ಡಾ. ಬಿ. ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಸಾರ್ವಕಾಲಿಕ ಮಾರ್ಗದರ್ಶಿ ಸೂತ್ರಗಳಾಗಿವೆ: ಲಾಲಾಜಿ ಆರ್. ಮೆಂಡನ್
ಉಡುಪಿ: ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್‍ರವರ ವಿಚಾರಧಾರೆಗಳು ಸಾರ್ವಕಾಲಿಕ ಮಾರ್ಗದರ್ಶಿ ಸೂತ್ರಗಳಾಗಿದ್ದು, ಪ್ರಸ್ತುತ ಸನ್ನಿವೇಶದಲ್ಲಿ ಈ ಕುರಿತು ಅವಲೋಕಿಸುವ ಅನಿವಾರ್ಯತೆಯಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಭಿಪ್ರಾಯಪಟ್ಟರು. ಅವರು ಮಂಗಳವಾರ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಡಾ. ಬಿ. ಆರ್. ಅಂಬೇಡ್ಕರ್‍ರವರ ವಿಚಾರಧಾರೆ ಕುರಿತು […]
ಮರಳು ಹೋರಾಟ ಸಮಿತಿಯ ಧರಣಿಯಲ್ಲಿ ಸಚಿವ ರಾಜಶೇಖರ ಪಾಟೀಲ್ ಹೇಳಿಕೆ ಕರಾವಳಿ ಭಾಗಕ್ಕೆ ಪ್ರತ್ಯೇಕ ಮರಳು ನೀತಿ
ಉಡುಪಿ: ಜನರಿಗೆ ಅತೀ ಕಡಿಮೆ ದರದಲ್ಲಿ ಸುಲಭವಾಗಿ ಮರಳು ಸಿಗಬೇಕು. ಆ ನಿಟ್ಟಿನಲ್ಲಿ ಕರಾವಳಿಯಮೂರು ಜಿಲ್ಲೆಗಳಿಗೆ ಪ್ರತ್ಯೇಕ ಮರಳು ನೀತಿಯನ್ನು ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್ ಹೇಳಿದರು. ಅವರು ಮಂಗಳವಾರ ಜಿಲ್ಲೆಯಲ್ಲಿ ಪೂರ್ಣ ಪ್ರಮಾಣದ ಮರಳುಗಾರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ನೇತೃತ್ವದಲ್ಲಿ ಮರಳು ಹೋರಾಟ ಸಮಿತಿ ವತಿಯಿಂದ ನಡೆಯುತ್ತಿರುವ ಎರಡನೇ ದಿನದ ಧರಣಿಯಲ್ಲಿ ಭಾಗವಹಿಸಿ ಹೋರಾಟಗಾರರ ಸಮಸ್ಯೆಗಳನ್ನು ಆಲಿಸಿ ಮಾತನಾಡಿದರು. ಈಗಾಗಲೇ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅದಿಕಾರಿಗಳೊಂದಿಗೆ […]