ಹೆಮ್ಮಾಡಿ ಹರೆಗೋಡು ನಿವಾಸಿ ಗುಲಾಬಿ ಅನುಮಾನಾಸ್ಪಸ ಸಾವು ಪ್ರಕರಣ

ಕುಂದಾಪುರ: ಹೆಮ್ಮಾಡಿ ಹರೆಗೋಡು ನಿವಾಸಿ ಗುಲಾಬಿ(55) ಅನುಮಾನಾಸ್ಪಸ ಸಾವಿನ ಪ್ರಕರಣ ತಿರುವು ಪಡೆದುಕೊಂಡಿದ್ದು, ಕತ್ತು ಹಿಸುಕಿ ಉಸಿರುಗಟ್ಟಿ ಸಾಯಿಸಲಾಗಿದೆ ಎಂಬ ಅಂಶ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಬಯಲಾಗಿದೆ. ಈ ಮೂಲಕ ಅನುಮಾನಾಸ್ಪದ ಸಾವು ಪ್ರಕರಣ ಇದೀಗ ಕೊಲೆ ಪ್ರಕರಣವಾಗಿ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಪತಿ ತೀರಿಕೊಂಡ ಬಳಿಕ ಕಳೆದೆರಡು ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಗುಲಾಬಿ ಮಾರ್ಚ್ 1ರ ಬೆಳಿಗ್ಗೆ ಗುಲಾಬಿ ಶವವಾಗಿ ಮನೆಯ ಕೋಣೆಯೊಳಗೆ ಪತೆಯಾಗಿದ್ದರು. ಗುಲಾಬಿ ಧರಿಸಿದ್ದ ಚಿನ್ನಾಭರಣಗಳು ಇಲ್ಲದ ಹಿನ್ನೆಲೆಯಲ್ಲಿ ಸ್ಥಳೀಯರು ಕೊಲೆ ಶಂಕೆ […]

ಲೈಟ್ ಫಿಷಿಂಗ್ ವಿರೋಧಿಸಿ ಪ್ರತಿಭಟನೆ ,ಎರಡು ಗುಂಪುಗಳ ಮಧ್ಯೆ ಘರ್ಷಣೆ

ಉಡುಪಿ: ಲೈಟ್ ಫಿಶಿಂಗ್, ಬುಲ್ ಟ್ರಾಲ್ ಅವೈಜ್ಞಾನಿಕ ಮೀನುಗಾರಿಕೆ ವಿರೋಧಿಸಿ ಮಲ್ಪೆ ಆಳ ಸಮುದ್ರ ಮೀನುಗಾರರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ಮಲ್ಪೆ ಮೀನುಗಾರಿಕೆ ಉಪನಿರ್ದೇಶಕರ ಕಚೇರಿ ಮುಂಭಾಗದಲ್ಲಿ ಮಂಗಳವಾರ ನಡೆಯಿತು. ಪರ್ಸಿನ್ ಮೀನುಗಾರರು ಅವೈಜ್ಞಾನಿಕ ಮೀನುಗಾರಿಕೆ ನಡೆಸುತ್ತಿದ್ದರೂ ಇದುವರೆಗೆ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಎರಡು ಗುಂಪುಗಳ ಮಧ್ಯೆ ತಳ್ಳಾಟ: ಬಂದರು ಗೇಟ್ ಬಂದ್  ಮಾಡಿರುವುದನ್ನು ವಿರೋಧಿಸಿ ಪರ್ಸಿನ್ ಮೀನುಗಾರರು ಗೇಟ್ ತೆರವಿಗೆ ಆಗ್ರಹಿಸಿದರು. ಈ ವೇಳೆ ತಳ್ಳಾಟ, ಮಾತಿನ […]