ಹಕ್ಕು ಪತ್ರ ವಿತರಿಸುವ ಕಾರ್ಯ ವೇಗ ಪಡೆದುಕೊಂಡಿದೆ:ಸಚಿವೆ ಜಯಮಾಲಾ

ಕುಂದಾಪುರ: ಸರ್ಕಾರಿ ಜಾಗದಲ್ಲಿ ವಾಸಿಸುತ್ತಿರುವ ಜನರಿಗೆ ೯೪ಸಿ ಕಾಯ್ದೆಯಡಿ ಹಕ್ಕುಪತ್ರ ನೀಡುವ ಈ ಹಿಂದಿನ ಕಾಂಗ್ರೆಸ್ ಮತ್ತು ಈಗಿನ ಸಮ್ಮಿಶ್ರ ಸರ್ಕಾರದ ನಿರ್ಧಾರದಂತೆ ೯೪ಸಿ ಅಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸುವ ಕಾರ್ಯ ಭರದಿಂದ ನಡೆಯುತ್ತಿದೆ. ತನ್ಮೂಲಕ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಹೇಳಿದರು. ಕುಂದಾಪುರ ಹಾಗೂ ಬೈಂದೂರು ತಾಲೂಕು ಮತ್ತು ಜಿಲ್ಲಾಡಳಿತದ ವತಿಯಿಂದ ತ್ರಾಸಿಯ ಅಣ್ಣಪ್ಪಯ್ಯ ಸಭಾಭವನದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೈಂದೂರು ತಾಲೂಕು […]

 ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡ ಉದ್ಘಾಟನೆ

ಕುಂದಾಪುರ: ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಇನ್ನು ಮುಂದೆ ಜನರಿಗೆ ಲಭ್ಯವಾಗಲಿದೆ. ಈ ಭಾಗದ ಜನರ ಬಹುವರ್ಷಗಳ ಕನಸು ಇಂದು ನನಸಾಗಿದೆ. ಸುಸಜ್ಜಿತವಾದ ಆರೋಗ್ಯ ಕೇಂದ್ರವನ್ನು ಇಲ್ಲಿನ ಜನರು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಹೇಳಿದರು. ಅವರು ಸೋಮವಾರ ಹಟ್ಟಿಯಂಗಡಿ ಕ್ರಾಸ್ ಬಳಿ ನೂತನವಾಗಿ ನಿರ್ಮಿಸಿರುವ ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. . ಪಟ್ಟಣದಲ್ಲಿ ಕಾರ್ಯ ನಿರ್ವಹಿಸುವ […]

ನೀವು ಇಚ್ಚಿಸಿದಂತೆ ಮಾತ್ರ ನೀವು ಸಂತೋಷವಾಗಿರುತ್ತೀರಿ ; ಇಂಟರ್‌ನೆಟ್‌ನಲ್ಲಿ ವೈರಲ್ ಆಗ್ತಿದೆ ಈ ಮುದ್ದು ಮಕ್ಕಳ ಸೆಲ್ಫಿ ಫೋಟೋ

ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಫೋಟೋಗಳು ಹಾಗೂ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಆದರೆ ಮುದ್ದಾದ ಮಕ್ಕಳು ಚಪ್ಪಲಿ ಹಿಡಿದು ಸೆಲ್ಫಿ ತೆಗೆದುಕೊಳ್ಳುತ್ತಿರುವ ವೈರಲ್ ಫೋಟೋವೊಂದು ಎಲ್ಲರ ಮನಸ್ಸು ಗೆಲ್ಲುತ್ತಿದೆ. ಐದು ಜನ ಮುದ್ದಾದ ಮಕ್ಕಳು ಚಪ್ಪಲಿ ನೋಡಿ ಸೆಲ್ಫಿಗೆ ಪೋಸ್ ನೀಡಿದ್ದಾರೆ. ಮಕ್ಕಳು ಸೆಲ್ಫಿಗೆ ಪೋಸ್ ನೀಡುವಾಗ ಅನಾಮಿಕ ವ್ಯಕ್ತಿಯೊಬ್ಬರು ಆ ಫೋಟೋವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಈ ವೈರಲ್ ಫೋಟೋವನ್ನು ಎಲ್ಲರೂ ತಮ್ಮ ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ. ವೈರಲ್ ಆಗಿರುವ ಈ ಫೋಟೋ ಎಲ್ಲಿ […]

ಟೆನ್ನೀಸ್ ಆಡುವ ಮೂಲಕ ಗಮನ ಸೆಳೆದ ಸಚಿವೆ ಜಯಾಮಾಲ

ಉಡುಪಿ ಅಜ್ಜರಕಾಡಿನಲ್ಲಿ ಇಂದು ನಡೆದ ಸಿಂಥೆಟಿಕ್ ಟೆನಿಸ್ ಒಳಾಂಗಣ ಕ್ರೀಡಾಂಗಣದ  ಉದ್ಘಾಟನಾ ಸಮಾರಂಭದಲ್ಲಿ ಟೆನ್ನಿಸ್ ಆಡುವ ಮೂಲಕ ಗಮನ ಸೆಳೆದರು. ಕ್ರೀಡಾಂಗಣ ವನ್ನು ಉದ್ಘಾಟಿಸಿದ ಕ್ರೀಡಾ ಸಚಿವ ರಹೀಂ ಖಾನ್ ಹಾಗೂ ಶಾಸಕ ರಘುಪತಿ ಭಟ್ ಟೆನ್ನಿಸ್ ಆಡಿದರು. ನಂತರ ಅಂಕಣಕ್ಕೆ ಇಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲ ರಾಕೆಟ್ ಹಿಡಿದು ಆಡಲು ಆರಂಭಿಸಿದರು.  ಸುಮಾರು10 ನಿಮಿಷಕಾಲ ಆಟವಾಡಿದ ಸಚಿವೆ ಕ್ರೀಡಾ ಸ್ಪೂರ್ತಿ ಮೆರೆದರು .  ಬಳಿಕ ನೂತನ […]

ಉದ್ಯಮಿ ಕೆ. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು 5 ಸಾಕ್ಷಿಗಳ ಹೇಳಿಕೆ

ಉಡುಪಿ: ಉದ್ಯಮಿ ಕೆ. ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು 5 ಸಾಕ್ಷಿಗಳ ಹೇಳಿಕೆ ಹಾಗೂ ವಿಚಾರಣೆ ನಡೆಯಿತು. ಸೋಮವಾರ 10 ಸಾಕ್ಷಿಗಳ ಹೇಳಿಕೆ ಪಡೆಯುವ ಬಗ್ಗೆ ಸಮನ್ಸ್ ನೀಡಿಲಾಗಿತ್ತು. ಆದರೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಚಂದ್ರಶೇಖರ್ ಎಂ.ಜೋಶಿ ಸಮ್ಮುಖದಲ್ಲಿ 5 ಮಂದಿ ಹೇಳಿಕೆ ಮಾತ್ರವೇ ಪಡೆಯಲಾಯಿತು. ಮಂಗಳವಾರವೂ ಉಳಿದ ಸಾಕ್ಷಿಗಳ ವಿಚಾರಣೆ ನಡೆಯಲಿದೆ. ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ವಿವಿಜ್ಞಾನ ವಿಭಾಗದ ಪ್ರೊ. ಉದಯ ಕುಮಾರ್, ಮೋಟಾರ್ ವಾಹನ ನಿರೀಕ್ಷಕ ಮಾರುತಿ […]