Day: March 16, 2019
-
ಲೋಕಸಭಾ ಚುನಾವಣೆ- ಅನುಮತಿಯಿಲ್ಲದೇ ಜಾಹೀರಾತು ಪ್ರಸಾರಕ್ಕೆ ಅವಕಾಶವಿಲ್ಲ: ಡಿಸಿ
ಉಡುಪಿ: ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲೆಯ ಯಾವುದೇ ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಕುರಿತಾದ ಜಾಹೀರಾತುಗಳನ್ನು ಸ್ಥಳಿಯ ಕೇಬಲ್ ವಾಹಿನಿಗಳಲ್ಲಿ ಪ್ರಸಾರ ಮಾಡುವ ಮುನ್ನ ಕಡ್ಡಾಯವಾಗಿ ಎಂಸಿಎಂಸಿ ಸಮಿತಿಯ ಅನುಮತಿ ಅಗತ್ಯವಿದ್ದು, ಇದನ್ನು ಉಲ್ಲಂಘಿಸುವ ಚಾನೆಲ್ ಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಶನಿವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸ್ಥಳಿಯ ಕೇಬಲ್ ವಾಹಿನಿಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣೆಯಲ್ಲಿ…
-
ಮಾ.17: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ
ಉಡುಪಿ: ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಮಾ.17ರಂದು ಶ್ರೀಮನ್ಮಹಾರಥೋತ್ಸವ ನೆರವೇರಲಿದೆ. ದೇಗುಲದ ವಾರ್ಷಿಕ ಮಹೋತ್ಸವದ ಅಂಗವಾಗಿ ಮಾರ್ಚ್ 20ರ ವರೆಗೆ ಪ್ರತಿದಿನ ಮಹಾಪೂಜೆ, ಪ್ರಧಾನ ಹೋಮ, ಕಲಶಾಭಿಷೇಕ, ರಂಗಪೂಜೆ ಬಲಿ, ಅಷ್ಟಾವಧಾನ ಸೇವೆಗಳು, ಉತ್ಸವ ಬಲಿ, ಪೂರ್ಣಾಹುತಿ ತೆಪ್ಪೋತ್ಸವ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮಾ. 18ರಂದು ರಾತ್ರಿ ಆರಾಟೋತ್ಸವ ಹಾಗೂ ಮಾ. 20ರಂದು ಬೆಳಿಗ್ಗೆ ಬ್ರಹ್ಮಕುಂಭಾಭಿಷೇಕ ಜರುಗಲಿದೆ. ಮಾ. 17ರಂದು ಹೊರತುಪಡಿಸಿ ಉಳಿದ ಎಲ್ಲ ದಿನಗಳಲ್ಲಿ ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಲಿದೆ ಎಂದು…
-
ಮಣಿಪಾಲ ಆರ್ ಟಿಒ ಕಚೇರಿಗೆ ಎಸಿಬಿ ದಾಳಿ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರ್ ಟಿಒ ಅಧಿಕಾರಿ ವರ್ಣೇಕರ್
ಉಡುಪಿ: ಬೆಂಕಿಗೆ ಅಹುತಿಯಾದ ಕಾರಿನ ತೆರಿಗೆ ಮರುಪಾವತಿ ಸಂಬಂಧಿಸಿದಂತೆ ಮಾಲೀಕನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಉಡುಪಿ ಉಪ ಸಾರಿಗೆ ಆಯುಕ್ತ ಹಾಗೂ ಜಿಲ್ಲಾ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಆರ್.ಎಂ. ವರ್ಣೇಕರ್ ಮತ್ತು ಸಹಾಯಕ ಮುನಾಫ್ ರೆಡ್ ಹ್ಯಾಂಡ್ ಆಗಿ ಉಡುಪಿ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದಾರೆ. ಕಾರು ಮಾಲೀಕ ಉಡುಪಿಯ ವಿಘ್ನೇಶ್ ಎಂಬುವವರ ದೂರಿನಂತೆ ಇಂದು ಮಧ್ಯಾಹ್ನ ಮಣಿಪಾಲದ ಆರ್ ಟಿಒ ಕಚೇರಿಗೆ ಹಠಾತ್ ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸಂಭವಿಸಿದ…