ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ: ಅರ್ಜಿ ಆಹ್ವಾನ
ಉಡುಪಿ, ಮೇ 9: 2019-20 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಈ ಕೆಳಗೆ ನಮೂದಿಸಿರುವ ಕಾರ್ಯಕ್ರಮಗಳಡಿ ಸಹಾಯಧನ ಪಡೆಯಲು ಅರ್ಹ/ಆಸಕ್ತಿ ರೈತರು/ಫಲಾನುಭವಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಬಾಳೆ ಪ್ರದೇಶ ವಿಸ್ತರಣೆ (ಕಂದುಗಳು ಮತ್ತು ಅಂಗಾಂಶ ಕೃಷಿ), ಅನಾನಸ್ಸು ಪ್ರದೇಶ ವಿಸ್ತರಣೆ, ಹೈಬ್ರಿಡ್ ತರಕಾರಿಗಳ ಪ್ರದೇಶ ವಿಸ್ತರಣೆ, ಕಾಳುಮೆಣಸು ಪ್ರದೇಶ ವಿಸ್ತರಣೆ, ಕೋಕೊ ಪ್ರದೇಶ ವಿಸ್ತರಣೆ, ಅಣಬೆ ಉತ್ಪಾದನಾ ಘಟಕ, ಗೇರು ಪುನಃಶ್ಚೇತನ, ಕಾಳುಮೆಣಸು ಪುನಃಶ್ಚೇತನ, ಕೃಷಿ ಹೊಂಡ(20*20*3 ಘ.ಮೀ.), ಹಸಿರು ಮನೆ (ಬೆಳೆಯೊಂದಿಗೆ), ನೆರಳು ಪರದೆ […]
ಗ್ರಾ. ಪಂ. ಉಪ ಚುನಾವಣೆ: ಮದ್ಯ ಮಾರಾಟ ನಿಷೇಧ
ಉಡುಪಿ, ಮೇ 9: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟಾ ಗ್ರಾಮ ಪಂಚಾಯತ್, ಕಾಪು ತಾಲೂಕಿನ ಮುದರಂಗಡಿ ಗ್ರಾಮ ಪಂಚಾಯತ್, ಕುಂದಾಪುರ ತಾಲೂಕಿನ ತಲ್ಲೂರು ಹಾಗೂ ಹಾಲಾಡಿ ಗ್ರಾಮ ಪಂಚಾಯತ್ಗಳಲ್ಲಿ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದ್ದು, ಈ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆಯು ಮೇ 13 ರಿಂದ 31 ರ ವರೆಗೆ ಜಾರಿಯಲ್ಲಿರುತ್ತದೆ. ಚುನಾವಣೆಯು ಶಾಂತ ಮತ್ತು ಮುಕ್ತವಾಗಿ ನಡೆಯುವಂತಾಗಲು ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ , ಚುನಾವಣೆ […]
ಶಂಕರಾಚಾರ್ಯರಿಂದ ಹಿಂದೂ ಧರ್ಮ ರಕ್ಷಣೆ: ಸಿಂಧೂ ಬಿ ರೂಪೇಶ್
ಉಡುಪಿ, ಮೇ 9: 8 ನೇ ಶತಮಾನದಲ್ಲಿ ಹಲವು ಧರ್ಮಗಳ ಸವಾಲಿನ ನಡುವೆ ಹಿಂದೂ ಧರ್ಮವನ್ನು ರಕ್ಷಿಸುವಲ್ಲಿ ಶಂಕರಾಚಾರ್ಯರು ಮಹತ್ವದ ಕಾರ್ಯಗಳ ಮೂಲಕ ಹಿಂದೂ ಧರ್ಮ ರಕ್ಷಿಸಿದ್ದರು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ ರೂಪೇಶ್ ಹೇಳಿದರು. ಅವರು ಗುರುವಾರ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನಡೆದ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅದ್ವೈತ ಧರ್ಮ ಪ್ರತಿಪಾದಿಸಿದ ಶಂಕರಚಾರ್ಯರು […]
ಕುಡಿಯುವ ನೀರಿನ ಸಮಸ್ಯೆ: ಗ್ರಾ.ಪಂ ಗಳಿಗೆ ನೋಡೆಲ್ ಅಧಿಕಾರಿಗಳ ನೇಮಕ
ಉಡುಪಿ, ಮೇ 9: ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿರ್ವಹಿಸಲು ಪ್ರತೀ ಗ್ರಾಮ ಪಂಚಾಯತ್ಗಳಿಗೆ ನೋಡೆಲ್ ಅಧಿಕಾರಿಗಳನ್ನು ನೇಮಿಸಲಾಗುವುದು ಎಂದು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ ರೂಪೇಶ್. ಹೇಳಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಕುರಿತು ಸಂಬಂಧಪಟ್ಟ ಇಂಜಿನಿಯರ್ಗಳ ಸಭೆ ನಡೆಸಿ ಮಾತನಾಡಿದರು. ಕುಡಿಯುವ ನೀರಿನ ವ್ಯವಸ್ಥಿತ ನಿರ್ವಹಣೆ, ಟ್ಯಾಂಕರ್ ಮೂಲಕ ನೀರು ಸರಬರಾಜು ಸೇರಿದಂತೆ ಪ್ರತೀ ಗ್ರಾಮ ಪಂಚಾಯತ್ನಲ್ಲಿ ಸಾರ್ವಜನಿಕರಿಗೆ ಕುಡಿಯುವ […]
ಉಡುಪಿ ನಗರ: ಕುಡಿಯುವ ನೀರು ಸರಬರಾಜಿಗೆ ಅಗತ್ಯ ಕ್ರಮ
ಉಡುಪಿ, ಮೇ 9: ಉಡುಪಿ ನಗರಸಭೆಗೆ ಕುಡಿಯುವ ನೀರು ಪೂರೈಸುವ ಬಜೆ ಅಣೆಕಟ್ಟಿನಲ್ಲಿ ನೀರು ಸಂಪೂರ್ಣ ಖಾಲಿಯಗಿರುವುದರಿಂದ ಬಜೆ ಅಣೆಕಟ್ಟು ಮತ್ತು ಶೀರೂರು ಅಣೆಕಟ್ಟಿನ ನಡುವೆ ಇರುವ ದೊಡ್ಡ ಹೊಂಡಗಳಲ್ಲಿ ಶೇಖರಣೆಗೊಂಡಿರುವ ನೀರನ್ನು ಡ್ರೆಡ್ಜಿಂಗ್ ಮುಖಾಂತರ ಜಾಕ್ವೆಲ್ಗೆ ಹಾಯಿಸಿಕೊಂಡು ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ಹಿಂದೆ ಮೂರು ದಿವಸಗಳಿಗೊಮ್ಮೆ ನೀರು ಸರಬರಾಜು ಮಾಡುವಷ್ಟು ಪ್ರಮಾಣದಲ್ಲಿ ನೀರು ದೊರಕುತ್ತಿಲ್ಲವಾದ್ದರಿಂದ, ನಗರವನ್ನು ಆರು ವಿಭಾಗಗಳಾಗಿ ವಿಂಗಡಿಸಿ ಒಂದು ದಿವಸಕ್ಕೆ ಒಂದು ವಿಭಾಗಕ್ಕೆ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಉಡುಪಿ ನಗರಸಭೆಯ […]