ಮಾ:23 ಶ್ರೀಮದ್ ಕೇಶವೇಂದ್ರ ತೀರ್ಥ ಸ್ವಾಮಿಜಿ ಪುಣ್ಯತಿಥಿ ಆರಾಧನಾ ಮಹೋತ್ಸವ

ಕುಂದಾಪುರ: ಬಸ್ರೂರು ಶ್ರೀ ಕಾಶೀ ಮಠದ ಶಾಖಾ ಮಠದಲ್ಲಿ ಮಠದ ಗುರು ಪರಂಪರೆಯ ದ್ವಿತೀಯ ಗುರುಗಳಾದ ಶ್ರೀಮದ್ ಕೇಶವೇಂದ್ರ ತೀರ್ಥ ಸ್ವಾಮೀಜಿಯವರ ೩೪೯ನೇ ಪುಣ್ಯತಿಥಿ ಆರಾಧನಾ ಮಹೋತ್ಸವ ಮಾರ್ಚ್ ೨೩ ಶನಿವಾರದಂದು ನಡೆಯಲಿದೆ. ಅಂದು ಬೆಳಿಗ್ಗೆ ಗಣಪತಿ ಪುಣ್ಯಾಹ, ದೇವತಾ ಅನುಷ್ಠಾನ ಹವನ, ನಂತರ ಶ್ರೀ ದೇವರಿಗೆ ಹಾಗೂ ಗುರುಗಳ ವೃಂದಾವನದಲ್ಲಿ ಪಂಚಾಮೃತ ಅಭೀಷೇಕ, ಕಲಶಾಭಿಷೇಕ, ಊರ ಪರವೂರ ಭಜನಾ ಮಂಡಳಿಗಳಿಂದ ಭಜನಾ ಸೇವೆ, ಮಧ್ಯಾಹ್ನ ಮಹಾ ಮಂಗಳಾರತಿ ಹಾಗೂ ಸಂತರ್ಪಣೆ ನಡೆಯಲಿದೆ. ರಾತ್ರಿ ಗುರುಗುಣಗಾನ ವಿಶೇಷ […]

ಉನ್ನತ ಶಿಕ್ಷಣದಲ್ಲಿ ದೈಹಿಕ ಶಿಕ್ಷಣದ ಪಾತ್ರ-ವಿಶೇಷ ಕಾರ್ಯಕ್ರಮ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕದಲ್ಲಿ ಇತ್ತೀಚೆಗೆ ಐಕ್ಯುಎಸಿ ಮತ್ತು ಕ್ರೀಡಾ ವಿಭಾಗದ ಸಹಯೋಗದೊಂದಿಗೆ “ಉನ್ನತ ಶಿಕ್ಷಣದಲ್ಲಿ ದೈಹಿಕ ಶಿಕ್ಷಣದ ಪಾತ್ರ” ವಿಶೇಷ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ದೈಹಿಕ ಶಿಕ್ಷಣ ಬೋಧಕ ರಾಮಚಂದ್ರ ಪಾಟ್ಕರ್ ಆಗಮಿಸಿ, ವಿದ್ಯಾರ್ಥಿಗಳಿಗೆ ರಚನಾತ್ಮಕ ವ್ಯಕ್ತಿತ್ವ ನಿರ್ಮಾಣದಲ್ಲಿ ದೈಹಿಕ ಮಾನಸಿಕ ಕ್ಷಮತೆಯ ಬಗ್ಗೆ ವಿವರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪದವಿ […]

ಪ.ಜಾತಿ/ ಪ.ಪಂ.ದ ನಿರುದ್ಯೋಗ ಯುವಕ/ ಯುವತಿಯರಿಗೆ ವಿವಿಧ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ

ಉಡುಪಿ: ಕರ್ನಾಟಕದ ಏಕೈಕ ಕೇಂದ್ರೀಯ ಪ್ಲಾಸ್ಟಿಕ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ, ಮೈಸೂರು ಕಾಲೇಜಿನಲ್ಲಿ 2018-19 ನೇ ಸಾಲಿನ ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಊಟ, ವಸತಿ ಹಾಗೂ ಮಾಸಿಕ 500 ರೂ. ಶಿಷ್ಯ ವೇತನ, ತರಬೇತಿ ನಂತರ ಉದ್ಯೋಗಾವಕಾಶ ಕಲ್ಪಿಸಿ ಕೊಡಲಾಗುವುದು. ತರಬೇತಿ ಅವಧಿಯು 6 ತಿಂಗಳಾಗಿದ್ದು, ಸದರಿ ತರಬೇತಿಗೆ ಕನಿಷ್ಟ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ, ಐಟಿಐ, ಡಿಪ್ಲೋಮಾ, ಡಿಗ್ರಿ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. […]

ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಲು ಪಕ್ಷಗಳಿಗೆ ಡಿಸಿ ಸೂಚನೆ

ಉಡುಪಿ: ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಎಲ್ಲಾ ರಾಜಕೀಯ ಪಕ್ಷಗಳು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಸೋಮವಾರ ತಮ್ಮ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಪ್ರಚಾರದಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗದಂತೆ ಎಲ್ಲಾ ಪಕ್ಷಗಳು ಸ್ವಯಂ ರಕ್ಷಣೆ ವಹಿಸಬೇಕು. ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಚಟುವಟಿಕೆಗಳಿಂದ ದೂರವಿರಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಬಹಿರಂಗ ಪ್ರಚಾರವಲ್ಲದೇ, ಮಾಧ್ಯಮಗಳ ಮೂಲಕ ನಡೆಸುವ ಚುನಾವಣಾ […]

ಪರಿಸರ ಸ್ವಚ್ಛತೆ ಪ್ರತಿಯೊಬ್ಬರ ಕರ್ತವ್ಯ: ಜಿಲ್ಲಾ ನ್ಯಾಯಾಧೀಶರು

ಉಡುಪಿ: ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಟ್ಟುವುದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ  ಸಿಎಂ ಜೋಷಿ ಹೇಳಿದ್ದಾರೆ. ಅವರು ಭಾನುವಾರ,  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ವಕೀಲರ ಸಂಘ (ರಿ.) ಮತ್ತು ನಗರಸಭೆ ಉಡುಪಿ ಅವರ ಜಂಟಿ ಆಶ್ರಯದಲ್ಲಿ ನಡೆದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ವಚ್ಛ ಭಾರತ ಅಭಿಯಾನ ಭಾರತ ಸರ್ಕಾರದ  ರಾಷ್ಟ್ರೀಯ ಸ್ವಚ್ಛತೆ ಆಂದೋಲನವಾಗಿದೆ, […]