ಲೋಕಸಭಾ ಚುನಾವಣೆ: ಶಸ್ತ್ರಾಸ್ತ್ರಗಳ ಬಳಕೆ ನಿಷೇಧ:ಜಿಲ್ಲಾಧಿಕಾರಿ ಆದೇಶ
ಉಡುಪಿ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು. ಎಪ್ರಿಲ್ 18 ರಂದು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವುದನ್ನು ಖಾತರಿ ಪಡಿಸುವ ಸಲುವಾಗಿ ಆಯ್ದ ಪರವಾನಿಗೆ ಹೊಂದಿರುವಂತಹ ಪರವಾನಿಗೆ ದಾರರನ್ನು ಪೂರ್ವಭಾವಿ ಪರಿಶೀಲನೆ ಮಾಡಿ, ಚುನಾವಣೆಯ ಅವಧಿಯಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಆಯುಧ, ಶಸ್ತ್ರಾಸ್ತ್ರ, ಮಾರಕಾಯುಧಗಳು, ಮದ್ದು ಗುಂಡುಗಳನ್ನು ಹೊಂದುವುದು, ಸಾಗಿಸುವುದು ಮತ್ತು ಬಳಸುವುದರ ಮೇಲೆ ನಿರ್ಭಂಧಗಳನ್ನು […]
ಎಸ್.ಎಸ್.ಎಲ್.ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ 14,214 ವಿದ್ಯಾರ್ಥಿಗಳು
ಉಡುಪಿ : ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 14,214 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಮಾ. 21 ರಿಂದ ಏಪ್ರಿಲ್ 4 ರವರೆಗೆ ಪರೀಕ್ಷೆ ನಡೆಯಲಿದ್ದು, ಈ ಸಂಬಂಧ ಪೂರ್ವ ಸಿದ್ಧತಾ ಸಭೆ ಸೋಮವಾರ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಮಾಹಿತಿ ನೀಡಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶೇಷಶಯನ, ಒಟ್ಟು ಜಿಲ್ಲೆಯಲ್ಲಿ 51 ಪರೀಕ್ಷಾ ಕೇಂದ್ರಗಳಿದ್ದು, ಬೈಂದೂರು ವಲಯದ 8 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 2092 […]
ಗುಲಾಬಿ ಕೊಲೆ ಪ್ರಕರಣ: ಆರೋಪಿ ಪತ್ನಿಗೆ ಗುಲಾಬಿ ಮನೆಯವರಿಂದ ಹಲ್ಲೆಗೆ ಯತ್ನ
ಕುಂದಾಪುರ: ಹೆಮ್ಮಾಡಿ ಗುಲಾಬಿ ಕೊಲೆ ಪ್ರಕರಣದ ಆರೋಪಿಯನ್ನು ಸೋಮವಾರ ಸ್ಥಳ ಮಹಜರಿಗೆ ಕರೆತಂದ ವೇಳೆಯಲ್ಲಿ ರೊಚ್ಚಿಗೆದ್ದ ಗುಲಾಬಿ ಮನೆಯವರು ಆರೋಪಿಯ ಪತ್ನಿಯ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಮುದೂರು ನಿವಾಸಿ ರವಿರಾಜ್ ಪ್ರಕರಣ ಆರೋಪಿಯಾಗಿದ್ದು, ಚಿನ್ನಾಭರಣಕ್ಕಾಗಿ ಗುಲಾಬಿಯನ್ನು ಕೊಲೆಗೈದಿರುವುದಾಗಿ ಪೊಲೀಸ್ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾನೆ. ಆರೋಪಿ ರವಿ ವಿಜಯ ಗೇರುಬೀಜ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಮಹಿಳೆಯ ಪತಿಯಾಗಿದ್ದು, ಗೇರುಬೀಜ ಕಾರ್ಖಾನೆಯ ಸಿಬ್ಬಂದಿಗಳಿಗೆ ಕೊಡಲಾಗಿದ್ದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದನು. ಆರೋಪಿ ರವಿರಾಜ್ಗೆ ಪತ್ನಿ ಹಾಗೂ ನಾಲ್ಕು ವರ್ಷದ ಪುತ್ರ […]
ರಂಗದಲ್ಲೇ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಯಕ್ಷಗಾನ ಕಲಾವಿದ
ಬೈಂದೂರು :ಜಲವಳ್ಳಿ ಮೇಳದ ಖ್ಯಾತ ಕಲಾವಿದ ಹುಡುಗೋಡು ಚಂದ್ರಹಾಸ(52) ಅವರು ತಾಲ್ಲೂಕಿನ ಯಳಜಿತ ಗ್ರಾಮದ ಜೋಗಿಜಡ್ಡು ಎಂಬಲ್ಲಿ ಭಾನುವಾರ ರಾತ್ರಿ ಯಕ್ಷಗಾನ ಮಾಡುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ರಂಗ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೈಂದೂರಿನಲ್ಲಿ ಕಲಾಧರ ಯಕ್ಷಗಾನ ಬಳಗ ಜಲವಳ್ಳಿ, ಮೇಳದ ವತಿಯಿಂದ ನಡೆಯುತ್ತಿದ್ದ ಯಕ್ಷಗಾನದಲ್ಲಿ ಅತಿಥಿ ಕಲಾವಿದರಾಗಿ ಕುಣಿಯುತ್ತಿದ್ದಾಗ ರಂಗದಲ್ಲಿಯೇ ಹುಡುಗೋಡು ಚಂದ್ರಹಾಸ ಅವರು ಕುಸಿದು ಬಿದ್ದಿದ್ದಾರೆ. ಘಟನೆ ನಡೆಯುತ್ತಿದ್ದಂತೆಯೇ ದಿಗ್ಬಾಂತರಾದ ಮೇಳದ ಕಲಾವಿದರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅವರ ಜೀವವನ್ನು ಉಳಿಸಿಕೊಳ್ಳಲಾಗಲಿಲ್ಲ. ಸಾಲ್ವನ ಪಾತ್ರದಲ್ಲಿ […]