ಉಡುಪಿ: ವಿಶೇಷ ಚೇತನ ಮತದಾರರ ಸಹಾಯವಾಣಿ ಆರಂಭ
ಉಡುಪಿ : ಈ ಬಾರಿಯ ಲೋಕ ಸಭಾ ಚುನಾವಣೆ ಅಂಗವಾಗಿ ವಿಕಲ ಚೇತನರು ಮತ್ತು ಹಿರಿಯ ನಾಗರೀಕರು, ಅಶಕ್ತರಿಗೆ ಸಾಮಾನ್ಯರಂತೆ ಬಂದು ಮತದಾನ ಮಾಡಲು ಅನುಕೂಲವಾಗುವಂತೆ ಮಾಡಲು, ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಜಿಲ್ಲಾ ಸ್ವೀಪ್ ಸಮಿತಿ ಮತ್ತು ವಿಕಲ ಚೇತನರ ಮಾಹಿತಿ ಕೇಂದ್ರದ ವತಿಯಿಂದ ಕಳೆದ ಬಾರಿ ಆಯೋಜಿಸಿದಂತೆ ವಿಶೇಷ ಚೇತನ ಮತದಾರರ ಸಹಾಯವಾಣಿಯನ್ನು ಆರಂಭ ಮಾಡಲಾಯಿತು. ಚುನಾವಣೆಗೆ ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ, ಮತದಾನ ಕೇಂದ್ರದಲ್ಲಿ ಸೌಲಭ್ಯ, ಬಾಕಿ ಇರುವ ಮತದಾರರ ಗುರುತಿನ ಚೀಟಿ, […]
ಉಡುಪಿ: ನೀತಿ ಸಂಹಿತೆ ಉಲ್ಲಂಘಿಸದಂತೆ ಜಿಲ್ಲಾಧಿಕಾರಿ ಖಡಕ್ ಆದೇಶ
ಉಡುಪಿ : ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡದಂತೆ ಪ್ರಚಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲಾ ರಾಜಕೀಯ ಪಕ್ಷಗಳು ನೀತಿ ಸಂಹಿತೆ ಅಡಿಯಲ್ಲಿಯೇ ಪ್ರಚಾರ ಕಾರ್ಯಗಳನ್ನು ಕೈಗೊಳ್ಳಬೇಕು, ಪ್ರಚಾರ ಕಾರ್ಯಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಅನುಮತಿಯನ್ನು ಜಿಲ್ಲಾಡಳಿತ […]
ಬ್ಯೂಟಿ ಪಾರ್ಲರ್ಗಳಲ್ಲಿ ಆದಷ್ಟು ರಾಸಾಯನಿಕ ಯುಕ್ತ ಉತ್ಪನ್ನಗಳನ್ನು ಕಡಿಮೆ ಬಳಸಿ: ಡಾ| ವನಿತಾ ಲಕ್ಷ್ಮೀ
ಕುಂದಾಪುರ: ಈಗ ಬ್ಯೂಟಿ ಪಾರ್ಲರ್ಗಳಲ್ಲಿಯೂ ಪೈಪೋಟಿ ಆರಂಭವಾಗಿದ್ದು, ಸ್ವಚ್ಛತೆಯೊಂದಿಗೆ ಗುಣಮಟ್ಟದ ಸೇವೆ ನೀಡುವ ಮೂಲಕ ಗಮನ ಸೆಳೆಯಬಹುದು. ಬ್ಯೂಟಿ ಪಾರ್ಲರ್ಗಳಲ್ಲಿ ಆದಷ್ಟು ರಾಸಾಯನಿಕ ಯುಕ್ತ ಉತ್ಪನ್ನಗಳನ್ನು ಕಡಿಮೆ ಬಳಸಿ, ಇದರಿಂದ ಚರ್ಮದ ಆರೋಗ್ಯಕ್ಕೆ ಸಮಸ್ಯೆಯಾಗುತ್ತದೆ ಎಂದು ಉಡುಪಿಯ ಇನ್ನರ್ವೀಲ್ ಕ್ಲಬ್ನ ಅಧ್ಯಕ್ಷೆ ಡಾ| ವನಿತಾ ಲಕ್ಷ್ಮೀ ಸಲಹೆ ನೀಡಿದರು. ಅವರು ಮಂಗಳವಾರ ಕುಂದಾಪುರ ಹಾಗೂ ಬೈಂದೂರು ವಲಯದ ಮಹಿಳಾ ಸೌಂದರ್ಯ ತಜ್ಞೆಯರ ಸಂಘದ ವತಿಯಿಂದ ಇಲ್ಲಿನ ಹೋಟೆಲ್ ಹರಿಪ್ರಸಾದ್ನ ಅಕ್ಷತಾ ಸಭಾಂಗಣದಲ್ಲಿ ನಡೆದ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ, ಕೇವಲ […]
ಜನರ ಬೆಂಬಲವಿಲ್ಲದೇ ರಂಗಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ: ಬಾಸುಮಾ ಕೊಡಗು
ಕುಂದಾಪುರ: ಜನರ ಬೆಂಬಲವಿಲ್ಲದೇ ರಂಗಚಟುವಟಿಕೆಗಳು ನಡೆಯಲು ಸಾಧ್ಯವಿಲ್ಲ. ಗ್ರಾಮೀಣ ಭಾಗದಲ್ಲಿಯೂ ಸಾಂಸ್ಕತಿಕ ಚಟುವಟಿಕೆಗೆ ಬೆಂಬಲ ನೀಡುವ ಕೆಲಸ ಮಹತ್ವದ್ದು. ಇದು ಹೀಗೆಯೇ ಮುಂದುವರಿಯಬೇಕಿದೆ ಎಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬಾಸುಮಾ ಕೊಡಗು ಆಶಿಸಿದರು. ಅವರು ಸೋಮವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಹಾಗೂ ಯಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ಆಶ್ರಯದಲ್ಲಿ ಆಯೋಜಿಸಲಾದ ರಂಗಸುರಭಿ – 2019 ತ್ರಿದಿನ ನಾಟಕೋತ್ಸವ ಎರಡನೇ ದಿನ ವಿಶೇಷ ರೀತಿಯಲ್ಲಿ ಹಮ್ಮಿಕೊಂಡ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಸುರಭಿ ಉಪಾಧ್ಯಕ್ಷ […]
ಕೇಂದ್ರ, ರಾಜ್ಯ ಸರ್ಕಾರದಿಂದ ಜಿಲ್ಲೆಯ ಸಂಪೂರ್ಣ ನಿರ್ಲಕ್ಷ್ಯ: ಆರೋಪ
ಉಡುಪಿ: ಜಿಲ್ಲೆಯ ಮರಳು ಸಮಸ್ಯೆ ಬಗೆಹರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಅನುದಾನ ಹಂಚಿಕೆ, ಅಭಿವೃದ್ಧಿ ಕಾಮಗಾರಿ ಸೇರಿದಂತೆ ಹಲವಾರು ವಿಚಾರಗಳಲ್ಲಿ ಎರಡು ಸರ್ಕಾರಗಳು ಜಿಲ್ಲೆಗೆ ಅನ್ಯಾಯ ಮಾಡುತ್ತಿವೆ ಎಂದು ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಸಾಲಿಗ್ರಾಮ ಆರೋಪಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಿಲ್ಲೆಯ ಮರಳು ಸಮಸ್ಯೆಯನ್ನು ಬಗೆಹರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆಯ ಉಡುಪಿ ಜಿಲ್ಲಾ ಸಮಿತಿ ಈ ಬಾರಿಯ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿದ್ದು, […]