ಮೀನುಗಾರರ ನಿಯೋಗದಿಂದ ಕೇಂದ್ರ ರಕ್ಷಣಾ ಸಚಿವರ ಭೇಟಿ: ನಾಪತ್ತೆಯಾಗಿರುವ ಮೀನುಗಾರರ ರಕ್ಷಣೆಗೆ ಆಗ್ರಹ

ಉಡುಪಿ: ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಹಾಗೂ 7 ಮಂದಿ ಮೀನುಗಾರರ ನಾಪತ್ತೆ ಪ್ರಕರಣದ ಶೀಘ್ರ ತನಿಖೆ ನಡೆಸಿ ಮೀನುಗಾರರನ್ನು ರಕ್ಷಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ  ಮೀನುಗಾರರ ನಿಯೋಗ ಬೆಂಗಳೂರು ಎಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಕೇಂದ್ರ ರಕ್ಷಣಾ ಸಚಿವ ನಿರ್ಮಲ ಸೀತಾರಾಮ್ ಅವರನ್ನು ಇಂದು ಭೇಟಿಯಾಗಿ ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಸಚಿವೆ ನಿರ್ಮಲ ಸೀತಾರಾಮ್, ಆದಷ್ಟು ಬೇಗ ಮಲ್ಪೆಗೆ ಆಗಮಿಸಿ ಈ ಬಗ್ಗೆ ಸೂಕ್ತ ರೀತಿಯಲ್ಲಿ ಅವಲೋಕನ […]

ಮಣಿಪಾಲ: ಕಿಡ್ ಜೀ ಪ್ಲೇಸ್ಕೂಲ್ ಉದ್ಘಾಟನೆ

ಉಡುಪಿ: ಕಿಡ್ ಜೀ  ಪ್ಲೇಸ್ಕೂಲ್ ಮಣಿಪಾಲದ ಅನಂತ್ ನಗರದಲ್ಲಿ ಫೆ . 17 ರ ರವಿವಾರ ಉದ್ಘಾಟನೆಗೊಂಡಿತು. ಉಡುಪಿಯ ಶಾಸಕ ಕೆ. ರಘುಪತಿ ಭಟ್  ಉದ್ಘಾಟಿಸಿದರು .ಮುಖ್ಯ ಅತಿಥಿಗಳಾಗಿ ಡಾ. ಪಿ.ವಿ.ಭಂಡಾರಿ ಮತ್ತು ಕಿಡ್ ಜಿ ಮಣಿಪಾಲದ ಸೆಂಟರ್ ಹೆಡ್  ಅರ್ಚನಾ ರಾವ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಜಯಪ್ರಕಾಶ್ ಹೆಗ್ಡೆಯಿಂದ ಆಸ್ಕರ್ ಭೇಟಿ ಕಾಂಗ್ರೆಸ್ ಗೆ ಮರಳುತ್ತಾರೆ ಹೆಗ್ಡೆ?

ಉಡುಪಿ: ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಗೊಂಡ ಬಳಿಕ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಅವರು ಮೊದಲ ಬಾರಿಗೆ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇವರಿಬ್ಬರ ಭೇಟಿಗೆ ವೇದಿಕೆಯಾಗಿದ್ದು ಮಾತ್ರ ಇತ್ತೀಚೆಗೆ ನಿಧನರಾದ ಶಿರ್ತಾಡಿ ವಿಲಿಯಂ ಪಿಂಟೋ ಅವರ ಶ್ರದ್ಧಾಂಜಲಿ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಆಸ್ಕರ್, ಹೆಗ್ಡೆ ಮಾತ್ರವಲ್ಲದೆ ವಿನಯಕುಮಾರ್ ಸೊರಕೆ ಹಾಗೂ ಇತರ ಕಾಂಗ್ರೆಸ್ ಮುಖಂಡರು, […]

ಮಾ.3 ರಂದು ಕಾರ್ಕಳದಲ್ಲಿ ಚಿತ್ರಕಲಾ ಸ್ಪರ್ಧೆ ಹಾಗೂ ಸಾರ್ವಜನಿಕರಿಗಾಗಿ ಕಸದಿಂದ ರಸ ಸ್ಪರ್ಧೆ

ಕಾರ್ಕಳ : ಪ್ರಜಾಪಿತ ಬ್ರಹ್ಮಾಕುಮಾರಿ ಈಶರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಹಾಶಿವರಾತ್ರಿ ಹಬ್ಬದ ಸಲುವಾಗಿ ಮಾ.3 ರಂದು ಅಪರಾಹ್ನ 3 ರಿಂದ ಶಾಲಾ ಮಕ್ಕಳಿಗಾಗಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ ಹಾಗೂ ಸಾರ್ವಜನಿಕರಿಗಾಗಿ ಕಸದಿಂದ ರಸ ಸ್ಪರ್ಧೆಯನ್ನು ಆನೆಕೆರೆ ಸದ್ಯೋಜತಾ ಪಾರ್ಕಿನಲ್ಲಿ ಏರ್ಪಡಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸೇವಾಕೇಂದ್ರದ ಸಂಚಾಲಕಿ ಬಿ. ಕೆ. ವಿಜಯಲಕ್ಷ್ಮೀ ತಿಳಿಸಿದ್ದಾರೆ.

ಗೋ ಬ್ಯಾಕ್ ಶೋಭಾ ಅಲ್ಲ, ಗೋ ಬ್ಯಾಕ್ ಆಲ್ ಬಿಜೆಪಿ ಎಂಪೀಸ್ ಅಭಿಯಾನ ಆರಂಭವಾಗಬೇಕು: ದಿನೇಶ್ ಗುಂಡುರಾವ್ ವ್ಯಂಗ್ಯ

ಕುಂದಾಪುರ: ಬಿಜೆಪಿ ಸಂಸದರಿಗೆ ಕೇವಲ ಅಧಿಕಾರ ಹಿಡಿಯೋದೆ ಗುರಿಯಾಗಿತ್ತೆ ಹೊರತು ರಾಜ್ಯದ ಪರ ಅವರು ಒಂದು ದಿನವೂ ಕೆಲಸ ಮಾಡಿಲ್ಲ. ಗೋ ಬ್ಯಾಕ್ ಶೋಭಾ ಅಭಿಯಾನ ಅಲ್ಲ. ಬದಲಾಗಿ ಗೋ ಬ್ಯಾಕ್ ಆಲ್ ಬಿಜೆಪಿ ಎಂಪೀಸ್ ಅಭಿಯಾನ ಆರಂಭವಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡು ರಾವ್ ಲೇವಡಿ ಮಾಡಿದರು. ಭಾನುವಾರ ಹೆಮ್ಮಾಡಿ ಸಮೀಪದ ಬಗ್ವಾಡಿಯಲ್ಲಿ ಪಕ್ಷದ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆಯಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು. ಬಿಜೆಪಿಯ ಎಲ್ಲಾ ಸಂಸದರು ಕರ್ನಾಟಕದ ಪರವಾಗಿ ಏನೂ […]