ತಾಕತ್ ಇದ್ದರೆ ಕೇಸ್ ರೀ-ಓಪನ್ ಮಾಡಿ: ಕುಮಾರಸ್ವಾಮಿಗೆ ಯಡಿಯೂರಪ್ಪ ಸವಾಲು

ಕುಂದಾಪುರ: ನನ್ನ ವಿರುದ್ದದ ಕೇಸು ತಾಕತ್ತಿದ್ದರೆ ರೀ ಓಪನ್ ಮಾಡಲಿ. ಮಾಡುವುದಿದ್ದರೆ ೨೩ರ ಮೊದಲು ಮಾಡಲಿ. ಮೇ ೨೩ ರ ಬಳಿಕ ಕುಮಾರಸ್ವಾಮಿ ಮನೆಗೆ ಹೋಗ್ತಾರೆ. ಆಮೇಲೆ ಕೇಸು ನಾವು ಓಪನ್ ಮಾಡಿಸುತ್ತೇವೆ ಎಂದು ಕುಮಾರಸ್ವಾಮಿ ವಿರುದ್ದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದ್ದಾರೆ. ಚುನಾವಣೆ ನಂತರ ಯಡಿಯೂರಪ್ಪನವರ ಕೇಸು ರೀ ಓಪನ್ ಎಂಬ ಸಿಎಂ ಹೇಳಿಕೆ ವಿಚಾರವಾಗಿ ಭಾನುವಾರ ನೆಂಪುವಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆ, ತಾಕತ್ತು ಮುಖ್ಯಮಂತ್ರಿಯವರಿಗಿಲ್ಲ. ಈ ಹಿಂದೆ ಎಲ್ಲವನ್ನೂ […]
ಪೇಜಾವರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಸಿಎಂ ಕುಮಾರಸ್ವಾಮಿ

ಉಡುಪಿ: ಲೋಕಸಭೆ ಚುನಾವಣೆ ಹಿನ್ನೆಲೆ ಯಲ್ಲಿ ಭಾನುವಾರ ಉಡುಪಿಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪೇಜಾವರ ಮಠಕ್ಕೆ ಭೇಟಿ ನೀಡಿ ವಿಶ್ವೇಶತೀರ್ಥ ಸ್ವಾಮೀಜಿ ಅವರೊಂದಿಗೆ ಕೆಲಕಾಲ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಪೇಜಾವರ ಕಿರಿಯ ವಿಶ್ವಪ್ರಸನ್ನ ಸ್ಗಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲ, ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಉಡುಪಿ ಚೊಕ್ಕಮಗಳೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿಇದ್ದರು.
ಅಭಿವೃದ್ದಿಗೆ ಹಣ ಕೊಡಿ ಎಂದರೆ ಲಿಂಬು ಕೈಯ್ಯಲ್ಲಿಟ್ಟು ತಿರುಗುತ್ತಾರೆ. ರೇವಣ್ಣಗೆ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯ

ಕುಂದಾಪುರ: ಕಳೆದ ಒಂಭತ್ತು ತಿಂಗಳುಗಳಿಂದ ಪರಸ್ಪರ ಕಚ್ಚಾಟ ಮಾಡಿಕೊಳ್ಳುತ್ತಲೇ ದೋಸ್ತಿ ಸರ್ಕಾರ ಕಾಲಹರಣ ಮಾಡಿದೆ. ಅಭಿವೃದ್ದಿ ಕೆಲಸಗಳು ಆಗುತ್ತಿಲ್ಲ. ಕ್ಷೇತ್ರದ ಅಭಿವೃದ್ದಿಗಾಗಿ ಹಣ ಬಿಡುಗಡೆ ಮಾಡಿ ಎಂದರೆ ಸಚಿವ ರೇವಣ್ಣನವರು ಬಲಗೈಲಿ ನಾಲ್ಕು, ಎಡಗೈಲಿ ನಾಲ್ಕು ಲಿಂಬೆ ಹಣ್ಣುಗಳನ್ನು ಇಟ್ಟುಕೊಂಡು ತಿರುಗಾಡುತ್ತಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವ್ಯಂಗ್ಯವಾಡಿದ್ದಾರೆ. ಅವರು ಭಾನುವಾರ ಸಂಜೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆಂಪುವಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರರವರ ಪರ ಚುನಾವಣಾ […]
ಮೋದಿ ಮಂಗಳೂರು ಮೂಲದ ಸಂಸ್ಥೆಗಳನ್ನ ದಿವಾಳಿ ಎಬ್ಬಿಸಿದ್ದಾರೆ, ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಕುಮಾರಸ್ವಾಮಿ

ಉಡುಪಿ: ಉಡುಪಿ ಚಿಕ್ಕಮಗಳೂರು ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಲು ಇಂದು ಉಡುಪಿಗೆ ಬಂದಿದ್ದ ಸಿಎಂ ಕುಮಾರಸ್ವಾಮಿ, ಕೇಂದ್ರ ಬಿಜೆಪಿ ಸರಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದರು. ಮಂಡ್ಯ ರಾಜಕೀಯ ಕುರಿತು ಪ್ರತಿಕ್ರಿಯಿಸಿದ ಎಚ್ ಡಿಕೆ, ಮಂಡ್ಯದಲ್ಲಿ ನಮ್ಮನ್ನು ಮುಗಿಸಲು ಮೊದಲೇ ಪ್ಲಾನ್ ಆಗಿತ್ತು ಎಂದು ಹೇಳಿದರು. ಬಿಜೆಪಿ ಪ್ರಚಾರಕ್ಕೆ ಮೋದಿಯೇ ಮುಖ. ಮೋದಿ ಇಲ್ಲಾಂದ್ರೆ ದೇಶಕ್ಕೆ ರಕ್ಷಣೆ ಇಲ್ಲ ಅಂತ ಬಿಂಬಿಸಲಾಗ್ತಿದೆ ಎಂದು ಹೇಳಿದರು. ಕರಾವಳಿಯ ಮೂರು ಜಿಲ್ಲೆಗಳ ಜನರು ತಿಳುವಳಿಕೆ ಉಳ್ಳವರು, ಪ್ರಜ್ಞಾವಂತರು ತಿಳುವಳಿಕ ಇರುವ […]