ಲೋಕಸಭಾ ಚುನಾವಣೆ: ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ
ಉಡುಪಿ: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ 2019 ರ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದೇಶ ಪಡೆದ ಎಲ್ಲಾ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಮಾರ್ಚ್ 31 ರಂದು 118- ಬೈಂದೂರು ವಿಧಾನಸಭಾ ಕ್ಷೇತ್ರದ ಶೀರೂರು ಗ್ರೀನ್ ವ್ಯಾಲಿ ಇಂಟರ್ ನ್ಯಾಷನಲ್ ಸ್ಕೂಲ್, 119- ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂದಾಪುರ ಜೂನಿಯರ್ ಕಾಲೇಜು, 120- ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಗಿರಿ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆ, 121- ಕಾಪು ವಿಧಾನಸಭಾ ಕ್ಷೇತ್ರದ ಕಾಪು ಉಳಿಯಾರಗೋಳಿ ದಂಡತೀರ್ಥ […]
ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ: ಜಿಲ್ಲಾ ಆಸ್ಪತ್ರೆ ಉಡುಪಿಯಲ್ಲಿ ಮಾರ್ಚ್ 28 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಎನ್.ಪಿ.ಸಿ.ಡಿ.ಸಿ.ಎಸ್ ಹಾಗೂ ಎನ್.ಟಿ.ಸಿ.ಪಿ ಕಾರ್ಯಕ್ರಮದಡಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಆಸ್ಪತ್ರೆಯ ಹಿರಿಯ ನಾಗರಿಕರ ವಾರ್ಡ್ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕರ ಪ್ರಕಟಣೆ ತಿಳಿಸಿದೆ.
ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶ್ರೀಕೃಷ್ಣಮಠಕ್ಕೆ ಭೇಟಿ
ಉಡುಪಿ: ಶ್ರೀಕೃಷ್ಣ ಮಠಕ್ಕೆ ಕೇಂದ್ರ ಸರ್ಕಾರದ ರಕ್ಷಣಾ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಇವರು ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಶಾಸಕರಾದ ರಘುಪತಿ ಭಟ್, ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ, ಬಿ.ಜೆ.ಪಿ ಮುಖಂಡರಾದ ಉದಯಕುಮಾರ್ ಶೆಟ್ಟಿ, ಶ್ರೀಶ ನಾಯಕ್, ಪ್ರದೀಪ್ ರಾವ್, ವಿಜಯ್ ಭಟ್, ಭಾರತಿಶೆಟ್ಟಿ, ಸುವರ್ಧನ್ ನಾಯಕ್, ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ […]