ಮಣಿಪಾಲ: ಯುವತಿ ಮೇಲೆ ಅತ್ಯಾಚಾರ, ಇಬ್ಬರ ಬಂಧನ
ಉಡುಪಿ: ಯುವತಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಾರಣಕಟ್ಟೆ ನಿವಾಸಿ ಜಗದೀಶ್ (24), ಪೆರ್ಡೂರು ನಿವಾಸಿ ಗಣೇಶ್ (26) ಗುರುತಿಸಲಾಗಿದೆ. ಇವರು ಮಾ.17 ರಂದು ಯುವತಿಯನ್ನು ಮಣಿಪಾಲ ಲಾಡ್ಜ್ ಒಂದಕ್ಕೆ ಕರೆದೊಯ್ದ ಅತ್ಯಾಚಾರ ಎಸಗಿದ್ದರು. ಬಳಿಕ ಆರೋಪಿಗಳು ಯುವತಿಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದರು. ಅಸ್ವಸ್ಥಗೊಂಡಿದ್ದ ಯುವತಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದು, ಆಸ್ಪತ್ರೆಯವರು ನೀಡಿದ ಮಾಹಿತಿಯಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಗೆ ನಡೆಸಿದ ಪೊಲೀಸರು ಮಾ.24 ರಂದು […]
ವಿಂಗ್ ಕಮಾಂಡರ್ ಅಭಿನಂದನ್ ರನ್ನು ಕೃಷ್ಣಮಠಕ್ಕೆ ಕಳುಹಿಸಿಕೊಡುವಂತೆ ರಕ್ಷಣಾ ಸಚಿವರಲ್ಲಿ ಪಲಿಮಾರು ಶ್ರೀ ವಿನಂತಿ
ಉಡುಪಿ: ಉಡುಪಿ ಕೃಷ್ಣಮಠಕ್ಕೆ ಇಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಕೊಟ್ಟು ಕೃಷ್ಣನ ದರ್ಶನ ಮಾಡಿದರು. ಬಳಿಕ ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ಶ್ರೀಪಾದರನ್ನು ಭೇಟಿ ಮಾಡಿ ಕೆಲಕಾಲ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ರಕ್ಷಣಾ ಸಚಿವರ ಬಳಿ ಉಡುಪಿಗೆ ಅಭಿನಂದನ್ ವರ್ಧಮಾನ್ ರನ್ನು ಕಳುಹಿಸಿಕೊಡಿ ಎಂದು ಶ್ರೀಪಾದರು ವಿನಂತಿಸಿಕೊಂಡರು. ಅಭಿನಂದನ್ ನನ್ನು ಉಡುಪಿಗೆ ಕಳುಹಿಸಿಕೊಡಿ, ವಿಂಗ್ ಕಮಾಂಡರ್ ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಪಾಕಿಸ್ತಾನದ ನೆಲದಲ್ಲೂ ಎದೆಗುಂದದೆ ದೇಶದ ಗೌರವ ಕಾಪಾಡಿದ್ದಾರೆ. […]
ಉಡುಪಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ: ಕೊನೆ ಕ್ಷಣದಲ್ಲಿ ಬಂಡಾಯ ಅಭ್ಯರ್ಥಿ ಅಮೃತ್ ಶೆಣೈ ನಾಮಪತ್ರ
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಪ್ರಮೋದ್ ಮಧ್ವರಾಜ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಯುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಎಐಸಿಸಿ ಸದಸ್ಯ ಅಮೃತ್ ಶೆಣೈ ಇಂದು ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯ ಸಾರಿದ್ದಾರೆ. ಅಂತಿಮ ಕ್ಷಣದಲ್ಲಿ ಸ್ಪರ್ಧೆಯ ಕುರಿತು ನಿರ್ಧಾರ ತೆಗೆದುಕೊಂಡ ಅಮೃತ್ ಶೆಣೈ ಮಧ್ಯಾಹ್ನ 2.45ರ ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರವನ್ನು ಸಲ್ಲಿಸಿದರು. ಅವರೊಂದಿಗೆ ಯಜ್ಞೇಶ್ ಆಚಾರ್ಯ, ಮನೋವೈದ್ಯ ಡಾ.ಪಿ.ವಿ. ಭಂಡಾರಿ, ಅಲೆನ್ ರೋಹನ್ ವಾಜ್, ಅನಿತಾ […]
ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ
ಉಡುಪಿ : ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ಚುನಾವಣಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಶಾಸಕರಾದ ಸುನಿಲ್ ಕುಮಾರ್, ಎಂ.ಪಿ ಕುಮಾರಸ್ವಾಮಿ, ಲಾಲಾಜಿ ಮೆಂಡನ್ ಸಾಥ್ ನೀಡಿದರು. ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕರ್ನಾಟಕದಲ್ಲಿ 23 ಕ್ಷೇತ್ರಕ್ಕೂ ಅಧಿಕ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ. ನರೇಂದ್ರ ಮೋದಿ […]
ಮೀನುಗಾರರ ಮನೆಗೆ ಕೇಂದ್ರ ರಕ್ಷಣಾ ಸಚಿವೆ ಭೇಟಿ: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಕಣ್ಣೀರಿಟ್ಟ ಕುಟುಂಬಸ್ಥರು
ಉಡುಪಿ: ನಾಪತ್ತೆಯಾಗಿರುವ ಮೀನುಗಾರರ ಕುಟುಂಬಗಳಿಗೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಭೇಟಿ ನೀಡಿ ಸಾಂತ್ವನ ಹೇಳಿದರು. ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಜೊತೆ ನಿರ್ಮಲಾ ಸೀತಾರಾಮನ್ ಅವರು ಮಲ್ಪೆಯಲ್ಲಿರುವ ಮೀನುಗಾರರ ಮನೆಗೆ ಭೇಟಿ ಕೊಟ್ಟಾಗ ಬಂಧುಗಳ ಕಣ್ಣೀರ ಕಟ್ಟೆ ಒಡೆಯಿತು. ಮೂರು ತಿಂಗಳ ಹಿಂದೆ ಮೀನುಗಾರಿಕೆಗೆ ತೆರಳಿದ ಮೀನುಗಾರರ ಹುಡುಕಾಟ ಇನ್ನೂ ನಡೆಯುತ್ತಲೇ ಇದೆ. ಕುಟುಂಬಸ್ಥರು ಇವತ್ತು ಬರ್ತಾರೆ ನಾಳೆ ಬರ್ತಾರೆ ಎಂದು ಕಾಯುತ್ತಲೇ ಇದ್ದಾರೆ. ಕಾಣೆಯಾದ ಚಂದ್ರಶೇಖರ, ದಾಮೋದರ ಅವರ ಮನೆಗಳಿಗೆ ಭೇಟಿ […]