ಹಿರಿಯಡಕ: ವೃತ್ತಿ ಕೌಶಲ್ಯ ಅಭಿವೃದ್ಧಿ ಕಾರ್ಯಾಗಾರ

ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡಕ ಇಲ್ಲಿನ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಮಾಹಿತಿ ಘಟಕ, ಐಕ್ಯುಎಸಿ  ಮತ್ತು ತ್ರಿಶಾ ಕ್ಲಾಸಸ್, ಉಡುಪಿ ಇವರ ಸಹಯೋಗದೊಂದಿಗೆ ಅಂತಿಮ ವರ್ಷದ ಬಿ.ಕಾಂ., ಬಿ.ಎ. ವಿದ್ಯಾರ್ಥಿಗಳಿಗೆ “ಪ್ರೀಪೇರಿಂಗ್ ಫಾರ್ ಕಾರ್ಪೋರೇಟ್ ಜಾಬ್ಸ್” ಎಂಬ ಕಾರ್ಯಾಗಾರವನ್ನು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತ್ರಿಶಾ ಕ್ಲಾಸಸ್, ಮಂಗಳೂರು ವಿಭಾಗದ ಮುಖ್ಯಸ್ಥ ಪ್ರೊ. ಚಂದನ್ ರಾವ್ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಮೂಡಿಸುವುದರೊಂದಿಗೆ ಕಾರ್ಪೋರೇಟ್ ವಲಯದಲ್ಲಿ ಉದ್ಯೋಗ ಪಡೆಯಲು ಬೇಕಾದ ಕೌಶಲ್ಯಗಳನ್ನು, […]

ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೋಳಿ ಮರಿಗಳು ಲಭ್ಯ

ಉಡುಪಿ: ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸುಮಾರು 500 ಗಿರಿರಾಜ ಕೋಳಿ ಮರಿಗಳು ಲಭ್ಯವಿದ್ದು, ಆಸಕ್ತರು ಖರೀದಿಸಬಹುದಾಗಿದೆ. ಕೋಳಿಯ ಮಾರಾಟ ಸ್ಟಾಕ್ ಇರುವವರೆಗೂ ಮಾತ್ರ ಲಭ್ಯವಿದ್ದು, ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 0820-2563923 ಅನ್ನು ಸಂಪರ್ಕಿಸುವಂತೆ ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.

ರಾಜ್ಯದಲ್ಲಿಯೂ ಈ ಬಾರಿ ಮೋದಿ ಅಲೆಯಿಲ್ಲ. ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಕೊಡುಗೆ ಇಲ್ಲ:  ಸಿಎಂ ಕುಮಾರಸ್ವಾಮಿ

ಕುಂದಾಪುರ: ಕರಾವಳಿಯಲ್ಲಷ್ಟೆ ಅಲ್ಲ. ರಾಜ್ಯದಲ್ಲಿಯೂ ಈ ಬಾರಿ ಮೋದಿ ಅಲೆಯಿಲ್ಲ. ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಯಾವುದೇ ಕೊಡುಗೆ ಇಲ್ಲ. ಕರಾವಳಿಯ ಮೂರು ಲೋಕಸಭಾ ಕ್ಷೇತ್ರಗಳು ಮೈತ್ರಿ ಪಾಲಾಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಅವರು ಬುಧವಾರ ಸಂಜೆ ಇಲ್ಲಿನ ನೆಹರೂ ಮೈದಾನದಲ್ಲಿ ಜಾತ್ಯಾತೀತ ಜನತಾ ದಳ ಹಾಗೂ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಮಹಿಳಾ ಮೀನುಗಾರರ ಸಮಾವೇಶಕ್ಕೆ ಆಗಮಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಅಭ್ಯರ್ಥಿಗಳಿಗೆ ತಮ್ಮ ಸಾಧನೆಗಳನ್ನು ಹೇಳಿ ಮತ ಕೇಳಲು ಆಗುತ್ತಿಲ್ಲ. […]

ಮೋದಿ ಎಂದು ಕೂಗೋಣ: ವೈರಲ್ ಸಂದೇಶಕ್ಕೆ ಸಿಡಿದೆದ್ದ ಖಾಕಿ!

ಕುಂದಾಪುರ: ಸಿಎಂ ಕುಮಾರಸ್ವಾಮಿ ಮೀನುಗಾರರ ಸಮಾವೇಶಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಮೋದಿ, ಮೋದಿ ಎಂದು ಘೋಷಣೆಗಳನ್ನು ಕೂಗೋಣ ಎಂದು ಬಿಜೆಪಿ ಕಾರ್ಯಕರ್ತರು ಎನ್ನಲಾಗಿರುವ ಯುವಕರು ವಾಟ್ಸ್ಯಾಪ್‍ನಲ್ಲಿ ಸಂದೇಶ ಹರಿಯಬಿಟ್ಟಿದ್ದಾರೆ. ವೈರಲ್ ಸಂದೇಶವನ್ನರಿತ ಕುಂದಾಪುರ ಡಿವೈಎಸ್‍ಪಿ ನೇತೃತ್ವದ ಪೊಲೀಸರ ತಂಡ ಸಂದೇಶ ಫಾರ್ವಡ್ ಮಾಡಿ ಅಹಿತಕರ ಘಟನೆಗಳಿಗೆ ಹೊಂಚು ಹಾಕುತ್ತಿರುವ ಒಂದಷ್ಟು ಮಂದಿ ಯುವಕರನ್ನು ಠಾಣೆಗೆ ಕರೆತಂದಿದ್ದಾರೆ. ಬಿಗು ಬಂದೋಬಸ್ತ್: ಸಿಎಂ ಕಾರ್ಯಕ್ರಮದಲ್ಲಿ ಯಾವುದೇ ಅಹಿಕರ ಘಟನೆಗಳು ನಡೆಯದಂತೆ ಬಿಗು ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ನಾಲ್ಕು […]

ಮತ ರಹಸ್ಯ ಬಯಲು ಮಾಡಿದರೆ ಕಠಿಣ ಕ್ರಮ: ಡಿಸಿ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ವಿವಿಧ ಖಾಸಗಿ ಟಿವಿ ವಾಹಿನಿಗಳು, ಲೋಕಸಭಾ ಚುನಾವಣೆಯ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯುವ ಕಾರ್ಯಕ್ರಮ ನಡೆಸುತ್ತಿದ್ದು,  ನಿಮ್ಮ ಮತ ಯಾರಿಗೆ? ಎಂದು ನೇರವಾಗಿ ಮತದಾರರನ್ನು ಪ್ರಶ್ನಿಸಿ ಅಭಿಪ್ರಾಯ ಸಂಗ್ರಹಿಸಿ ಪ್ರಸಾರ ಮಾಡುತ್ತಿದ್ದು, ಇದು ಚುನಾವಣಾ ಗೋಪ್ಯತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಅಭಿಪ್ರಾಯ ಸಂಗ್ರಹಣೆ ನಡೆಸಿದರೆ ಸಂಬಂದಪಟ್ಟ ವಾಹಿನಿ ಹಾಗೂ ಸಾರ್ವಜನಿಕರ ವಿರುದ್ಧ ಕೇಸು ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಾಪಾಟಿ ಎಚ್ಚರಿಕೆ ನೀಡಿದ್ದಾರೆ. ಅವರು ಬುಧವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ […]