Day: April 7, 2019
-
ಕುಂದಾಪುರ: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೋದಿ ಅಲೆಯಲ್ಲಿ ಗೆದ್ದವರು ಹೆಸರು ಉಳಿಸಿಕೊಂಡಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಜನರಿಗೆ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ವಿರುದ್ದ ಅಲೆ ಇದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಹೇಳಿದರು. ಅವರು ಭಾನುವಾರ ಮರವಂತೆಯ ಸಾಧನ ಸಭಾಭವನದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ರೈತರು, ಬಡವರು, ಯುವಕರನ್ನು ಬಿಜೆಪಿ ನೇತೃತ್ವದ ಮೋದಿ ಸರ್ಕಾರ ಸಂಪೂರ್ಣ ನಿರ್ಲಕ್ಷಿಸಿದೆ. ಕೊಟ್ಟ ಭರವಸೆಗಳನ್ನು ಇದುವರೆಗೆ ಈಡೇರಿಸಿಲ್ಲ.…
-
ದೇವರ ದಯೆ ಇದ್ದರೆ ದೇವೇಗೌಡರೂ ಕೂಡ ಮನೆಗೆ ಹೋಗ್ತಾರೆ: ಯಡಿಯೂರಪ್ಪ ಭವಿಷ್ಯ
ಕುಂದಾಪುರ: ಈ ಬಾರಿಯ ಚುನಾವಣೆಯಲ್ಲಿ ಮುನ್ನೂರಕ್ಕೂ ಅಧಿಕ ಲೋಕಸಭಾ ಕ್ಷೇತ್ರವನ್ನು ಗೆದ್ದು ಮತ್ತೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತದೆ. ರಾಜ್ಯದ ಉದ್ದಗಲಕ್ಕೂ ಮೋದಿ ಗಾಳಿ ಬೀಸುತ್ತಿದ್ದು, ರಾಜ್ಯದಲ್ಲಿ ೨೨ ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ. ದೇವರ ದಯೆ ಇದ್ದರೆ ಮಾಜಿ ಪ್ರಧಾನಿ ದೇವೇಗೌಡರೂ ಕೂಡ ತುಮಕೂರಿನಲ್ಲಿ ಮನೆಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಅವರು ಭಾನುವಾರ ಸಂಜೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆಂಪುವಿನಲ್ಲಿ ಶಿವಮೊಗ್ಗ…
-
ಚುನಾವಣಾ ಸಿಬ್ಬಂದಿಗೆ ಪಂಚಾಯತ್ ಮೂಲಕ ಊಟದ ವ್ಯವಸ್ಥೆ- ಜಿಲ್ಲಾಧಿಕಾರಿ
ಉಡುಪಿ: ಏಪ್ರಿಲ್ 18 ರಂದು ನಡೆಯುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಚುನಾವಣೆಯ ಮತಗಟ್ಟೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಸಮೀಪದ ಪಂಚಾಯತ್ ನಲ್ಲಿ ಊಟ ಸಿದ್ದಪಡಿಸಿ, ಕರ್ತವ್ಯ ನಿರತ ಮತಗಟ್ಟೆಗಳಿಗೆ ಸರಬರಾಜು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಭಾನುವಾರ ಸೈಂಟ್ ಸಿಸಿಲಿ ಶಾಲೆಯಲ್ಲಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿಗಳಿಗೆ ಏರ್ಪಡಿಸಲಾದ ತರಬೇತಿ ಕಾರ್ಯಕ್ರಮ ವೀಕ್ಷಿಸಿ ಮಾತನಾಡಿದರು. ಸುಗಮ ಚುನಾವಣೆಗಾಗಿ, ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಪ್ರತಿಯೊಬ್ಬ ಅಧಿಕಾರಿ ಮತ್ತು ಎಲ್ಲಾ ಸಿಬ್ಬಂದಿಗಳ ಪಾತ್ರ ಅತ್ಯಂತ…
-
ಶಿರೂರು ಮಠಕ್ಕೆ ಯೋಗ್ಯ ಶಿಷ್ಯ ಸಿಗಲಿದ್ದಾನೆ : ವಿಶ್ವವಲ್ಲಭ ಸ್ವಾಮೀಜಿ
ಉಡುಪಿ:ಶಿರೂರು ಮಠಕ್ಕೆ ಯೋಗ್ಯ ಶಿಷ್ಯನನ್ನು ನೋಡಿ ಇಟ್ಟಿದ್ದೇವೆ. ಆತನಿಗೆ ಸಂನ್ಯಾಸ ಸ್ವೀಕರಿಸುವ ಎಲ್ಲ ಅರ್ಹತೆಗಳಿವೆ. ಆದರೂ ಈಗಲೇ ಎಲ್ಲವನ್ನೂ ತೀರ್ಮಾನಿಸಲು ಆಗಲ್ಲ. ಈಗಲೇ ಆತನ ಹೆಸರನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಸೋದೆ ಮಠದ ವಿಶ್ವವಲ್ಲಭ ಸ್ವಾಮೀಜಿ ಹೇಳಿದರು. ಉಡುಪಿ ಶಿರೂರು ಮಠದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಶಿಷ್ಯನಾಗಲು ಅರ್ಹತೆಯುಳ್ಳವನು ಈಗಾಗಲೇ ಸೋದೆ ಮಠದ ಗುರುಕುಲದಲ್ಲಿ ಅಧ್ಯಯನ ಮಾಡುತ್ತಿದ್ದು, ಮೂರು ವರ್ಷ ಕಾಲ ಆತನ ಚಟುವಟಿಕೆಗಳನ್ನು ಗಮನಿಸುತ್ತೇವೆ. ಸಂನ್ಯಾಸ ಸ್ವೀಕರಿಸಲು ಯೋಗ್ಯರೆಂದು ಮನಗಂಡ ಮೇಲೆ ಉತ್ತರಾಧಿಕಾರಿಯನ್ನಾಗಿ…
-
ಶ್ರೀ ಕೃಷ್ಣ ಮಠಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ
ಶ್ರೀ ಕೃಷ್ಣ ಮಠಕ್ಕೆ ಕರ್ನಾಟಕದ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರು ಆಗಮಿಸಿ ಶ್ರೀ ಕೃಷ್ಣ ದೇವರ ದರ್ಶನ ಮಾಡಿ ಪರ್ಯಾಯ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆ.ಡಿ .ಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್,ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ,ವಿಧಾನ ಪರಿಷತ್ ಸದಸ್ಯ ಬೋಜೆ ಗೌಡ, ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.