ಲೋಕಸಭಾ ಚುನಾವಣೆ ಜಿಲ್ಲಾಡಳಿತ ಸಂಪೂರ್ಣ ಸಜ್ಜು- ಡಿಸಿ ಹೆಪ್ಸಿಬಾ

ಉಡುಪಿ: ಏಪ್ರಿಲ್ ೧೮ ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಜ್ಜುಗೊಂಡಿದ್ದು, ಮತದಾನವು ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲು ಎಲ್ಲಾ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಮತದಾನ ಕರ್ತವ್ಯಕ್ಕಾಗಿ 206 ಮೈಕ್ರೋ ಅಬ್ಸರ್ವರ್ ಸೇರಿದಂತೆ 6,489  ಸಿಬ್ಬಂದಿ ನೇಮಿಸಿದ್ದು, ಮತದಾರರಿಗೆ   ಶೇ.99.5 ಮತದಾರರ ವಿವರವಿರುವ ವೋಟರ್ ಸ್ಲಿಪ್ ಗಳನ್ನು ವಿತರಿಸಲಾಗಿದೆ.ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳಿಗಾಗಿ ಜಿಪಿಎಸ್ […]

ಕುಂದಾಪುರ:ಹೆಡ್‌ಕಾನ್‌ಸ್ಟೇಬಲ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ

ಕುಂದಾಪುರ: ರಸ್ತೆ ಅಪಘಾತವೊಂದರಲ್ಲಿ ತೀವೃವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಕುಂದಾಪುರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಬಿ.ಚಂದ್ರಶೇಖರ (೪೨) ಅವರ ಪಾರ್ಥಿವ ಶರೀರಕ್ಕೆ ಮಂಗಳವಾರ ಬೆಳಿಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಅಂತಿಮ ನಮನ ಸಲ್ಲಿಸಲಾಯಿತು. ಉಡುಪಿಯ ಜಿಲ್ಲಾ ಸಶಸ್ತ್ರ ಪಡೆಯ ಕೇಂದ್ರ ಸ್ಥಾನದಲ್ಲಿ ಇಲಾಖಾ ಅಂತಿಮ ಗೌರವ ವಂದನೆಯ ಬಳಿಕ ಪಾರ್ಥಿವ ಶರೀರವನ್ನು ಕುಂದಾಪುರಕ್ಕೆ ತರಲಾಗಿತ್ತು. ಈ ವೇಳೆ ಪೊಲೀಸ್, ಗ್ರಹ ರಕ್ಷಕ ದಳದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ […]

ರಾಹುಲ್ ಗಾಂಧಿ ತಮ್ಮ ತಾಯಿಯನ್ನು ಬಿಟ್ಟು ಕೇರಳಕ್ಕೆ ಬರಬಾರದಿತ್ತು:ಬಿ.ವೈ ರಾಘವೇಂದ್ರ

ಕುಂದಾಪುರ: ಅಮೇಠಿಯಲ್ಲಿ ತಾನು ಗೆಲ್ಲುವುದಿಲ್ಲ ಎಂಬ ವರದಿಯ ನಂತರ ರಾಹುಲ್ ಗಾಂಧಿ ತಮ್ಮ ತಾಯಿ ಒಬ್ಬರನ್ನೇ ಬಿಟ್ಟು ಕೇರಳಕ್ಕೆ ವಲಸೆ ಬಂದಿದ್ದಾರೆ. ಇಂತಹ ಸಂದರ್ಭದಲ್ಲಿ ರಾಹುಲ್ ಗಾಂಧಿ ತಾಯಿ ಒಬ್ಬರನ್ನೆ ಬಿಟ್ಟು ಬರಬಾರದಿತ್ತು. ಅವರನ್ನೂ ವಯನಾಡುಗೆ ಕರೆದುಕೊಂಡು ಬರಬೇಕಿತ್ತು ಎಂದು ಶಿವಮೊಗ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ವ್ಯಂಗ್ಯವಾಡಿದರು. ಅವರು ಮಂಗಳವಾರ ಮಧ್ಯಾಹ್ನ ನೆಂಪುವಿನಲ್ಲಿರುವ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿಯವರ ಮನೆಯಲ್ಲಿ ಆಯೋಜಿಸಲಾದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಸಚಿವ ರೇವಣ್ಣ ಯಾವಾಗಲೂ ಕೈಯ್ಯಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು […]

ನರೇಂದ್ರ ಮೋದಿ ಸರಕಾರ ಜನಪರವಾಗಿ ಕೆಲಸಮಾಡಿದೆ:ಬಿ.ವೈ.ರಾಘವೇಂದ್ರ

ಕುಂದಾಪುರ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಬಡವರ, ಹಿಂದುಳಿದ ವರ್ಗದವರ ಏಳಿಗೆಗೆ ಸಾಕಷ್ಟು ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಗರಿಬಿ ಹಠಾವೋ ಎಂಬ ಘೋಷಣೆಯೊಂದಿಗೆ ಕಳೆದ ಸುಮಾರು ೬೦ ವರ್ಷಗಳಿಂದ ಕೇಂದ್ರದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌ಗೆ ಬಡತನ ದೂರ ಮಾಡಲು ಸಾಧ್ಯವಾಗಿಲ್ಲ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು. ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಕಂಚುಗೋಡು ಭಗತ್ ನಗರದಲ್ಲಿ ಜರಗಿದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು. ಆಯುಷ್ಮಾನ್ ಭಾರತ್ ಯೋಜನೆ, ಉಚಿತ ಗ್ಯಾಸ್ […]

ಬಿಜೆಪಿ ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಜನರ ದಾರಿ ತಪ್ಪಿಸುತ್ತಿದೆ :ಗೋಪಾಲ ಪೂಜಾರಿ

ಕುಂದಾಪುರ: ರಾಜ್ಯದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದ ಬಳಿಕವೂ ಹಿಂದಿನ ಸರಕಾರದಂತೆ ಜನರಿಗೆ ನೀಡಿರುವ ಭರವಸೆಯನ್ನು ಪ್ರಾಮಾಣಿಕವಾಗಿ ಈಡೇರಿಸಲಾಗುತ್ತಿದೆ. ಆದರೆ ಬಿಜೆಪಿ ಮಾತ್ರ ಭಾವನಾತ್ಮಕ ವಿಚಾರವನ್ನು ಮುಂದಿಟ್ಟುಕೊಂಡು ಜನರ ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿತ್ತೂರು ಕಂಚಿನಕೊಡ್ಲುವಿನಲ್ಲಿ ಸೋಮವಾರ ಜರುಗಿದ ಕಾಂಗ್ರೆಸ್ – ಜೆಡಿಎಸ್ ಪಕ್ಷ ಚುನಾವಣಾ ಪ್ರಚಾರದ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ […]