ಮತದಾನ ದಿನದಂದು ವಾಹನ ಚಾಲಕರು ಮತದಾರರಿಗೆ ಆಮಿಷ ನೀಡಿದರೆ ಕಠಿಣ ಕ್ರಮ: ಡಿಸಿ ಎಚ್ಚರಿಕೆ
ಜಿಲ್ಲೆಯಲ್ಲಿ ಏಪ್ರಿಲ್ 18 ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ , ಮತದಾರರಿಗೆ ಉಚಿತ ವಾಹನ ಸೌಕರ್ಯ, ಸಾಮಥ್ರ್ಯಕ್ಕಿಂತ ಹೆಚ್ಚು ಜನರ ಸಾಗಾಟ ಮುಂತಾದ ಪ್ರಕರಣಗಳು ಕಂಡು ಬಂದಲ್ಲಿ ತಕ್ಷಣವೇ ಸಂಬಂದಪಟ್ಟ ವಾಹನವನ್ನು ಸ್ಥಳದಲ್ಲೇ ಸೀಜ್ ಮಾಡಿ, ವಾಹನ ಚಾಲಕರು, ವಾಹನಗಳ ಮಾಲೀಕರ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಚುನಾವಣಾದಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಎಚ್ಚರಿಕೆ ನೀಡಿದ್ದಾರೆ. ಅವರು ಭಾನುವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ಜಿಲ್ಲೆಯ ಖಾಸಗಿ ಬಸ್ ಸಂಘ, […]
ಬಿಜೆಪಿ ಸರಕಾರದ ಸಾಧನೆ ಶೂನ್ಯ: ಅಶೋಕ್ ಕುಮಾರ್ ಕೊಡವೂರು
ಉಡುಪಿ: ಮನಮೋಹನ್ ಸಿಂಗ್ ಸರಕಾರ ಏನು ಮಾಡಿದೆ ಎನ್ನುವ ಶೋಭಾ ಕರಂದ್ಲಾಜೆ ಅವರು ಕಳೆದ ಐದು ವರ್ಷದಲ್ಲಿ ಮೋದಿ ಮಾಡಿದ ಸಾಧನೆ ಏನೆಂದು ತಿಳಿಸಬೇಕು. ಆಧಾರ್, ಐಎಫ್ಡಿ ಹೂಡಿಕೆ, ನಿರ್ಮಲ್ ಭಾರತ್(ಸ್ವಚ್ಚ ಭಾರತ), ಜಿ.ಎಸ್.ಟಿ. ಯಂತಹ ಯುಪಿಎ ಸರಕಾರದ ಯೋಜನೆಗಳನ್ನು ಅಂದು ವಿರೋಧಿಸಿ ಇಂದು ಕಾರ್ಯಗತಗೊಳಿಸಿದೆ. ಬಿಜೆಪಿಯ ಈ ನಿರ್ಧಾರದಿಂದ ದೇಶದ ಅಭಿವೃದ್ಧಿ ಕುಂಠಿತಗೊಳ್ಳಲು ಬಿಜೆಪಿ ಕಾರಣಕರ್ತವಾಗಿದೆ. ಇದನ್ನು ಬಿಜೆಪಿ ಸಾಧನೆ ಎನ್ನಬೇಕೇ? ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ತಿಳಿಸಿದ್ದಾರೆ. ಈ ಬಾರಿ […]
ಪರಿಸರ ಸ್ನೇಹಿ ಚುನಾವಣೆಗೆ ಮಾದರಿಯಾದ ಉಡುಪಿ ಜಿಲ್ಲಾಡಳಿತ
ಉಡುಪಿ: ಪರಿಸರ ಸ್ನೇಹಿಯಾದ ಆಡಳಿತಕ್ಕೆ ಹಲವಾರು ಕ್ರಮಗಳನ್ನು ಕೈಗೊಂಡು ಜಾರಿಗೆ ತಂದಿದ್ದ ಉಡುಪಿ ಜಿಲ್ಲಾಡಳಿತವು ಇದೀಗ ಲೋಕಸಭಾ ಚುನಾವಣೆಯನ್ನೂ ಪರಿಸರ ಸ್ನೇಹಿ ನೆಲೆಯಲ್ಲಿ ನಡೆಸುವ ಮೂಲಕ ಮತ್ತೊಂದು ದಿಟ್ಟ ಹೆಜ್ಜೆ ಇರಿಸಿದೆ. ಕಳೆದ ಮಾರ್ಚ್ 10 ರಂದು ದೆಹಲಿಯಲ್ಲಿ ಲೋಕಸಭಾ ಚುನಾವಣೆ ದಿನಾಂಕ ಪ್ರಕಟಿಸುವಾಗ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ಪ್ರಸಕ್ತ ಲೋಕಸಭಾ ಚುನಾವಣೆಯನ್ನು ಪರಿಸರ ಸ್ನೇಹಿಯಾಗಿ ನಡೆಸಲು ಒತ್ತು ನೀಡುವುದಾಗಿ ಪ್ರಕಟಿಸಿದ್ದರು. ಈ ನಿಟ್ಟಿನಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಉಡುಪಿ ಜಿಲ್ಲಾಡಳಿತವು […]
ಎಳ್ಳಾರೆ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ
ಕಾರ್ಕಳ ತಾಲೂಕಿನ ಎಳ್ಳಾರೆ ಗ್ರಾಮದ ಸುಮಾರು 1,450 ವರ್ಷಗಳ ಹಿಂದಿನ ಇತಿಹಾಸವಿರುವ ಎರಡನೇ ವೈಕುಂಠ ಖ್ಯಾತಿಯ ಶ್ರೀಕ್ಷೇತ್ರ ಇರ್ವತ್ತೂರು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಎ. 8ರಿಂದ ಆರಂಭಗೊಂಡಿದ್ದು ಎ.18ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಇಲ್ಲಿ ಪ್ರಧಾನ ದೇವರಾಗಿ ಅಂಗೈಯಲ್ಲಿ ಅನ್ನ ಮುದ್ದೆ ಹಿಡಿದು ನಿಂತಿರುವ ಶ್ರೀ ಲಕ್ಷ್ಮೀ ಜನಾರ್ದನ ದೇವರು ಹಾಗೂ ಪರಿವಾರ ದೇವರಾಗಿ ಶ್ರೀ ಮಹಾಗಣಪತಿ, ಶ್ರೀ ಜಲದುರ್ಗೆ ಹಾಗೂ ಪರಿವಾರ ದೈವಗಳಿದ್ದು, ನಿತ್ಯ ತ್ರಿಕಾಲ ಪೂಜೆ, […]
ಚುನಾವಣಾ ಕರ್ತವ್ಯಕ್ಕೆ ತೆರಳುವ ಸಿಬ್ಬಂದಿಗೆ ವಾಹನ ವ್ಯವಸ್ಥೆ
ಏಪ್ರಿಲ್ 1 8ರಂದು ನಡೆಯುವ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂದಿಸಿದಂತೆ ಈಗಾಗಲೇ ಚುನಾವಣಾ ಕೆಲಸ ಕಾರ್ಯ ನಿರ್ವಹಿಸಲು ಜಿಲ್ಲೆಯ ವಿವಿಧ ತಾಲೂಕುಗಳಿಂದ ಅಧಿಕಾರಿ /ಸಿಬ್ಬಂದಿಗಳನ್ನು ಪಿ.ಆರ್.ಓ, ಎಪಿಆರ್ ಓ, ಪಿಓ ಆಗಿ ನಿಯೋಜಿಸಿ ಆದೇಶಿಸಲಾಗಿದ್ದು, ಈ ಸಿಬ್ಬಂದಿಗಳು ಏಪ್ರಿಲ್ 17 ರಂದು ತಮಗೆ ನಿಯೋಜಿಸಿರುವ ವಿಧಾನಸಭಾ ಕ್ಷೆತ್ರದ ಮಸ್ಟರಿಂಗ್ ಕೇಂದ್ರದಲ್ಲಿ ಹಾಜರಾಗಬೇಕಿದೆ. ವಿವಿಧ ತಾಲೂಕುಗಳಿಂದ ಚುನಾವಾಣ ಕರ್ತವ್ಯಕ್ಕೆ ತೆರಳುವ ಸಿಬ್ಬಂದಿಗಳನ್ನು ಮಸ್ಟರಿಂಗ್ ಕೇಂದ್ರಗಳಿಗೆ ಕರೆದುಕೊಂಡು ಹೋಗಲು ಬಸ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಬಸ್ ಗಳು ಏಪ್ರಿಲ್ 17 ರಂದು […]