿದರು. ನಾಪತ್ತೆಯಾಗಿರುವ ಮೀನುಗಾರರು ಆದಷ್ಟು ಬೇಗ ನಮ್ಮೊಂದಿಗೆ ಸೇರಿಕೊಳ್ಳಲಿ. ಮಾನವರೆಲ್ಲರು ಪರಸ್ಪರ […]
ಹಿಂದೂ ಧರ್ಮದ ಸಂಪ್ರದಾಯಗಳನ್ನು ಬದಲಾವಣೆ ಮಾಡುವ ಅಧಿಕಾರ ಯಾವುದೇ ಸರಕಾರಕ್ಕೂ ಇಲ್ಲ: ಪೇಜಾವರ ಶ್ರೀ
ಉಡುಪಿ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳದ ಕಮ್ಯೂನಿಸ್ಟ್ ಸರಕಾರ ನ್ಯಾಯಾಲಯದ ತೀರ್ಮಾನವನ್ನು ಇಟ್ಟುಕೊಂಡು, ಹಠಮಾರಿ ಧೋರಣೆ ತೋರುತ್ತಿರುವುದು ಸರಿಯಲ್ಲ. ಬಹುಸಂಖ್ಯಾತ ಹಿಂದೂಗಳ ಅಭಿಪ್ರಾಯಕ್ಕೆ ಮನ್ನಣೆ ನೀಡಿ, ತಲತಲಾಂತರದಿಂದ ಶಬರಿಮಲೆಯಲ್ಲಿ ಆಚರಿಸಿಕೊಂಡು ಬರುತ್ತಿರುವ ಸಂಪ್ರದಾಯವನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು. ಶುಕ್ರವಾರ ಪೇಜಾವರ ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ವಿಚಾರಗಳಲ್ಲಿ ನ್ಯಾಯಾಲಯ ಅಥವಾ ಸರಕಾರ ತೀರ್ಮಾನ ಕೈಗೊಳ್ಳುವುದು ಸರಿಯಲ್ಲ. ಈ ವಿಚಾರದಲ್ಲಿ ಜನರ ಭಾವನೆಗೆ ಬೆಲೆ ಕೊಡಬೇಕು. ಹಿಂದೂ ಧರ್ಮದ ಸಂಪ್ರದಾಯಗಳನ್ನು […]
ಸುವರ್ಣ ತ್ರಿಭುಜ ಬೋಟ್ ಕೂಡಲೇ ಪತ್ತೆಹಚ್ಚುವಂತೆ ಕ್ರಮ:ರಾಜನಾಥ ಸಿಂಗ್
ಉಡುಪಿ: ಮಲ್ಪೆಯಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ “ಸುವರ್ಣ ತ್ರಿಭುಜ” ಎಂಬ ಬೋಟ್ ನಾಪತ್ತೆಯಾಗಿದ್ದು ಇದರ ಪತ್ತೆ ಹಚ್ಚುವ ಕಾರ್ಯಕ್ಕಾಗಿ ಹಾಗೂ ಮತ್ತಷ್ಟು ಸಹಕಾರಕ್ಕಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಇವರನ್ನು ಭೇಟಿ ಮಾಡಲಾಯಿತು. ಮಾನ್ಯ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಇವರ ನೇತೃತ್ವದಲ್ಲಿ ನಡೆದ ಈ ಭೇಟಿಯಲ್ಲಿ ಮಂಗಳೂರು ಸಂಸದರಾದ ನಳಿನ್ ಕುಮಾರ್ ಕಟೀಲು, ಉಡುಪಿ ಶಾಸಕರಾದ ಕೆ ರಘುಪತಿ ಭಟ್, ಕಾಪು ಶಾಸಕರಾದ ಲಾಲಾಜಿ ಮೆಂಡನ್ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ […]
18 ರಿಂದ 30 ವರ್ಷದ ಯುವಕರು ಕುಡಿತದ ಚಟಕ್ಕೆ ಬಿದ್ದಿರುವ ವ್ಯವಸ್ಥೆ ಬಂದಿದೆ: ಕುದಿ ವಸಂತ್ ಶೆಟ್ಟಿ
ಹಿರಿಯಡಕ : ಅಪ್ಪ, ಅಮ್ಮನ ಜವಾಬ್ದಾರಿ ಮಕ್ಕಳಿಗೆ ಶಿಕ್ಷಣವನ್ನು ಕೊಡುವುದು. ಆ ಶಿಕ್ಷಣವನ್ನು ಸರಿಯಾಗಿ ಕೊಡುವುದರ ಜೊತೆಗೆ ಮಗುವಿಗೆ ತಿಳಿವಳಿಕೆ ಕೊಡುವಂತಹ ವಾತಾವರಣ ಬೇಕು. . 18 ರಿಂದ 30 ವರ್ಷದ ಯುವಕರು ಕುಡಿತದ ಚಟಕ್ಕೆ ಬಿದ್ದಿರುವ ವ್ಯವಸ್ಥೆ ಬಂದಿದೆ ಎಂದರೆ ತಂದೆ ತಾಯಿ ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದೇ ಅರ್ಥ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಕುದಿ ಶ್ರೀ ವಿಷ್ಣುಮೂರ್ತಿ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಕುದಿ ವಸಂತ್ ಶೆಟ್ಟಿ ಹೇಳಿದ್ದಾರೆ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ […]
ಕುಂದಾಪುರ: ಗ್ರಾ.ಪಂ ಚುನಾವಣೆ: ಅರಳಿದ “ಕಮಲ”
ಕುಂದಾಪುರ: ಜ.೨ ರಂದು ಗಂಗೊಳ್ಳಿ ಗ್ರಾಮ ಪಂಚಾಯಿತಿಯ ೩೩ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶುಕ್ರವಾರ ಹೊರಬಿದ್ದಿದು, ಒಟ್ಟು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ೨೩, ಕಾಂಗ್ರೆಸ್ ಬೆಂಬಲಿತ ೬ ಹಾಗೂ ಎಸ್ಡಿಪಿಐ ಬೆಂಬಲಿತ ೪ ಮಂದಿ ಗೆಲುವು ಸಾಧಿಸಿದ್ದಾರೆ. ಪಂಚಾಯಿತಿ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಬಿಜೆಪಿ ಬೆಂಬಲಿತರು ಪಂಚಾಯಿತಿಯ ಅಧಿಕಾರ ಗದ್ದುಗೆ ಹಿಡಿದಿದ್ದಾರೆ. ಈ ಹಿಂದಿನ ಚುನಾವಣೆಯಲ್ಲಿ ೧೯ ಸ್ಥಾನ ಗಳಿಸಿದ್ದ ಬಿಜೆಪಿ ಈ ಬಾರಿ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ. ಕಳೆದ ಬಾರಿ ೧೪ ಸ್ಥಾನವನ್ನು […]