ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ಕುರಿತು ಸಭೆ

ಉಡುಪಿ: ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲಾ ಅಧ್ಯಕ್ಷತೆಯಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಹೇಶ್ವರ ರಾವ್, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ. ರೂಪೇಶ್, ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಇದ್ದರು.

ಬ್ರಹ್ಮಾವರ ಸರಕಾರಿ ಆಸ್ಪತ್ರೆಯಲ್ಲಿ ಸಿಸೇರಿಯನ್ ಸೌಲಭ್ಯ ಪ್ರಾರಂಭ

ಉಡುಪಿ, ಮೇ 10: ಇತ್ತೀಚಿಗೆ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡು ಕಾರ್ಯ ನಿರ್ವಹಿಸುತ್ತಿರುವ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೇ 9 ರಂದು ಪ್ರಥಮ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ನಡೆಸಲಾಯಿತು. ಸಾಕಷ್ಟು ಜನೋಪಯೋಗಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರ ಬ್ರಹ್ಮಾವರದಲ್ಲಿ ಪ್ರಸೂತಿ ತಜ್ಞೆ ಡಾ. ದೀಕ್ಷಿತಾ ಹಾಗೂ ಅರವಳಿಕೆ ತಜ್ಞ ಡಾ. ಅಜಿತ್ ಕುಮಾರ್ ಶೆಟ್ಟಿ ಯಶಸ್ವಿಯಾಗಿ ಸಿಸೇರಿಯನ್ ಶಸ್ತ್ರ ಚಿಕಿತ್ಸೆ ನಡೆಸಿದರು. ಮಕ್ಕಳ ತಜ್ಞ ಡಾ. ಮಹಾಬಲ ಕೆ.ಎಸ್ ನವಜಾತ ಶಿಶುವಿನ ಯೋಗ ಕ್ಷೇಮ ನೋಡಿಕೊಂಡರು. […]

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ, ಮೇ 10: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಆಂಗ್ಲೋಇಂಡಿಯನ್ ಹಾಗೂ ಪಾರ್ಸಿ ಜನಾಂಗದ ವಿದ್ಯಾರ್ಥಿಗಳು 2019-20 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ(ಸಿ.ಇ.ಟಿ) ಹಾಜರಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣ ಕೈಗೊಳ್ಳಲು ನಿಗಮದಿಂದ ವಾರ್ಷಿಕ ಗರಿಷ್ಟ 3.50 ಲಕ್ಷ ರೂ. ಶೇ 2%ರ ಸೇವಾ ಶುಲ್ಕದ ಆಧಾರದ ಮೇಲೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತದೆ. ಈ ಸಂಬಂಧ 2019-20 ನೇ ವರ್ಷದ ವೃತ್ತಿಪರ ಶಿಕ್ಷಣ ಸೇರ […]

ಮೇ 11: ಭಗೀರಥ ಜಯಂತಿ

ಉಡುಪಿ, ಮೇ 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶ್ರೀ ಭಗೀರಥ ಜಯಂತಿ ಆಚರಣೆಯು ಮೇ 11 ರಂದು ಬೆಳಗ್ಗೆ 10 ಕ್ಕೆ ರಜತಾದ್ರಿ ಜಿಲ್ಲಾಧಿಕಾರಿಗಳ ಕೋರ್ಟ್‍ಹಾಲ್‍ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧು ಬಿ.ರೂಪೇಶ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಕೋಸ್ಟಲ್ ವುಡ್ ಪ್ರಿಮಿಯರ್ ಲೀಗ್-2019

C.A.T.C.A ಕೋಸ್ಟಲ್ ವುಡ್ ಕಲಾವಿದರ ಹಾಗೂ ತಂತ್ರಜ್ಞರ ಒಕ್ಕೂಟ ಏರ್ಪಡಿಸಿರುವ ಮೂರು ದಿನಗಳ ಕಾಲ 10,11ಹಾಗೂ 12 ರಂದು ಹಗಲಿನ ಕ್ರಿಕೆಟ್ ಪಂದ್ಯಾಕೂಟ C.P.L -2019 ಕ್ಕೆ ಮಂಗಳೂರಿನ ಹುಲ್ಲುಹಾಸಿನ ಸಹ್ಯಾದ್ರಿ ಕ್ರೀಡಾಂಗಣ ಸಜ್ಜಾಗಿ ನಿಂತಿದೆ‌. ಇಂದಿನಿಂದ ಪಂದ್ಯಾಕೂಟಗಳಿಗೆ ತುಳು ಚಿತ್ರ ತಾರೆಯರ ಸಮ್ಮುಖದಲ್ಲಿ ಅದ್ಧೂರಿಯ ಚಾಲನೆ ದೊರಕಲಿದೆ. ಇಂದಿನಿಂದ ಪಂದ್ಯಾಕೂಟಗಳಿಗೆ ತುಳು ಚಿತ್ರ ತಾರೆಯರ ಸಮ್ಮುಖದಲ್ಲಿ ಅದ್ಧೂರಿಯ ಚಾಲನೆ ದೊರಕಲಿದೆ. ಈ ಪಂದ್ಯಾಕೂಟದಲ್ಲಿ 8 ಫ್ರಾಂಚೈಸಿಗಳು ಕೌತುಕದ ಕದನಕ್ಕಿಳಿಯಲಿದ್ದು ಭಾಗವಹಿಸುವ ಫ್ರಾಂಚೈಸಿಗಳ ವಿವರ ಈ ಕೆಳಗಿನಂತಿದೆ. ಬಿರುವೆರ್ […]