ಹೆಚ್1ಎನ್1- ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಗೆ ಸೂಚನೆ

ಉಡುಪಿ: ಇತ್ತೀಚಿನ ದಿನಗಳಲ್ಲಿ ರಾಜ್ಯದ ವಿವಿಧ ಕಡೆ ಹೆಚ್ಚಾಗಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡು ನೆಗಡಿ, ಕೆಮ್ಮು, ಜ್ವರದ ಜೊತೆಗೆ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾದವರನ್ನು ಪರೀಕ್ಷಿಸಿದಾಗ ಹೆಚ್1ಎನ್1 ಸೋಂಕು ಪತ್ತೆಯಾಗಿರುವುದು ಕಂಡು ಬಂದಿದ್ದು, ತಾಲೂಕಿನಲ್ಲಿಯೂ ಕೆಲವೊಂದು ಪ್ರಕರಣಗಳು ವರದಿಯಾಗುತ್ತಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೆಚ್1ಎನ್1 ಕುರಿತು ಮಾಹಿತಿಯುಳ್ಳ ಕರ ಪತ್ರಗಳನ್ನು ವಿತರಿಸುವ ಹಾಗೂ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದು ಹೆಚ್1ಎನ್1 ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ. ಸಾಮಾನ್ಯ ಫ್ಲೂ ಹರಡುವ ರೀತಿಯಲ್ಲಿಯೇ ಹೆಚ್1ಎನ್1 […]

ಮೇ 7: ಬಸವ ಜಯಂತಿ ಆಚರಣೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಬಸವ ಜಯಂತಿ ಆಚರಣೆಯು ಮೇ 7 ರಂದು ಬೆಳಗ್ಗೆ 10 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‍ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಕಂಟ್ರೋಲ್ ರೂಂ ಸ್ಥಾಪನೆ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಎದುರಾಗಬಹುದಾದ ಯಾವುದೇ ಸಂಭಾವ್ಯ ಅನಾಹುತಗಳನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ತುರ್ತು ವಿಪತ್ತು ನಿರ್ವಹಣೆಗಾಗಿ 24*7 ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದ್ದು, ಈ ಮುಂದಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಉಡುಪಿ ಜಿಲ್ಲಾಧಿಕಾರಿ ಕಚೇರಿ ದೂ.ಸಂಖ್ಯೆ: 0820-2574802 ಮತ್ತು ಟೋಲ್ ಫ್ರೀ ನಂಬರ್ 1077, ಪೊಲೀಸ್ ಇಲಾಖೆ ದೂ.ಸಂಖ್ಯೆ: 0820-2526444, ಜಿಲ್ಲಾ ಪಂಚಾಯತ್ ದೂ.ಸಂಖ್ಯೆ: 0820-2574945, ಆರೋಗ್ಯ ಇಲಾಖೆ ದೂ.ಸಂಖ್ಯೆ: 0820-2536650, ಮೆಸ್ಕಾಂ ಇಲಾಖೆ ದೂ.ಸಂಖ್ಯೆ: 0820-2521201, ಶಿಕ್ಷಣ ಇಲಾಖೆ […]

ಮೇ.7: ಕೋಟ ಹಂದೆ ಮಹಾವಿಷ್ಣು ಮಹಾಗಣಪತಿ ದೇವಸ್ಥಾನದಲ್ಲಿ ಜಾತ್ರೆ, ರಥೋತ್ಸವ ಸಂಭ್ರಮ

ಬ್ರಹ್ಮಾವರ: ಕೋಟ ಹಂದೆ ಮಹಾವಿಷ್ಣು ಮಹಾಗಣಪತಿ ದೇವಸ್ಥಾನದ ರಥೋತ್ಸವ ಮೇ. 7ರಂದು ನಡೆಯಲಿದೆ. ಕೋಟ ಹೈಸ್ಕೂಲ್ ಹತ್ತಿರದಲ್ಲಿ ಹಂದಟ್ಟು ಗ್ರಾಮದಲ್ಲಿರುವ ಹಂದೆ ‘ರಥೋತ್ಸವದ ಪ್ರಯುಕ್ತ  ಈಗಾಗಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದೆ. ಮೇ. 6ರಂದು ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೋಟದ ಜ್ಞಾನದೀಪ ನೃತ್ಯ ಕಲಾಕೇಂದ್ರ ಇವರಿಂದ ನೃತ್ಯ ವೈಭವ, 8ಕ್ಕೆ ಬೆಂಗಳೂರಿನ ಯಕ್ಷದೇಗುಲ ತಂಡದವರಿಂದ ವಾರಂಬಳ್ಳಿ ವೆಂಕಪ್ಪಯ್ಯ ವಿರಚಿತ ‘ಸೌಗಂಧಿಕ ಪುಷ್ಪಾಪಹರಣ’ ಯಕ್ಷಗಾನ ಪ್ರದರ್ಶನ ನಡೆಯಲಿದೆ. 7ರ ಸಂಜೆ 5ಕ್ಕೆ ಇನಿದನಿ ಬಳಗ ಕೋಟ ಇವರಿಂದ […]

ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾಗಿ ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ ನೂತನ ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಡಗಬೆಟ್ಟು ಕ್ರೆಡಿಟ್‌ ಕೋ- ಆಪರೇಟಿವ್‌ ಸೊಸೈಟಿಯ ಪ್ರಧಾನ ವ್ಯವಸ್ಥಾಪಕರಾಗಿ ಸೊಸೈಟಿಯನ್ನು ರಾಷ್ಟ್ರಮಟ್ಟದಲ್ಲಿ ಮಾದರಿ ಸಹಕಾರಿ ಸಂಸ್ಥೆಯನ್ನಾಗಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ‘ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಸೇರಿದಂತೆ ರಾಷ್ಟ್ರ, ರಾಜ್ಯಮಟ್ಟದ ಹಲವಾರು ಪ್ರಶಸ್ತಿ ಪುರಸ್ಕೃತರಾದ ಅವರು ಉಡುಪಿ ತುಳು ಕೂಟದ ಅಧ್ಯಕ್ಷರಾಗಿ, ಮಾಜಿ ಲಯನ್ಸ್‌ ಜಿಲ್ಲಾ ಗವರ್ನರ್‌ ಆಗಿ ಅನೇಕ ಸಂಘ-ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿ ಸಮಾಜಮುಖೀ ಚಟುವಟಿಕೆಗಳಲ್ಲಿ ನಿರಂತರ ತೊಡಗಿಸಿಕೊಂಡಿದ್ದಾರೆ.