ಉದ್ಯಮ, ಸ್ವ-ಉದ್ಯೋಗ ಪ್ರಾರಂಭಿಸಲು ತರಬೇತಿ

ಉಡುಪಿ: ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಉದ್ಯಮಶೀಲತಾ ಮಾರ್ಗದರ್ಶನ ಕೇಂದ (ಸಿಡಾಕ್)ದ ಮೂಲಕ ಉದ್ಯಮ ಮತ್ತು ಸ್ವ-ಉದ್ಯೋಗ ಪ್ರಾರಂಭಿಸಲು ಮಾಹಿತಿ ಹಾಗೂ ತರಬೇತಿ ನೀಡಲಾಗುತ್ತದೆ. ಕರ್ನಾಟಕ ಸರಕಾರದಿಂದ ವ್ಯವಹಾರ ಯೋಜನೆ, ಯೋಜನೆಯ ವರದಿ, ಕಂಪನಿಯ ನೋಂದಣಿ, ಮಾರುಕಟ್ಟೆ ಸಮೀಕ್ಷೆ, ಅನುದಾನಿತ ಸರ್ಕಾರಿ ಸಾಲಗಳು ಹಾಗೂ ಸರಕಾರದ ಯೋಜನೆಗಳ ಸಂಪೂರ್ಣ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ವಸಾಹತು, ಮಣಿಪಾಲ, ಉಡುಪಿ […]

ಬಿಜೆಪಿಗೆ ಮತ ನೀಡಿದ್ದೇ sslcಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಸ್ಥಾನ ಕುಸಿಯಲು ಕಾರಣ: ಸಚಿವ ರೇವಣ್ಣ

ಹಾಸನ: ಉಡುಪಿ- ದಕ್ಷಿಣ ಕನ್ನಡದವರು ಬಿಜೆಪಿಯವರಿಗೆ ಮತಹಾಕಿದ್ದಾರೆ. ಇದಕ್ಕಾಗಿ ಅವರ ಸ್ಥಾನ ಕುಸಿದಿದೆ. ಜಾತ್ಯತೀತರಿಗೆ ಅವರು ವೋಟ್ ಹಾಕಿದ್ದರೆ ಮೊದಲನೆಯ ಸ್ಥಾನ ಬರುತ್ತಿತ್ತು. ಅವರು ಶಿಕ್ಷಣಕ್ಕೆ ಒತ್ತು ನೀಡುತ್ತಿಲ್ಲ ಎನ್ನುವುದಕ್ಕೆ ಇದೇ ಉದಾಹರಣೆ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ವಿವಾದದ ಕಿಡಿ ಹೊತ್ತಿಸಿದ್ದಾರೆ. ಪ್ರತಿ ಬಾರಿ ಎಸ್  ಎಸ್  ಎಲ್  ಸಿ ಫಲಿತಾಂಶದಲ್ಲಿ ಮೊದಲ ಅಥವಾ ಎರಡನೆಯ ಸ್ಥಾನ ಪಡೆದುಕೊಳ್ಳುತ್ತಿದ್ದ ಉಡುಪಿ ಜಿಲ್ಲೆಯು ಈ ಬಾರಿ ಐದನೇ ಸ್ಥಾನಕ್ಕೆ ಕುಸಿದಿರುವುದಕ್ಕೆ ವ್ಯಂಗ್ಯವಾಡಿದ್ದಾರೆ. ಹಾಸನ ಜಿಲ್ಲೆಯು ಎಸ್  ಎಸ್  ಎಲ್  […]

ಹಿರಿಯ ರಂಗಕರ್ಮಿ ಮಾಸ್ಟರ್ ಹಿರಣ್ಣಯ್ಯ ನಿಧನ

ಬೆಂಗಳೂರು: ಕರ್ನಾಟಕದ ಪ್ರಖ್ಯಾತ ರಂಗಕರ್ಮಿ, ಹಿರಿಯ ನಟ ಮಾಸ್ಟರ್ ಹಿರಣ್ಣಯ್ಯ ಅವರು ಗುರುವಾರ ಕೊನೆಯುಸಿರೆಳೆದರು. ರಂಗಭೂಮಿ ಕಲಾವಿದ 85 ವರ್ಷದ ಮಾಸ್ಟರ್ ಹಿರಣ್ಣಯ್ಯ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಇಂದು ವಿಧಿವಶರಾಗಿದ್ದಾರೆ. ಸಕಾಲಿಕ ರಾಜಕೀಯ, ಸಾಮಾಜಿಕ ವಿದ್ಯಮಾನಗಳನ್ನು ತಮ್ಮ ನಾಟಕದ ಸಂಭಾಷಣೆಗಳಲ್ಲಿ ಸುಲಲಿತವಾಗಿ ಎಳೆದು ತರುವ ಮೂಲಕ ಪಂಚ್ ನೀಡುವಲ್ಲಿ ಪ್ರಸಿದ್ಧಿ ಗಳಿಸಿದ್ದ ಹಿರಣ್ಣಯ್ಯ ಪತ್ನಿ ಮತ್ತು ಐವರು ಮಕ್ಕಳನ್ನು ಅಗಲಿದ್ದಾರೆ.