ಮತಗಟ್ಟೆಯಲ್ಲಿ ಸೌಲಭ್ಯ: ಲೋಪವಾದರೆ ಕಠಿಣ ಕ್ರಮ ಸಿಇಓ ಎಚ್ಚರಿಕೆ

ಉಡುಪಿ : ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕಾಗಿದ್ದು, ಇದರಲ್ಲಿ ಯಾವುದೇ ರೀತಿಯ ಲೋಪವಾದರೆ ಸಂಬಂದಪಟ್ಟವರ ವಿರುದ್ದ ಕಠಿಣ ಕ್ರಮ ಜರುಗಿಸುವುದಾಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ ರೂಪೇಶ್ ಎಚ್ಚರಿಸಿದ್ದಾರೆ.      ಅವರು ಶುಕ್ರವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತಗಟ್ಟೆ ಸೌಲಭ್ಯ ಕುರಿತು ನಗರ ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಪಿಡಿಓಗಳ ಸಭೆ ನಡೆಸಿ  ಮಾತನಾಡಿದರು.      ಪ್ರತಿಯೊಂದು ಮತಗಟ್ಟೆಯಲ್ಲಿ ಕುಡಿಯುವ ನೀರಿನ ಸೌಲಭ್ಯ, […]

ಉಡುಪಿ: ಮತಗಟ್ಟೆಯಲ್ಲಿ ಮತದಾರರಿಗೆ ಮಾಹಿತಿ ನೀಡುವ ಪೋಸ್ಟರ್ ಬಿಡುಗಡೆ

ಉಡುಪಿ: ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ನಡೆಯುವ ಚುನಾವಣೆಯಲ್ಲಿ, ಮತದಾರರಿಗೆ ಮತಗಟ್ಟೆಯ ಕುರಿತು ಮಾಹಿತಿ ನೀಡಲು ವಿವಿಧ ಬಗೆಯ ಪೋಸ್ಟರ್ ಗಳನ್ನು ಚುನಾವಣಾ ಆಯೋಗ ಬಿಡುಗಡೆಗೊಳಿಸಿದೆ. ಮತಗಟ್ಟೆಯಲ್ಲಿ ವಿವಿಧ ಅಧಿಕಾರಿಗಳು ನಿರ್ವಹಿಸುವ ಕರ್ತವ್ಯಗಳ ವಿವರದ ಪೋಸ್ಟರ್ ನೀಡಲಾಗಿದ್ದು, ಇದರಿಂದ ಮತದಾರರು ಮತಗಟ್ಟೆಯಲ್ಲಿ ಯಾವ ಅಧಿಕಾರಿಗಳ ಬಳಿ ತೆರಳಬೇಕು , ಏನು ಮಾಡಬೇಕು  ಮುಂತಾದ ಅನವಶ್ಯಕ ಗೊಂದಲಕ್ಕೆ ಒಳಗಾಗುವುದನ್ನು ತಪ್ಪಿಸಬಹುದಾಗಿದೆ. ಮತದಾನ ಕೇಂದ್ರದಲ್ಲಿ ಯಾವ ಗುರುತಿನ ದಾಖಲೆ ತೋರಿಸಿ ಮತದಾನ ಮಾಡಬಹುದು  ಮಾಹಿತಿಯಿದ್ದು, ಮತದಾರರ ಪೋಟೋ ಸ್ಲಿಪ್ ಮಾಹಿತಿಗಾಗಿಯೇ […]

ಎ.13ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ 

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಎ.13ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆಯಲಿರುವ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದು, ಈಗಾಗಲೇ ಎಲ್ಲ ರೀತಿಯ ಸಿದ್ಧತೆಗೆಗಳು ನಡೆದಿದೆ. ಪ್ರಧಾನಿ ಮೋದಿ ಅವರು ಅಪರಾಹ್ನ 2.45ಕ್ಕೆ ಮಧುರೈಯಿಂದ ವಿಶೇಷ ವಿಮಾನದಲ್ಲಿ ಹೊರಡಲಿದ್ದು, ಸಂಜೆ 4 ಗಂಟೆಗೆ ಮಂಗಳೂರು ವಿಮಾನ‌ ನಿಲ್ದಾಣ ತಲುಪಲಿದ್ದಾರೆ. ಅನಂತರ ಕೇಂದ್ರ ಮೈದಾನಕ್ಕೆ ಆಗಮಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. ಸಭೆಯ ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ನಗರದಲ್ಲಿ ಬಿಗಿ ಬಂದೋಬಸ್ತ್ ಪ್ರಧಾನಿ ಮೋದಿ ಆಗಮನದ […]

ಉಡುಪಿ:ನೀತಿ ಸಂಹಿತೆ ಉಲ್ಲಂಘನೆ, ಸರ್ಕಾರಿ ನೌಕರ ಅಮಾನತು

ಉಡುಪಿ:  ಕಾರ್ಕಳದಲ್ಲಿ ನಡೆದ ಮುಖ್ಯಮಂತ್ರಿಗಳ ಸಮಾಲೋಚನಾ ಕಾರ್ಯಕ್ರಮದಲ್ಲಿ , ಮುಖ್ಯಮಂತ್ರಿಯವರ ಜೊತೆ ಜೆಡಿಎಸ್ ಅಭ್ಯರ್ಥಿ ಪ್ರಮೋದ್ ಮಧ್ವರಾಜ್  ಮತ್ತಿತರರು  ಭಾಗವಹಿಸಿದ್ದು,  ಈ ಕಾರ್ಯಕ್ರಮದಲ್ಲಿ  ಒರ್ವ ವ್ಯಕ್ತಿ , ಸರ್ವೆಯಾಗಿರುವ ಡಿಸಿ ಮನ್ನಾ ಭೂಮಿಯನ್ನು ದಲಿತರಿಗೆ ಹಂಚಿಕೆ ಮಾಡುವ ಬಗ್ಗೆ, ಗುತ್ತಿಗೆ ಆಧಾರದಲ್ಲಿ ದಲಿತರಿಗೆ ಅವಕಾಶ ಕಲ್ಪಿಸುವ ಬಗ್ಗೆ ಹಾಗೂ ಸ್ವ ಉದ್ಯೋಗಕ್ಕೆ ಅನುದಾನ ನೀಡುವ ಬಗ್ಗೆ ಮನವಿ ಮಾಡಿರುವುದು ಕಂಡು ಬಂದಿದ್ದು,  ಇವರು, ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕೊಡವೂರು , ಇಲ್ಲಿನ ಮುಖ್ಯೋಪಧ್ಯಾಯ ಸುಂದರ್ […]

‘ಪಿಎಂ ನರೇಂದ್ರ ಮೋದಿ’ ಸಿನೆಮಾ ಬಿಡುಗಡೆಗೆ ಚುನಾವಣಾ ಆಯೋಗ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಚರಿತ್ರೆಯನ್ನು ಆಧರಿಸಿದ ‘ಪಿಎಂ ನರೇಂದ್ರ ಮೋದಿ’ ಬಯೋಪಿಕ್‌ (ಸಿನೆಮಾ) ಬಿಡುಗಡೆಗೆ ಚುನಾವಣಾ ಆಯೋಗವು  ಬುಧವಾರ ತಡೆ ನೀಡಿದೆ. ಹಾಗೆಯೇ ‘ನಮೋ ಟಿವಿ’ಯ ಪ್ರಸಾರಕ್ಕೂ ಲೋಕಸಭೆ ಚುನಾವಣೆ ಮುಗಿಯುವವರೆಗೆ ನಿರ್ಬಂಧ ಹೇರಲಾಗಿದೆ. ‘ನಮೋ ಟಿ.ವಿ’ಯಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿತ್ತು ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ‘ಪಿಎಂ ನರೇಂದ್ರ ಮೋದಿ’ ಬಯೋಪಿಕ್‌ ಏಪ್ರಿಲ್ 11ರಂದು ಬಿಡುಗಡೆಯಾಗಬೇಕಿತ್ತು. ಲೋಕಸಭೆಯ ಮೊದಲ ಹಂತದ ಮತದಾನವೂ ಅಂದೇ ನಡೆಯಲಿದೆ. ಆದರೆ ಅದಕ್ಕೂ ಒಂದು ದಿನ […]