ಎಸ್.ಎಸ್.ಎಲ್.ಸಿ ಪರೀಕ್ಷೆ: 172 ಮಂದಿ ಗೈರು

ಉಡುಪಿ: ಜಿಲ್ಲೆಯಲ್ಲಿ ಗುರುವಾರ ನಡೆದ ಎಸ್‍ಎಸ್‍ಎಲ್‍ಸಿ ತೃತೀಯ ಭಾಷೆ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಒಟ್ಟು 13314 ಮಂದಿ ಪರೀಕ್ಷೆ ಬರೆದಿದ್ದಾರೆ. ಜಿಲ್ಲೆಯಲ್ಲಿ ಪರೀಕ್ಷೆಗೆ ಒಟ್ಟು 13486 ಮಂದಿ ನೊಂದಾಯಿಸಿದ್ದು, ಇದರಲ್ಲಿ 172 ಮಂದಿ ಗೈರು ಹಾಜರಾಗಿದ್ದಾರೆ. ಪರೀಕ್ಷೆಗೆ ನೊಂದಾಯಿಸಿದ ರೆಗ್ಯುಲರ್ ಮತ್ತು ರೆಗ್ಯುಲರ್ ಪುನರಾವರ್ತಿತ 12956 ಮಂದಿ ವಿದ್ಯಾರ್ಥಿಗಳಲ್ಲಿ 123 ಮಂದಿ ಗೈರು ಹಾಜರಾಗಿದ್ದು, 12833 ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ. 423 ಮಂದಿ ಖಾಸಗಿಯಾಗಿ ಪರೀಕ್ಷೆಗೆ ನೊಂದಾಯಿಸಿದ್ದ ಅಭ್ಯರ್ಥಿಗಳಲ್ಲಿ 49 ಮಂದಿ ಗೈರು ಹಾಜರಾಗಿದ್ದು, 374 ಮಂದಿ […]
ಉಡುಪಿ ಲೋಕಸಭಾ ಚುನಾವಣೆ, ಮದ್ಯ ಮಾರಾಟ ನಿಷೇಧ: ಹೆಪ್ಸಿಬಾ ರಾಣಿ

ಉಡುಪಿ: ಚುನಾವಣಾ ಆಯೋಗವು ಸಾರ್ವತ್ರಿಕ ಲೋಕಸಭಾ ಚುನಾವಣೆ 2019 ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ಮತದಾನ ನಡೆಸಲು ಚುನಾವಣೆ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮತದಾನ ಪ್ರಾರಂಭವಾಗುವ ದಿನಾಂಕದ 48 ಗಂಟೆಗಳ ಮುಂಚಿತವಾಗಿ ಅಂದರೆ ಎಪ್ರಿಲ್ 16 ರಂದು ಸಂಜೆ 6 ರಿಂದ ಮತದಾನದ […]
ಮೈತ್ರಿ ಪಕ್ಷದ ಅಭ್ಯರ್ಥಿಗಳ ಮೇಲೆ ಮಾನಸಿಕ ಒತ್ತಡ ತರಬೇಕು ಎನ್ನುವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ನಿರಂತರವಾಗಿ ಐಟಿ ದಾಳಿಯನ್ನು ಸಂಘಟಿಸುತ್ತಿದೆ: ಎಚ್.ಡಿ.ಕುಮಾರಸ್ವಾಮಿ

ಕುಂದಾಪುರ: ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ನಮ್ಮ ಕುಟುಂಬ ಸದಸ್ಯರು ಹಾಗೂ ಮೈತ್ರಿ ಪಕ್ಷದ ಅಭ್ಯರ್ಥಿಗಳ ಮೇಲೆ ಮಾನಸಿಕ ಒತ್ತಡ ತರಬೇಕು ಎನ್ನುವ ಕಾರಣಕ್ಕಾಗಿ ಬಿಜೆಪಿ ಸರ್ಕಾರ ನಿರಂತರವಾಗಿ ಐಟಿ ದಾಳಿಯನ್ನು ಸಂಘಟಿಸುತ್ತಿದೆ. ಇಂತಹ ವ್ಯವಸ್ಥಿತ ದಾಳಿಯಿಂದ ಯಾವುದೆ ರೀತಿಯಿಂದಲೂ ನಾವು ಆತಂಕಕ್ಕೆ ಒಳಗಾಗಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಲ್ಲಿನ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸೌಕೂರು ಬೀದಿ ಮನೆಯ ಜ್ಯೋತಿಷಿ ಸೊಕ್ಕೊಟ್ಟು ಮಂಜುನಾಥಯ್ಯ (ಹೆಬ್ಬಾರ್) ಅವರ ಮನೆಗೆ ಭೇಟಿ ನೀಡಿದ ವೇಳೆ ಅವರು ಮಾಧ್ಯಮ […]
ಚುನಾವಣಾ ಕರ್ತವ್ಯಕ್ಕೆ ಅಡ್ಡಿ ಪಡಿಸಿದರೆ ಕಠಿಣ ಕ್ರಮ – ಕೇಂದ್ರ ವೀಕ್ಷಕರ ಸೂಚನೆ

ಲೋಕಸಭಾ ಚುನಾವಣೆ ಪ್ರಕ್ರಿಯೆಯಲ್ಲಿ ತೊಡಗಿರುವ ವಿವಿಧ ಅಧಿಕಾರಿಗಳ ಮತ್ತು ಸಿಬ್ಬಂಧಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕೇಂದ್ರ ಚುನಾವಣಾ ಆಯೋಗದ ವೀಕ್ಷಕ ಕೃಷ್ಣ ಕುನಾಲ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಚುನಾವಣಾ ಸಿದ್ಧತೆ ಸಭೆ ನಡೆಸಿ ಮಾತ ನಾಡಿದರು. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸಲು ಹಲವಾರು ಅಧಿಕಾರಿಗಳು ಸಿಬ್ಬಂಧಿಗಳು ತೊಡಗಿಸಿಕೊಂಡಿದ್ದಾರೆ. ತಪಾಸಣಾ ತಂಡದ ಅಧಿಕಾರಿಗಳು ವಿವಿದೆಡೆ ತಪಾಸಣೆಗೆ ಹೋದಾಗ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಲವಾರು ಪ್ರಕರಣ ಕಂಡುಬಂದಿದೆ. ಈ […]