ಅಂಗವಿಕಲರಿಗೆ ಸೌಲಭ್ಯ : ಅಧಿಕಾರಿಗಳು ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಿ

ಉಡುಪಿ: ಅಂಗವಿಕಲರಿಗೆ ಸರಕಾರದಿಂದ ಲಭ್ಯವಿರುವ ಎಲ್ಲಾ ಯೋಜನೆಗಳ ಸೌಲಭ್ಯಗಳನ್ನು ಒದಗಿಸಿ ಅವರನ್ನು ಸಬಲರನ್ನಾಗಿ ಮಾಡುವಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ, ವ್ಯವಸ್ಥಿತ ರೀತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ರಾಜ್ಯ ಅಂಗವಿಕಲರ ಅಧಿನಿಯಮದ ಆಯುಕ್ತ ಬಸವರಾಜ್ ತಿಳಿಸಿದ್ದಾರೆ. ಅವರು ಬುಧವಾರ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಕಲಚೇತನರಿಗೆ ಸೌಲಭ್ಯ ಒದಗಿಸಲು ಎಲ್ಲಾ ಇಲಾಖೆಗಳಲ್ಲಿ ಯೋಜನೆಗಳಿದ್ದು, ಅಧಿಕಾರಿಗಳು ಯೋಜನೆಗಳ ಕುರಿತು ವಿಕಲಚೇತನ ಫಲಾನುಭವಿಗಳಿಗೆ ಅರಿವು ಮೂಡಿಸಬೇಕು, […]
ಹೊಳೆಯಲ್ಲಿ ಪತ್ತೆಯಾಯಿತು 30 ಕೆ.ಜಿ. ಗಾತ್ರದ ಮೀನು

ಕುಂದಾಪುರ : ಕುಂದಾಪುರ ತಾಲೂಕಿನ ಕೊಡೇರಿಯ ಎಡಮಾವಿನ ಹೊಳೆಯಲ್ಲಿ ಬುಧವಾರ ಸ್ಥಳೀಯ ಮೀನುಗಾರರಾದ ಸುಧೀರ್ ಹಾಗೂ ವಿಶ್ವನಾಥ್ ಸಹೋದರರಿಗೆ ಬೃಹತ್ ಗಾತ್ರದ ಕಾದರ್ (ಅವರ್ಗಿ) ಮೀನು ದೊರೆತಿದೆ. ಈ ಮೀನು ಸುಮಾರು 30 ಕೆಜಿ ಇದೆ. ಆಳ ಸಮುದ್ರಲ್ಲಿ ಇರುವ ಈ ಮೀನು ಹೊಳೆಯಲ್ಲಿ ಸಿಕ್ಕಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಫೆ. 23ರಂದು ಧನುರಾಸನದಲ್ಲಿ ವಿಶ್ವ ದಾಖಲೆಗೆ ತನುಶ್ರೀ ಸಜ್ಜು
ಉಡುಪಿ: ಇಲ್ಲಿನ ಸೇಂಟ್ ಸಿಸಿಲೀಸ್ ಸಮೂಹ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ಇದೇ 23ರಂದು ಸಂಜೆ 5ಗಂಟೆಗೆ ತನುಶ್ರೀ ಪಿತ್ರೋಡಿ ಅವರು ಯೋಗಾಸನದ ಭಂಗಿಯಾದ ‘ಧನುರಾಸನ’ವನ್ನು ಒಂದು ನಿಮಿಷದಲ್ಲಿ ಅತೀ ಹೆಚ್ಚು ಬಾರಿ ಮಾಡುವ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಹೊಸ ದಾಖಲೆ ಬರೆಯಲು ಪ್ರಯತ್ನಿಸಲಿದ್ದಾರೆ. ಎಂದು ಬಡಗುಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡಗುಬೆಟ್ಟು ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ, ಪಿತ್ರೋಡಿಯ […]
ಕೋಟ: ಫೆ. 24ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ

ಉಡುಪಿ: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ‘ಭರವಸೆ’ ಎಂಬ ಶೀರ್ಷಿಕೆಯಡಿ ಜಿಲ್ಲಾಮಟ್ಟದ ಉದ್ಯೋಗ ಮೇಳ ಕಾರ್ಯಕ್ರಮ ಇದೇ 24ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕೋಟ ವಿವೇಕ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕೌಶಲಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, […]
ಫೆ.23 ರಂದು ಬೀದಿನಾಯಿಗಳ ಜಾಗೃತಿ ಅಭಿಯಾನ

ಉಡುಪಿ: ಬೀದಿ ನಾಯಿಮರಿಗಳಿಗೆ ಪುನವರ್ಸತಿ ಕಲ್ಪಿಸುವ ನಿಟ್ಟಿನಲ್ಲಿ ಆರಂಭಿಸಲಾದ ಮಲ್ಪೆ ಮಧ್ವರಾಜ್ ಅನಿಮಲ್ ಕೇರ್ ಟ್ರಸ್ಟ್ನ ಉದ್ಘಾಟನೆ ಹಾಗೂ ಬೀದಿ ನಾಯಿಗಳ ಕುರಿತ ‘ನಮ್ಮ ಸ್ವಂತ, ನಮ್ಮ ಹೆಮ್ಮೆ’ ಜಾಗೃತಿ ಅಭಿಯಾನ ಇದೇ 23ರಂದು ಸಂಜೆ 5.15ಕ್ಕೆ ಮಲ್ಪೆಯ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಟ್ರಸ್ಟಿ ಬಬಿತಾ ಮಧ್ವರಾಜ್ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಟಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡುವರು. ಮಾಜಿ ಸಚಿವ ಪ್ರಮೋದ್ […]