ಭಾರತ ಬದಲಾಗಿದ್ದು ನಿಮ್ಮ ಒಂದು‌ ಮತದಿಂದ, ಮಂಗಳೂರು ಬೃಹತ್ ಸಮಾವೇಶದಲ್ಲಿ ಪ್ರಧಾನಿ ಮೋದಿ

ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ 5 ವರ್ಷಗಳ ಆಡಳಿತದಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಿದೆ. ಹಲವು ರೀತಿಯಲ್ಲಿ ಭಾರತವನ್ನು ಬದಲಾಯಿಸಿದೆ. ಭಾರತದ ಹೆಸರು ಜಗತ್ತಿನ ಪ್ರತಿಯೊಂದು ದೇಶದಲ್ಲಿ ಕೇಳುತ್ತಿದೆ. ಪ್ರತಿಯೊಬ್ಬರು ಭಾರತವನ್ನು ಗೌರವಿಸುತ್ತಿದ್ದಾರೆ. ಇದು ನನ್ನಿಂದ ಆಗಿದ್ದಲ್ಲ, ನಿಮ್ಮ ಒಂದು ಮತದಿಂದ ಈ ಬದಲಾವಣೆ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳೂರಿನ ನೆಹರೂ ಮೈದಾನದಲ್ಲಿ ಏ.13ರಂದು ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ನಮ್ಮದು ವಂಶೋದಯ ಅಲ್ಲ, ಅಂತ್ಯೋದಯ್. ಅಂತ್ಯೋದಯದಲ್ಲಿ […]

ಲೋಕಸಭಾ ಚುನಾವಣೆ: ಸಂತೆ, ಜಾತ್ರೆ ನಿಷೇಧ

ಲೋಕಸಭಾ ಚುನಾವಣೆ 2019 ಕ್ಕೆ ಸಂಬಂದಿಸಿದಂತೆ, ಏಪ್ರಿಲ್ 18 ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನ ನಡೆಯಲಿದ್ದು, ಈ ಹಿನ್ನಲೆಯಲ್ಲಿ, ಕುಂದಾಪುರ, ಉಡುಪಿ, ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ, ಏಪ್ರಿಲ್ 16 ರಂದು  ಸಂಜೆ 6 ಗಂಟೆಯಿಂದ ಏಪ್ರಿಲ್ 18 ರ ರಾತ್ರಿ 12 ಗಂಟೆಯವರೆಗೆ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶಿಸಿದ್ದಾರೆ.

ಮತ ಪ್ರಮಾಣ ಸಂಗ್ರಹದಲ್ಲಿ ಎಚ್ಚರ ವಹಿಸಿ- ಉಡುಪಿ ಜಿಲ್ಲಾಧಿಕಾರಿ

 ಉಡುಪಿ: ಏಪ್ರಿಲ್ ೧೮ ರಂದು ನಡೆಯುವ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪ್ರತಿ ಮತಗಟ್ಟೆಯಿಂದ ಮತದಾನದ ಪ್ರಮಾಣವನ್ನು ಸಂಗ್ರಹಿಸುವಾಗ ಅತ್ಯಂತ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದ್ದಾರೆ.ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಲೋಕಸಬಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಸಂಗ್ರಹ ಸಂಗ್ರಹಿಸಲು ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನಡೆದ ತರಬೇತಿ ಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮತದಾನ ಪ್ರಾರಂಭವಾಗುವ ಹಿಂದಿನ ದಿನದಂದು, ಮಸ್ಟರಿಂಗ್ ಕೇಂದ್ರಗಳಿಗೆ ಎಲ್ಲಾ ಸಿಬ್ಬಂದಿ ತೆರಳಿದ ಬಗ್ಗೆ ಮತ್ತು […]

ಲೋಕಸಭಾ ಚುನಾವಣೆ- 144 ಸೆಕ್ಷನ್ ಜಾರಿ: ಹೆಪ್ಸಿಬಾ ರಾಣಿ

ಉಡುಪಿ: ಲೋಕಸಭಾ ಚುನಾವಣೆ 2019 ಕ್ಕೆ ಸಂಬಂದಿಸಿದಂತೆ, ಏಪ್ರಿಲ್ 18 ರಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತದಾನ ನಡೆಯಲಿದ್ದು, ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ, ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನಮ್ನು ನಡೆಸುವ ನಿಟ್ಟಿನಲ್ಲಿ, ಕುಂದಾಪುರ, ಉಡುಪಿ, ಕಾಪು, ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ , ಏಪ್ರಿಲ್ 16 ರಂದು  ಸಂಜೆ 6 ಗಂಟೆಯಿಂದ ಏಪ್ರಿಲ್ 19 ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ರಂತೆ ನಿಷೇದಾಜ್ಞೆ ವಿಧಿಸಿ , ಜಿಲ್ಲಾ ಚುನಾವಣಾಧಿಕಾರಿ ಹಾಗೂ […]

ಪ್ರಚಾರದ ವೇಳೆ ಹೃದಯಾಘಾತ: ನಟ, ಮಾಜಿ ಸಂಸದ ಜೆ.ಕೆ.ರಿತೇಶ್ ವಿಧಿವಶ

ಚೆನ್ನೈ: ತಮಿಳು ಭಾಷಾ ಸಿನಿಮಾ ನಟ, ಮಾಜಿ ಸಂಸದ, ಎಐಎಡಿಎಂಕೆ ನಾಯಕ ಜೆ.ಕೆ.ರಿತೇಶ್ (46) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಜೆ.ಕೆ.ರಿತೇಶ್ ಅವರು ಗುರುವಾರ ತಮಿಳುನಾಡಿನ ರಾಮನಾಥಪುರಂನಲ್ಲಿ ಎಐಎಡಿಎಂಕೆ ಮೈತ್ರಿ ಪಕ್ಷ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗವಹಿಸಿದ್ದರು. ಆಗ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಪಕ್ಷದ ನಾಯಕರು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಜೆ.ಕೆ.ರಿತೇಶ್ ಅವರು ಡಿಎಂಕೆ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. 2009ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆಗ ಅವರು […]