ಯಶ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಪ್ರಯತ್ನ

ರಾಕಿಂಗ್ ಸ್ಟಾರ್ ಯಶ್ ಅವರನ್ನು ನೋಡಲು ಬಿಡಲಿಲ್ಲ ಎಂಬ ಕಾರಣಕ್ಕೆ ಹೊಸಕೆರೆ ಹಳ್ಳಿಯ ನಿವಾಸದ ಎದುರು ಅಭಿಮಾನಿಯೊಬ್ಬ ಆತ್ಮಹತ್ಯೆ ಪ್ರಯತ್ನ ಮಾಡಿರುವ ಘಟನೆ ಇಂದು ನಡೆದಿದೆ. ರವಿ ಎಂಬ ಅಭಿಮಾನಿ ಪೆಟ್ರೋಲ್ ಸುರಿದು ಬೆಂಕಿ ಹಂಚಿಕೊಂಡು ತೀವ್ರ ಗಾಯಗೊಂಡಿದ್ದರು. ನಂತರ ಆತನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ, ಆ ಅಭಿಮಾನಿಯನ್ನು ನೋಡಲು ಸ್ವತಃ ಯಶ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಅಂಬರೀಶ್ ನಿಧನದ ಹಿನ್ನೆಲೆ ಈ ವರ್ಷ ಹುಟ್ಟುಹಬ್ಬ ಆಚರಿಸುವುದು ಬೇಡ ಎಂದು ಯಶ್ ಅವರು […]

ಉಡುಪಿ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ: ಡಿಸಿ 

ಉಡುಪಿ: ನಾಳೆ (ಜ.9) ನಡೆಯುವ ಸಾರ್ವತ್ರಿಕ ಮುಷ್ಕರದ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸ್ಪಷ್ಟಪಡಿಸಿದ್ದಾರೆ.

ಮೀನುಗಾರರ ಶೋಧಕ್ಕಾಗಿ ಇಸ್ರೋಗೆ ಮೊರೆ: ಎಸ್ಪಿ ನಿಂಬರಗಿ

ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆ ತೆರಳಿ ನಾಪತ್ತೆಯಾಗಿರುವ ಸುವರ್ಣ ತ್ರಿಭುಜ ಬೋಟ್ ಹಾಗೂ ಏಳು ಮಂದಿ ಮೀನುಗಾರರ ಶೋಧ ಕಾರ್ಯಾಚರಣೆಗಾಗಿ ಜಿಲ್ಲಾ ಪೊಲೀಸ್ ಇಲಾಖೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ)ದ ಸಹಾಯ ಕೋರಿದೆ. ಉಪಗ್ರಹದ ಮೂಲಕ ಶೋಧಕಾರ್ಯ ನಡೆಸುವಂತೆ ಇಸ್ರೋ, ಹೈದರಾಬಾದ್‌ನ ಇಂಡಿಯನ್ ನ್ಯಾಷಶಲ್ ಸೆಂಟರ್ ಫಾರ್ ಓಶಿಯನ್ ಇನ್ಫಾರ್ಮೇಶನ್ ಸಿಸ್ಟಮ್‌ (ಐಎನ್‌ಸಿಓಐಎಸ್) ಮತ್ತು ಬೆಂಗಳೂರಿನ ಕರ್ನಾಟಕ ರಾಜ್ಯ ರಿಮೋಟ್ ಸೆನ್ಸಿಂಗ್ ಅಪ್ಲಿಕೇಶನ್ ಸೆಂಟರ್‌ಗೆ ಮಾಹಿತಿ ರವಾನಿಸಲಾಗಿದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ […]

ಉಡುಪಿ: ಕೇಂದ್ರದ ಜನವಿರೋಧಿ ನೀತಿ ಖಂಡಿಸಿ ಪ್ರತಿಭಟನಾ ಮೆರವಣಿಗೆ

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಇಂದು ಕರೆನೀಡಿದ್ದ ಸಾರ್ವತ್ರಿಕ ಮುಷ್ಕರದ ಪ್ರಯುಕ್ತ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ(ಜೆಸಿಟಿಯು) ಉಡುಪಿ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಉಡುಪಿಯಲ್ಲಿ ಬೃಹತ್  ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಅಜ್ಜರಕಾಡಿನ ಎಲ್‌ಐಸಿ ಕಚೇರಿಯ ಆವರಣದಿಂದ ಹೊರಟ ಕಾರ್ಮಿಕರ ಬೃಹತ್ ಮೆರವಣಿಗೆಯು ಜೋಡುಕಟ್ಟೆ, ಕೆ.ಎಂ.ಮಾರ್ಗ ಮೂಲಕ ಸರ್ವಿಸ್ ಬಸ್ ನಿಲ್ದಾಣದ ಮಹಾತ್ಮ ಗಾಂಧಿ ಪ್ರತಿಮೆ ಸುತ್ತುವರಿದು ಬಿಎಸ್‌ಎನ್‌ಎಲ್ ಕಛೇರಿ ರಸ್ತೆಯಾಗಿ ಕಾರ್ಪೋರೇಶನ್ ಬ್ಯಾಂಕಿನ ಕಚೇರಿ […]

ಭಾರತ್ ಬಂದ್ :ಉಡುಪಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

ಉಡುಪಿ:  ವಿವಿಧ ಕಾರ್ಮಿಕ ಸಂಘಟನೆಗಳು ಎರಡು ದಿನ ಕರೆ ನೀಡಿರುವ ಭಾರತ್ ಬಂದ್ ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉಡುಪಿ ನಗರ ಸೇರಿದಂತೆ ಜಿಲ್ಲೆಯ ಉಳಿದೆಡೆಗಳಲ್ಲಿ ಮಂಗಳವಾರ ಶಾಂತಿಯುತ ಬಂದ್ ನಡೆಯಿತು. ಮುಂಜಾನೆ ಉಡುಪಿಯಿಂದ ಧರ್ಮಸ್ಥಳಕ್ಕೆ 1, ಕಾರ್ಕಳ 3 ಹಾಗೂ ಮಂಗಳೂರಿಗೆ 7 ಬಸ್ ಗಳು ತೆರಳಿದ್ದವು. 8 ಗಂಟೆಯ ಬಳಿಕ ಪ್ರತಿಭಟನೆಯ ಕಾವು ಹೆಚ್ಚಾದಂತೆ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತು. ಜನಜೀವನ ಅಸ್ತವ್ಯಸ್ತ: ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬಸ್ ಸಂಚಾರ ಸಂಪೂರ್ಣ […]