ಪ್ರತಿಭೆ ಪ್ರತಿ ವ್ಯಕ್ತಿಯಲ್ಲೂ ಇರುತ್ತದೆ, ಅರಿತುಕೊಳ್ಳುವ ಪ್ರಯತ್ನ ಮತ್ತು ಮನಸ್ಸು ಮಾಡಬೇಕು: ಡಾ.ಹೆಚ್.ಶಾಂತಾರಾಮ್
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಶೈಕ್ಷಣಿಕ ವರ್ಷ 2018-19ನೇ ಸಾಲಿನ ವಾರ್ಷಿಕ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಆಡಳಿತಾಧಿಕಾರಿ ಡಾ.ಹೆಚ್.ಶಾಂತಾರಾಮ್ ಮಾತನಾಡಿ, ಪ್ರತಿಭೆ ಪ್ರತಿ ವ್ಯಕ್ತಿಯಲ್ಲೂ ಇರುತ್ತದೆ. ಅರಿತುಕೊಳ್ಳುವ ಪ್ರಯತ್ನ ಮತ್ತು ಮನಸ್ಸು ಮಾಡಬೇಕು. ಪೂರಕವಾಗಿ ಒಳ್ಳೆಯ ಸಾಧನೆ ಸಾಧ್ಯವಾಗುತ್ತದೆ. ಶಿಕ್ಷಣವೆಂದರೆ ಕೇವಲ ಪಾಠವಲ್ಲ. ಇದರಲ್ಲಿ ವ್ಯಕ್ತಿತ್ವ ವಿಕಸನವು ಒಂದು ಭಾಗವಾಗಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಸಹಕರಿಸುತ್ತದೆ. ಆದರೆ ಪ್ರತಿಯೊಬ್ಬ ವಿದ್ಯಾರ್ಥಿಯು ಪಾಠಕ್ಕೆ ಪೂರಕವಾಗಿರುವ ಅವಕಾಶಗಳನ್ನು […]
ಸಹಬಾಳ್ವೆ ಉಡುಪಿ ವತಿಯಿಂದ ಮಾ. 17ಕ್ಕೆ ಸರ್ವಜನೋತ್ಸವ ಸಮಾವೇಶ
ಉಡುಪಿ: ಸಹಬಾಳ್ವೆ ಉಡುಪಿ ಇದರ ಆಶ್ರಯದಲ್ಲಿ ಇದೇ 17ರಂದು ಕಲ್ಸಂಕ ರಾಯಲ್ಸ್ ಗಾರ್ಡನ್ನಲ್ಲಿ ‘ಸರ್ವಜನೋತ್ಸವ’ ಸಮಾವೇಶ ನಡೆಯಲಿದೆ ಎಂದು ಸಹಬಾಳ್ವೆಯ ಸಂಚಾಲಕ ಅಮೃತ್ ಶೆಣೈ ಹೇಳಿದರು. ಸಹಬಾಳ್ವೆಯ ಉಡುಪಿ ಕಚೇರಿಯಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವವನ್ನು ಎತ್ತಿಹಿಡಿಯುವುದು. ಸಂವಿಧಾನವನ್ನು ರಕ್ಷಣೆ ಮಾಡುವುದು. ಸರ್ವಧರ್ಮ ಸಮಭಾವ ಹಾಗೂ ಜಾತ್ಯತೀತ ಪರಂಪರೆಯನ್ನು ಉಳಿಸಿಕೊಳ್ಳುವುದು. ದೇಶದ ಏಕತೆಯನ್ನು ಗಟ್ಟಿಗೊಳಿಸುವುದು ಇದರ ಪ್ರಮುಖ ಉದ್ದೇಶವಾಗಿದೆ. ಸಮಾವೇಶದಲ್ಲಿ ಸುಮಾರು 20ರಿಂದ 25 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ […]
ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ
ಕುಂದಾಪುರ: ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ವೆಂಕಟರಮಣ ದೇವಸ್ಥಾನದಲ್ಲಿ ಕಾಲಂಪ್ರತಿ ಜರಗುವ ಬ್ರಹ್ಮರಥೋತ್ಸವದ ಬುಧವಾರ ವಿಜೃಂಭಣೆಯಿಂದ ಜರಗಿತು. ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಮತ್ತು ಅವರ ಪಟ್ಟಶಿಷ್ಯ ಶ್ರೀಮದ್ ವಿದ್ಯಾಧೀಶ ಶ್ರೀಪಾದ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ರಥೋತ್ಸವದ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ನಡೆಯಿತು. ಬ್ರಹ್ಮಬೆಳಿಗ್ಗೆ ಶ್ರೀದೇವರಿಗೆ ಪಂಚಾಮೃತ ಅಭಿಷೇಕ, ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ ಮಹಾಪ್ರಾರ್ಥನೆ ಬಳಿಕ ಬಲಿಪೂಜೆ, ಮಾರ್ಗ ಬಲಿ ಜರಗಿತು. ಸಂಜೆ ರಥಾರೋಹಣ, ಮಹಾಮಂಗಳಾರತಿ ಮತ್ತಿತರ […]
ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆಯನ್ನು ವಹಿಸಿ: ಜಿಲ್ಲಾಧಿಕಾರಿ
ಉಡುಪಿ: ಬೇಸಿಗೆ ಹಿನ್ನಲೆಯಲ್ಲಿ ತುರ್ತು ಕುಡಿಯುವ ನೀರು ಪೂರೈಕೆ ಮತ್ತು ಕೈಗೊಂಡ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಸಭೆ ನಡೆಯಿತು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವ ಬಗ್ಗೆ ಪರಿಶೀಲಿಸಿ, ನಿಜವಾದ ಕಡೆಗಳಲ್ಲಿ ಅವಶ್ಯಕತೆಗೆ ಅನುಗುಣವಾಗಿ ಟ್ಯಾಂಕರ್ನ ಮೂಲಕ ಕುಡಿಯುವ ನೀರು ಸರಬರಾಜು ಮಾಡುವಂತೆ, ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆಯನ್ನು ವಹಿಸಿ ಕುಡಿಯುವ ನೀರಿನ ಸಮಸ್ಯೆ […]
ಅಂಬಿ-ಅಯ್ಯ ಕಪ್- 2019 ಮೈಟಿ ಮೈಸೂರು ಸ್ಟಾರ್ಸ್ ಮಡಿಲಿಗೆ
ಕಲಿಯುಗದ ಕರ್ಣ,ರೆಬೆಲ್ ಸ್ಟಾರ್ ದಿ|ಅಂಬರೀಶ್ ಹಾಗೂ ರಾಷ್ಟ್ರೀಯ ಕ್ರೀಡಾಪಟು ದಿ|ಅಯ್ಯ ಸ್ಮರಣಾರ್ಥ ಶ್ರೀ ಮಹದೇಶ್ವರ ಕ್ರೀಡಾ ಸಂಸ್ಥೆಯು(S.M.C.C) ಮೈಸೂರಿನ ಕುಂಬಾರಕೊಪ್ಪಲಿನ ಕೆಂಪೇ ಗೌಡ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ 2 ದಿನಗಳ ಹಗಲಿನ ರಾಷ್ಟ್ರೀಯ ಮಟ್ಟದ ವ್ಯವಸ್ಥಿತ ಪಂದ್ಯಾಕೂಟ ಅಂಬಿ-ಅಯ್ಯ ಕಪ್ 2019 ಪ್ರಶಸ್ತಿಯನ್ನು ಬೆಂಗಳೂರಿನ ಮೈಟಿ ತಂಡದ ಆಟಗಾರರನ್ನೊಳಗೊಂಡ ಮೈಟಿ ಮೈಸೂರು ಸ್ಟಾರ್ಸ್ ತಂಡ ಜಯಿಸಿತು. ರಾಜ್ಯದ ವಿವಿಧೆಡೆಯದ 17 ತಂಡಗಳು ಸ್ಪರ್ಧಿಸಿದ್ದ ಈ ಪಂದ್ಯಾಕೂಟದಲ್ಲಿ ಲೀಗ್ ಹಂತದ ಹಣಾಹಣಿಗಳ ಬಳಿಕ ಮೈಟಿ ತಂಡ ಯುವ ಬೆಂಗಳೂರು ಹಾಗೂ ಮೂನ್ ಸ್ಟಾರ್ ಎಸ್.ಝಡ್.ಸಿ.ಸಿ ತಂಡ […]