ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿ ಸಾವು

ಉಡುಪಿ: ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ಲಚ್ಚು ಪೂಜಾರಿ (77) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.         ReplyForward

ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ: ಅಧ್ಯಕ್ಷರಾಗಿ ಕಾವ್ರಾಡಿ ಪ್ರದೀಪ್‍ಕುಮಾರ ಶೆಟ್ಟಿ.

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ನಿಯುಕ್ತರಾಗಿರುವ ಕಾವ್ರಾಡಿ ಪ್ರದೀಪ್ ಕುಮಾರ ಶೆಟ್ಟಿ ಅವರು ಬುಧವಾರ ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜನಾರ್ಧನ್ ತೋನ್ಸೆ ಅವರಿಂದ ಅಧಿಕಾರ ಸ್ವೀಕರಿಸಿದ್ದಾರೆ. ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಕೆ.ಗೋಪಾಲ ಪೂಜಾರಿ ಅವರ ಶಿಫಾರಾಸಿನನ್ವಯ ಈ ನೇಮಕಾತಿ ನಡೆದಿದೆ. ಹಿಂದೆ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಪ್ರದೀಪ್‍ಶೆಟ್ಟಿ ರಾಜಕೀಯ ಕ್ಷೇತ್ರವಲ್ಲದೆ, ಸಹಕಾರಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿಯೂ ಸಕ್ರೀಯರಾಗಿದ್ದಾರೆ. ಅಧಿಕಾರ […]

ಉಡುಪಿ ದೂರಸಂಪರ್ಕ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರ ಮುಷ್ಕರ

ಉಡುಪಿ: ಉಡುಪಿ ದೂರಸಂಪರ್ಕ ವಿಭಾಗ (ಕುಂದಾಪುರ, ಉಡುಪಿ, ಕಾರ್ಕಳ) ದಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರ ಮೂರು ತಿಂಗಳ ವೇತನ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಬಿಎಸ್‌ಎನ್‌ಎಲ್‌ ಗುತ್ತಿಗೆ ನೌಕರರ ಒಕ್ಕೂಟದ ನೇತೃತ್ವದಲ್ಲಿ ಗುತ್ತಿಗೆ ನೌಕರರು ಶುಕ್ರವಾರದಿಂದ ಕೆಲಸ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿಯ ಮುಷ್ಕರ ಆರಂಭಿಸಿದರು. ಉಡುಪಿ ಬಿಎಸ್‌ಎನ್‌ಎಲ್‌ ಕಚೇರಿಯಲ್ಲಿ ದುಡಿಯುತ್ತಿರುವ ಗುತ್ತಿಗೆ ನೌಕರರು ಕೆಲಸ ಸ್ಥಗಿತಗೊಳಿಸಿ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಿದರು. ಉಡುಪಿ ದೂರು ಸಂಪರ್ಕ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಗುತ್ತಿಗೆ ನೌಕರರಿಗೆ ಅಕ್ಟೋಬರ್‌ನಿಂದ ವೇತನ […]

ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಲಚ್ಚು ಪೂಜಾರಿ ಸಾವು

ಉಡುಪಿ: ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ ಲಚ್ಚು ಪೂಜಾರಿ (77) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.

“ಪಶ್ಚಿಮ” ಅನ್ನೋ ಭರವಸೆಯ ಆಶ್ರಯಧಾಮ: ನಿರಾಶ್ರಿತರಿಗೆ ಬೆಳಕಾದ ಕುಡ್ಲದ ದಂಪತಿಯ ಕತೆ ಇದು

ಬದುಕಿನಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ ಅಲೆಕ್ಸ್ ಉತ್ತಮ ಕರಾಟೆಪಟು. ಇವರ ೪೦ ನೇ ವಯಸ್ಸಿನಲ್ಲಿ ಮತಿಭ್ರಮಣೆ ಪ್ರಾರಂಭವಾಯಿತು. ಕುಟುಂಬದವರು ಕೋಣೆಯೊಳಗೆ ಕೂಡಿ ಹಾಕಿದರು. ಒಬ್ಬ ಸಾಮಾಜಿಕ ಕಾರ್ಯಕರ್ತರು ಇವರನ್ನು ಗುರುತಿಸಿ ಪಶ್ಚಿಮಕ್ಕೆ ಕರೆ ತಂದರು. ಇವರು ಸ್ಕಿಜ಼ೋಫ್ರೀನಿಯಾ ಎಂಬ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು. ಸೂಕ್ತ ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆಗಳೊಂದಿಗೆ ವಿಶೇಷ ಕಾಳಜಿ ವಹಿಸಲಾಯಿತು. ಈಗ ಸಂಸ್ಥೆಯ ದ್ವಾರಪಾಲಕರಾಗಿದ್ದು, ಹಾಲು, ದಿನಪತ್ರಿಕೆಗಳನ್ನು ಸಮೀಪದ ಅಂಗಡಿಯಿಂದ ತರುವ ಜವಾಬ್ದಾರಿ ಇವರದ್ದು. ಇಂತಹ ಅನೇಕ ನಿರಾಶ್ರಿತರು, ಕುಟುಂಬ ಇದ್ದೂ ಇಲ್ಲದಂತಾದವರು, ದಿವ್ಯಾಂಗರು, […]