ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: ಯಶ್ ಪಾಲ್ ಸುವರ್ಣಗೆ ಒಲಿಯಲಿದೆಯೇ ಬಿಜೆಪಿ ಟಿಕೆಟ್?
ಉಡುಪಿ: ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಸರತ್ತು ಬಹಳಷ್ಟು ಬಿರುಸು ಪಡೆದುಕೊಂಡಿದೆ. ಈ ಮಧ್ಯೆ ಬಿಜೆಪಿಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಟಿಕೆಟ್ ಗಾಗಿ ಆಕಾಂಕ್ಷಿಗಳ ನಡುವೆ ಪೈಪೋಟಿ ಶುರುವಾಗಿದೆ. ಆದರೆ ಬಿಜೆಪಿ ಹೈಕಮಾಂಡ್ ಯುವ ನಾಯಕನಿಗೆ ಮಣೆ ಹಾಕಲಿದೆ ಎಂಬ ಅಂಶ ಹೊರಬಿದ್ದಿದೆ. ಈ ವಿಚಾರ ಸದ್ಯ ಬಿಜೆಪಿಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ […]
ನಮ್ಮ ಅಂಗಡಿ-2019: ಮಾರ್ಚ್ 8ರಿಂದ ಮಾರಾಟ ಮೇಳ ಮತ್ತು ವಸ್ತು ಪ್ರದರ್ಶನ ಆರಂಭ
ಮಣಿಪಾಲ: ಮಾರ್ಚ್ 8, 9 ಮತ್ತು 10 ರಂದು ‘ದಿ ಕನ್ಸನ್ರ್ಡ್ ಫಾರ್ ವರ್ಕಿಂಗ್ ಚಿಲ್ಡ್ರನ್’ (ಸಿಡಬ್ಲ್ಯೂಸಿ) ಸಹಯೋಗದಲ್ಲಿ ಮಾಹೆ ಸ್ಕೂಲ್ ಆಫ್ ಕಮ್ಯುನಿಕೇಶನ್ ಸಂಸ್ಥೆಯು ‘ನಮ್ಮ ಅಂಗಡಿ’ ಎಂಬ ಮೂರು ದಿನಗಳ ಮಾರಾಟ ಮೇಳ ಮತ್ತು ವಸ್ತು ಪ್ರದರ್ಶನವನ್ನು ಆಯೋಜಿಸಿದೆ. ‘ಸಿಡಬ್ಲ್ಯೂಸಿ’ ಯೋಜನೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ನಮ್ಮ ಭೂಮಿ’ಸಂಸ್ಥೆಯ ಕಲಾವಿದರು ತಯಾರಿಸಿದ ವಸ್ತುಗಳು ಮೇಳದಲ್ಲಿ ಪ್ರದರ್ಶನಗೊಳ್ಳಲಿವೆ. ಮಾರ್ಚ್ 8ರ ಬೆಳಗ್ಗೆ 9 ಗಂಟೆಗೆ ಉಡುಪಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ ಶ್ರೀಮತಿ ಹೆಪ್ಸಿಬಾ ರಾಣಿ ಕೊರ್ಲಪಾಟಿ […]
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬೆಂಕಿ:15 ಹೆ. ಹುಲ್ಲುಗಾವಲು ಬೆಂಕಿಗಾಹುತಿ
ಉಡುಪಿ: ಮಾರ್ಚ್ 4 ರಂದು ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಗಂಗಾಮೂಲ ಗಸ್ತಿನ ಭಗವತಿ ಗುಡ್ಡ ವ್ಯಾಪ್ತಿಯಲ್ಲಿ ಸಂಜೆ 6.30 ರ ಸುಮಾರಿಗೆ ಯಾರೋ ಅಪರಿಚಿತರು ಬೆಂಕಿ ಹಾಕಿದ್ದು ಈ ಬೆಂಕಿಯನ್ನು ಕೂಡಲೇ ಕುದುರೆಮುಖ ವನ್ಯಜೀವಿ ವಲಯದ ಸಿಬ್ಬಂದಿಗಳನ್ನು ಬಳಸಿ ರಾತ್ರಿ 9.30 ರ ಸುಮಾರಿಗೆ ಸಂಪೂರ್ಣವಾಗಿ ಆರಿಸಲಾಗಿದೆ. ಒಟ್ಟಾರೆ 15 ಹೆ. ಹುಲ್ಲುಗಾವಲು ಸುಟ್ಟುಹೋಗಿದ್ದು, ಯಾವುದೇ ಮರಗಳು ಸುಟ್ಟಿರುವುದಿಲ್ಲ. ಯಾವುದೇ ವನ್ಯಪ್ರಾಣಿಗಳು ಕೂಡ ಸಾವನಪ್ಪಿರುವುದಿಲ್ಲ. ಈ ಬಗ್ಗೆ ಅರಣ್ಯ ಅಪರಾದವನ್ನು ದಾಖಲು ಮಾಡಿ, ಆರೋಪಿತರನ್ನು ಪತ್ತೆ ಹಚ್ಚಲು […]
ಮಾ.8: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ, ಜಿಲ್ಲಾ ಸ್ತ್ರೀ ಶಕ್ತಿ ಸಮಾವೇಶ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ತ್ರೀ ಶಕ್ತಿ ಒಕ್ಕೂಟ ಹಾಗೂ ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾ ಸ್ತ್ರೀ ಶಕ್ತಿ ಸಮಾವೇಶವು ಮಾರ್ಚ್ 8 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಸಚಿವೆ […]
ಮಾ.8: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಉಡುಪಿ: ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ(ರಿ.), ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ ಉಡುಪಿ ಹಾಗೂ ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯ ಕುಂಜಿಬೆಟ್ಟು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯು ಮಾರ್ಚ್ 8 ರಂದು ಬೆಳಿಗ್ಗೆ 9.30 ಕ್ಕೆ ಕುಂಜಿಬೆಟ್ಟು ವೈಕುಂಠ ಬಾಳಿಗ ಕಾನೂನು ಮಹಾ ವಿದ್ಯಾಲಯದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ.ಜೋಶಿ ಉದ್ಘಾಟಿಸಲಿದ್ದು, ವೈಕುಂಠ […]