ಬಗೆಹರಿದ ಸೀಟು ಹಂಚಿಕೆ ಗೊಂದಲ: ಕಾಂಗ್ರೆಸ್ ಗೆ 20, ಜೆಡಿಎಸ್ ಗೆ 8, ಉಡುಪಿ-ಚಿಕ್ಕಮಗಳೂರು ಜೆಡಿಎಸ್ ವಶಕ್ಕೆ; ಕಣಕ್ಕಿಳಿಯುತ್ತಾರ ಜೆ.ಪಿ. ಹೆಗ್ಡೆ..?
ಉಡುಪಿ: ಲೋಕಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಭಾರೀ ಗೊಂದಲಕ್ಕೀಡಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಪಕ್ಷದ ಸೀಟು ಹಂಚಿಕೆ ವಿಚಾರ ಕೊನೆಗೂ ಬಗೆಹರಿದಿದೆ. ಕಾಂಗ್ರೆಸ್ ಹಾಲಿ ಸಂಸದರಿರುವ ತುಮಕೂರು ಕ್ಷೇತ್ರ ಸೇರಿದಂತೆ 8 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಉತ್ತರ ಕನ್ನಡ, ಉಡುಪಿ -ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ, ವಿಜಯಪುರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟು ಕೊಡಲಾಗಿದೆ. ಮೈಸೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಜೆಡಿಎಸ್ 8 ಕ್ಷೇತ್ರ ಹಾಗೂ ಕಾಂಗ್ರೆಸ್ 20 […]
ಚುನಾವಣಾ ಸುದ್ದಿಗಳ ಮೇಲೆ ನಿಗಾ: 24*7 ಪರಿಶೀಲನೆ ಕೇಂದ್ರ ಸ್ಥಾಪನೆ
ಉಡುಪಿ: ಲೋಕಸಭಾ ಚುನಾವಣೆಯ ಪ್ರಯುಕ್ತ ಚುನಾವಣಾ ಆಯೋಗದ ನಿರ್ದೇಶನದಂತೆ, ಜಿಲ್ಲೆಯ ಎಲ್ಲಾ ಮುದ್ರಣ, ಟಿವಿ, ರೇಡಿಯೋ ಮತ್ತು ಸಾಮಾಜಿಕ ಜಾಲ ತಾಣದಲ್ಲಿ ಪ್ರಚಾರವಾಗುವ ರಾಜಕೀಯ ಪಕ್ಷಗಳ ಜಾಹೀರಾತು, ಪ್ರಚಾರ ಕಾರ್ಯಕ್ರಮ, ಸುದ್ದಿಗಳನ್ನು ಪರಿಶೀಲಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದಿನದ 24 ಗಂಟೆ ಕಾರ್ಯ ನಿರ್ವಹಿಸುವ ಮೀಡಿಯಾ ಮಾನಿಟರಿಂಗ್ ಮತ್ತು ಮೀಡಿಯಾ ಸರ್ಟಿಫಿಕೇಷನ್ (ಎಂಸಿಎಂಸಿ) ಕೇಂದ್ರವನ್ನು ತೆರೆಯಲಾಗಿದ್ದು, ಚುನಾವಣಾ ಸುದ್ದಿಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಎಲ್ಲಾ ಮುದ್ರಣ ಮಾಧ್ಯಮ ಮತ್ತು ಸ್ಥಳೀಯ ಚಾನೆಲ್ಗಳಲ್ಲಿ ಪ್ರಸಾರವಾಗುವ ಕಾರ್ಯಕ್ರಮಗಳನ್ನು ವೀಕ್ಷಿಸುವ ಜೊತೆಗೆ […]
ಅಪರಿಚಿತ, ಮೃತ ವ್ಯಕ್ತಿ ಮಾಹಿತಿ ಬಗ್ಗೆ ಪತ್ತೆ
ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಒಳರೋಗಿಯಾಗಿ ದಾಖಲಾದ ಸುಭದ್ರಮ್ಮ (65) ಎಂಬುವವರು ಚಿಕಿತ್ಸೆ ಫಲಕಾರಿಯಾಗದೇ ಮೃತ ಪಟ್ಟಿದ್ದು, ವಾರಸುದಾರರು ಯಾರಾದರು ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2520555 / 9449827833 ನ್ನು ಸಂಪರ್ಕಿಸುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಪ್ರಕಟಣೆ ತಿಳಿಸಿದೆ.
ಮತದಾನ ಜಾಗೃತಿ ಕಾರ್ಯಕ್ರಮಗಳ ವೇಳಾಪಟ್ಟಿ ತಯಾರಿಸಿ: ಸಿಂಧೂ ಬಿ ರೂಪೇಶ್ ಸೂಚನೆ
ಉಡುಪಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವಾಗ ಎಲ್ಲಾ ಇಲಾಖೆಯವರು ತಾವು ಮುಂದಿನ ದಿನಗಳಲ್ಲಿ ನಡೆಸುವ ಕಾರ್ಯಕ್ರಮದ ವೇಳಾಪಟ್ಟಿಯ ತಯಾರಿಸಿ ಗುರುವಾರ ಸ್ವೀಪ್ ಸಮಿತಿಗೆ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷೆ ಸಿಂಧೂ ಬಿ. ರೂಪೇಶ್ ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ನಲ್ಲಿ ನಡೆದ ಮುಂಬರುವ ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಸ್ವೀಪ್ ಸಮಿತಿಯ ವತಿಯಿಂದ ಕೈಗೊಳ್ಳಬೇಕಾದ ಮತದಾನ ಜಾಗೃತಿ ಕಾರ್ಯಕ್ರಮದ ಅನುಷ್ಟಾನ ಕುರಿತ ಸಭೆಯಲ್ಲಿ […]
ಬೆಳಕು ಮೀನುಗಾರಿಕೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ
ಉಡುಪಿ: ಜಿಲ್ಲೆಯ ಪರ್ಸಿನ್ ಮೀನುಗಾರರು ಸರ್ಕಾರಿ ಆದೇಶವನ್ನು ಉಲ್ಲಂಘಿಸಿ, ಅಕ್ರಮ ಬೆಳಕು ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಇದರಿಂದ ಮತ್ಸ್ಯ ಸಂಕುಲ ಅವನತಿಯ ಅಂಚಿಗೆ ತಲುಪಿದೆ. ಹಾಗಾಗಿ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಡೀಪ್ ಸೀ ಟ್ರಾಲ್ ಬೋಟ್ ಅಸೋಸಿಯೇಶನ್ ಅಧ್ಯಕ್ಷ ಕಿಶೋರ್ ಡಿ. ಸುವರ್ಣ ಆಗ್ರಹಿಸಿದರು. ಅಕ್ರಮ ಬೆಳಕು ಮೀನುಗಾರಿಕೆ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಡೀಪ್ ಸೀ ಟ್ರಾಲ್ ಬೋಟ್ ಅಸೋಸಿಯೇಶನ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಗೆ […]