ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿದ್ದ ಜಾವಾ ಬೈಕುಗಳು;ಇದೀಗ ಮತ್ತೆ ಶುರುವಾಗಲಿದೆ ಜಾವಾ ಹವಾ

80-90ರ ದಶಕದಲ್ಲಿ ಭಾರತದ ರಸ್ತೆಗಳಲ್ಲಿ ಅಬ್ಬರಿಸಿದ್ದ ಜಾವಾ ಬೈಕುಗಳು, ಮತ್ತೆ  ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ದಶಕಗಳ ಹಿಂದೆ ಬೈಕ್ ಪ್ರಿಯರಲ್ಲಿ ಹುಚ್ಚು ಹಿಡಿಸಿದ್ದ, ಜಾವಾ ಬೈಕುಗಳನ್ನು ಜಾವಾ ಮೋಟಾರ್ ಸೈಕಲ್ ಕಂಪನಿ ಪುನಃ ಮಾರುಕಟ್ಟೆಗೆ ತರುವಲ್ಲಿ ಯಶಸ್ವಿಯಾಗಿದೆ. ಕಂಪನಿ ತನ್ನ ನೂತನ ಜಾವಾ, ಜಾವಾ 42 ಹಾಗೂ ಜಾವಾ ಪೆರಾಕ್ ಮಾದರಿಯ ಮೂರು ಆವೃತ್ತಿಗಳನ್ನು ಇತ್ತಿಚೆಗಷ್ಟೆ  ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಜಾವಾ ಕಂಪನಿಯು ಗತಕಾಲದ ವೈಭವವನ್ನು ಕಾಪಾಡಲು ತನ್ನ […]

ಕುಂದಾಪುರ: ಮಂಗನ ಕೊಳೆತ ಶವ ಪತ್ತೆ

 ಕುಂದಾಪುರ: ಕಾಡಂಚಿನ ಪ್ರದೇಶಗಳಲ್ಲಿ ನಿಗೂಢವಾಗಿ ಸಾವನ್ನಪ್ಪುತ್ತಿರುವ ಮಂಗಗಳ ಸರಣಿ ಸಾವಿನ ಬೆನ್ನಲ್ಲೇ ಇದೀಗ ತಾಲೂಕಿನ ಕಂಡ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಾಶಿ ಕಾಡಿನಲ್ಲಿ ಕೊಳೆತ ಸ್ಥಿತಿಯಲ್ಲಿ ಇನ್ನೊಂದು ಮಂಗನ ಕಳೆಬರ ಪತ್ತೆಯಾಗಿದೆ.  ಸ್ಥಳೀಯ ನಿವಾಸಿ ಫ್ರಾಂಕ್ಲಿನ್‌ಡೇಸಾ ಎನ್ನುವವರ ಕಾಡಿನಲ್ಲಿ ಮಂಗನ ಕಳೆಬರವನ್ನು ನೋಡಿ ಸ್ಥಳೀಯ ಗ್ರಾಮ ಪಂಚಾಯಿತಿಗೆ ಸುದ್ದಿ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿಯಿಂದ ಅರಣ್ಯ ಇಲಾಖೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ಅಗತ್ಯ ಕ್ರಮಕ್ಕಾಗಿ ಮನವಿ ಮಾಡಲಾಗಿದ್ದು, ಸ್ಥಳಕ್ಕೆ ಬಂದ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನಾಗಭೂಷಣ್ ಉಡುಪ, […]

ಮಧುಕರ ಶೆಟ್ಟಿಯವರಿಗೆ ಕೇವಲ ಶಬ್ದಗಳಿಂದ ಶ್ರದ್ದಾಂಜಲಿ ಅರ್ಪಿಸಲು ಸಾಧ್ಯವಿಲ್ಲ :  ಅಜಯ್ ಕುಮಾರ್ ಸಿಂಗ್

ಕುಂದಾಪುರ: ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ಮಧುಕರ ಶೆಟ್ಟಿಯವರಿಗೆ ಕೇವಲ ಶಬ್ದಗಳಿಂದ ಶ್ರದ್ದಾಂಜಲಿ ಅರ್ಪಿಸಲು ಸಾಧ್ಯವಿಲ್ಲ. ಅವರು ನನ್ನ ಹೃದಯಕ್ಕೆ ಹತ್ತಿರವಾಗಿದ್ದವರು. ದೇಶದ ಪೊಲೀಸ್ ವ್ಯವಸ್ಥೆಯ ಹೊಳೆಯುವ ನಕ್ಷತ್ರದಂತಿದ್ದರು, ಎಂದು ರಾಜ್ಯ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಅಜಯ್ ಕುಮಾರ್ ಸಿಂಗ್ ಹೇಳಿದರು. ಕುಂದಾಪುರ ಸಮೀಪದ ಅಂಕದಕಟ್ಟೆಯ ಸಹನಾ ಕನ್ವೆನ್ಶನ್ ಸೆಂಟರ್‌ನಲ್ಲಿ ಶುಕ್ರವಾರ ನಡೆದ ಡಾ.ಕೆ.ಮಧುಕರ ಶೆಟ್ಟಿ ಪ್ರಾರ್ಥನಾ ಸಭೆಯಲ್ಲಿ ಅವರು ಮಾತನಾಡಿದರು. ಮಧುಕರ ಶೆಟ್ಟರ ಸಾವು ನಿಗೂಢ:              […]

ಜ. 14: ಉಡುಪಿ ನಗರದ ಮುಖ್ಯ ರಸ್ತೆಗಳಲ್ಲಿ ನೂರಾರು ದೀಪಗಳನ್ನು ಬೆಳಗಿಸುವ ‘ಧರ್ಮ ರಕ್ಷ ಜ್ವಾಲಾ’ ಕಾರ್ಯಕ್ರಮ

ಉಡುಪಿ: ಶಬರಿಮಲೆ ದೇಗುಲದ ಪಾವಿತ್ರ್ಯತೆಯನ್ನು ಕಾಪಾಡುವ ದೃಷ್ಟಿಯಿಂದ ಮಕರ ಸಂಕ್ರಮಣದ ಅಂಗವಾಗಿ ಉಡುಪಿ ನಗರದ ಮುಖ್ಯ ರಸ್ತೆಗಳಲ್ಲಿ ನೂರಾರು ದೀಪಗಳನ್ನು ಬೆಳಗಿಸುವ ಕಾರ್ಯಕ್ರಮ ‘ಧರ್ಮ ರಕ್ಷ ಜ್ವಾಲಾ’ ಅನ್ನು ಜ. 14ರಂದು ಸಂಜೆ 6.20ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಧರ್ಮ ಫೌಂಡೇಶನ್ ಅಧ್ಯಕ್ಷ ಹರಿಯಪ್ಪ ಕೋಟ್ಯಾನ್ ತಿಳಿಸಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕರ ಸಂಕ್ರಮಣದಂದು ಶಬರಿಮಲೆ ಸ್ವಾಮಿ ಅಯ್ಯಪ್ಪನ ಕ್ಷೇತ್ರದಲ್ಲಿ ಸಂಜೆ 6.42 ಕ್ಕೆ ಮಕರ ಜ್ಯೋತಿ ಬೆಳಗಲಿದೆ. ಪಂದಳ ರಾಜನ ಆದೇಶದಂತೆ ಮತ್ತು ಧರ್ಮ ಫೌಂಡೇಶನ್‍ನ ವತಿಯಿಂದ ದೇಶದಾದ್ಯಂತ ಕೋಟಿ ಕೋಟಿ […]

ನಾಪತ್ತೆಯಾದ ಮೀನುಗಾರರ ಬಗ್ಗೆ ಸುಳಿವು, ಗೃಹ ಸಚಿವರ ಹೇಳಿಕೆ ಸತ್ಯಕ್ಕೆ ದೂರ – ಯಶ್ ಪಾಲ್ ಸುವರ್ಣ

ಉಡುಪಿ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಬೋಟಿನ ಕುರಿತು ಸುಳಿವು ಲಭಿಸಿದೆ ಎಂದು ರಾಜ್ಯದ ಗೃಹ ಸಚಿವರು ಹೇಳಿರುವ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ದಕ ಮತ್ತು ಉಡುಪಿ ಜಿಲ್ಲಾ ಮೀನುಗಾರ ಫೇಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಹೇಳಿದ್ದಾರೆ. ಅವರು ಶುಕ್ರವಾರ ಉಡುಪಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ನಾಪತ್ತೆಯಾದ ಬೋಟನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರದ ವಿಶೇಷವಾದ ಪ್ರಯತ್ನಗಳು ಮುಂದುವರೆದಿದ್ದು ವಿಶೇಷವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ನಿಟ್ಟಿನಲ್ಲಿ […]