ಮರಳು ಹೋರಾಟ ಸಮಿತಿಯಿಂದ ಜಿಲ್ಲಾಡಳಿತಕ್ಕೆ ಎಚ್ಚರಿಕೆ, ಮರಳಿನ ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಚುನಾವಣೆ ಬಹಿಷ್ಕಾರ ಎದುರಿಸಿ

ಉಡುಪಿ: ಜಿಲ್ಲೆಯ ಮರಳಿನ ಸಮಸ್ಯೆ ಬಗೆಹರಿಯಬೇಕು. ಇಲ್ಲದಿದ್ದರೆ ಮತದಾನ ಪ್ರತಿಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಕಟಪಾಡಿ ಟೆಂಪೋ ಹಾಗೂ ಲಾರಿ ಮಾಲೀಕರ ಸಂಘದ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಜಿಲ್ಲಾಡಳಿತ ಮರಳು ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು. ಇಲ್ಲದಿದ್ದರೆ ಲೋಕಸಭೆ ಚುನಾವಣೆಯನ್ನು ಬಹಿಷ್ಕಾರ ಮಾಡುತ್ತೇವೆಂದು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದರು. ಮತ ಹಾಕುವುದು ಬಿಡುವುದು ನಮ್ಮ ವೈಯಕ್ತಿಕ ವಿಚಾರ. ಮತ ಹಾಕದಿದ್ದರೆ ನಿಮ್ಮ ಮೇಲೆ ಕ್ರಮ ಜರುಗಿಸುತ್ತೇನೆ ಎಂದು ಡಿಸಿ ಹೇಳುತ್ತಾರೆ. […]

ನಾಪತ್ತೆಯಾದ ಮೀನುಗಾರರನ್ನು ಹುಡುಕಿಕೊಡುವಲ್ಲಿ ಸರ್ಕಾರದ ನಿರ್ಲಕ್ಷ್ಯ: ಮೀನುಗಾರರ ಕುಟುಂಬದಿಂದ ಮತದಾನ ಬಹಿಷ್ಕಾರ

ಉಡುಪಿ: ನಾಪತ್ತೆಯಾಗಿರುವ ಏಳು ಮಂದಿ ಮೀನುಗಾರರನ್ನು  ಹುಡುಕಿಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ನಾಪತ್ತೆಯಾದ ಮೀನುಗಾರರ ಮನೆಯ ಕುಟುಂಬದವರು ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸಲು  ತೀರ್ಮಾನಿಸಿದ್ದಾರೆ. ಮಲ್ಪೆ ಬಂದರಿನಿಂದ ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಬೋಟ್ ಸಹಿತ ಏಳು ಮಂದಿ ಮೀನುಗಾರರು ಕಣ್ಮರೆಯಾಗಿ 87 ದಿನಗಳು ಕಳೆದಿವೆ. ಕಣ್ಮರೆಯಾಗಿರುವ ಏಳು ಮಂದಿ ಮೀನುಗಾರರ ಕುಟುಂಬದವರಲ್ಲಿ ಮೌನದ ಛಾಯೆ ಆವರಿಸಿದೆ. ಮೀನುಗಾರರು ಬರುತ್ತಾರೆ ಎಂಬ ನಂಬಿಕೆಯ ಮೇಲೆ ದಿನದೂಡುತ್ತಿದ್ದಾರೆ. ಆದರೆ ಮೀನುಗಾರರ ನಾಪತ್ತೆ ಪ್ರಕರಣದ ಬಗ್ಗೆ ಮೌನವಾಗಿರುವ […]