ಫೆ. 9 ಹಿರಿಯಡ್ಕ ಕಾಲೇಜು‌, ಹಿರಿಯ ವಿದ್ಯಾರ್ಥಿ ಸಂಘದ ವಾರ್ಷಿಕೋತ್ಸವ  ವಿವಿಧ ಸಾಧಕರಿಗೆ ಸಮ್ಮಾನ

ಉಡುಪಿ: ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡ್ಕ ಇದರ ಹತ್ತನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಫೆ. 9ರಂದು  ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ| ಸುಧಾಕರ್ ಶೆಟ್ಟಿ ನೆರವೇರಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲೆ ಡಾ| ನಿಕೇತನ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತಿತರರು ಭಾಗವಹಿಸಲಿದ್ದಾರೆ. ಸಭಾ ಕಾರ್ಯಕ್ರಮದ ಅನಂತರ […]

ಫೆ.9: ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಿಂದ ನೇರ ಫೋನ್ – ಇನ್ ಕಾರ್ಯಕ್ರಮ

ಉಡುಪಿ: ಫೆ.8 ರಂದು ಶುಕ್ರವಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು, ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನೇರ ಫೋನ್ – ಇನ್ ಕಾರ್ಯಕ್ರಮವನ್ನು ನಡೆಸಲಿರುತ್ತಾರೆ. ಸಾರ್ವಜನಿಕರು ನೇರ ಫೋನ್ ಇನ್ – ಕಾರ್ಯಕ್ರಮಕ್ಕೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಅಥವಾ ವಾಸಿಸುವ ಪ್ರದೇಶ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳೇನಾದರೂ ನಡೆಯುತ್ತಿದ್ದಲ್ಲಿ ಮಾಹಿತಿ ಅಥವಾ ತಮ್ಮ ಹಿಂದಿನ ಅರ್ಜಿ/ಪ್ರಕರಣಗಳ ಕುರಿತಾಗಿ ಮಾಹಿತಿ ಅಥವಾ ಪೊಲೀಸ್ ಇಲಾಖಾ ಕರ್ತವ್ಯಕ್ಕೆ ಸಂಬಂಧಪಟ್ಟಂತೆ ಸಲಹೆಗಳು ಹಾಗೂ ಪೊಲೀಸ್ ಇಲಾಖಾ ಕರ್ತವ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಬಹುದಾಗಿರುತ್ತದೆ. ನೇರ ಫೋನ್-ಇನ್ ಕಾರ್ಯಕ್ರಮಕ್ಕೆ ಕರೆ […]

ನೂತನ ಜಿಲ್ಲಾಧಿಕಾರಿ ‘ಹೆಪ್ಸಿಬಾ ರಾಣಿ’ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಹೆಪ್ಸಿಬಾ ರಾಣಿ ಕೊರ್ಲಪತಿ ಇಂದು ಅಧಿಕಾರ ಸ್ವೀಕರಿಸಿದರು. ಹಿಂದಿನ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ನೂತನ ಜಿಲ್ಲಾಧಿಕಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.