ನೊಂದು ವಿಷ ಸೇವಿಸಿದ್ದ ಮೀನುಗಾರನ ಸಹೋದರ ಮೃತ್ಯು

ಉಡುಪಿ: ಸುವರ್ಣ ತ್ರಿಭುಜ ಬೋಟ್ ಅವಘಡದಲ್ಲಿ ನಾಪತ್ತೆಯಾಗಿರುವ ಭಟ್ಕಳ ಬಂದರ್ ರೋಡ್‌ನ ಶನಿಯಾರ ತಿಮ್ಮಪ್ಪ ಮೊಗೇರ ಎಂಬವರ ಪುತ್ರ ರಮೇಶ್ ಮೊಗೇರರ ಚಿಂತೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಜೀವನ್ಮರಣದ ಮಧ್ಯೆ ಹೋರಾಟ ನಡೆಸುತ್ತಿರುವ ಸಹೋದರ ಚಂದ್ರಶೇಖರ್ ಮೊಗೇರ (30) ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮೃತಪಟ್ಟಿದ್ದಾರೆ. ಮಾರಕವಾದ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಚಂದ್ರಶೇಖರ್ 3 ದಿನಗಳ ಬಳಿಕ ವಿಷ ಸೇವನೆ ಬಗ್ಗೆ ನೆರೆಮನೆಯವರಲ್ಲಿ ಬಾಯಿಬಿಟ್ಟಿದ್ದರು. ವಿಷ ರಕ್ತದಲ್ಲಿ ಸೇರಿ ಲಿವರ್‌ಗೆ ಹಾನಿಯಾಗಿದೆ. ದೇಹದೊಳಗೆ ಅತಿಯಾದ […]

ಕೃಷ್ಣಮಠಕ್ಕೆ ಸ್ವರ್ಣ ಗೋಪುರ ಸಮರ್ಪಣೆ ಜೂ. 1ರಂದು ಭವ್ಯ ಮೆರವಣಿಗೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಗರ್ಭಗುಡಿಯ ಗೋಪುರಕ್ಕೆ ಸ್ವರ್ಣಕವಚ ಹೊದಿಸಿಸಮರ್ಪಿಸುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜೂನ್‌ 1ರಂದು ನಗರದ ಜೋಡುಕಟ್ಟೆಯಿಂದಶ್ರೀಕೃಷ್ಣ ಮಠದವರೆಗೆ ಬಹೃತ್‌ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.ಅಂದು ಮಧ್ಯಾಹ್ನ 3 ಗಂಟೆಗೆ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯ ಪ್ರಮುಖಆಕರ್ಷಣೆಯಾಗಿ ಶ್ರೀಕೃಷ್ಣಮಠದ ಸೇವಾರ್ಥಿಗಳಿಗೆ ಪ್ರಸಾದ ರೂಪದಲ್ಲಿ ನೀಡಲಾಗುವ ೧೦೦೮ರಜತಕಲಶಗಳನ್ನು ಆಕರ್ಷಕವಾಗಿ ಜೋಡಿಸಿಟ್ಟು, ಮೆರವಣಿಗೆ ನಡೆಸಲಾಗುವುದು. ಅಲ್ಲದೆ,ಸ್ಟಾರ್‌ಪ್ಲಸ್‌ ವಾಹಿನಿಯಲ್ಲಿ ಪ್ರಸಾರವಾಗುವ ಮಹಾಭಾರತ ಧಾರವಾಹಿಯ ಕೃಷ್ಣಾರ್ಜುನರಪಾತ್ರಧಾರಿಗಳಾದ ಸೌರಭ್‌ ಜೈನ್‌ ಮತ್ತು ಶಾಹಿರ್‌ ಶೇಖ್‌ ಭಾಗಹಿಸಲಿದ್ದು, ಚಾರಿತ್ರಿಕಪೋಷಾಕಿನಲ್ಲಿ ಕಾಣಿಸಿಕೊಳ್ಳುವ ಅವರು ಮೆರವಣಿಗೆಯ ವೈಭವಕ್ಕೆ ಮತ್ತಷ್ಟು ಮೆರಗುನೀಡಲಿದ್ದಾರೆ.೧೫೦ ಭಜನಾ […]

ಕೆ.ವಿ. ಗಣಪಯ್ಯ, ನೀವಣಿ ಗಣೇಶ ಭಟ್ಟರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

ಉಡುಪಿ: ಉಡುಪಿಯ ಯಕ್ಷಗಾನ ಕಲಾರಂಗ ಕೊಡಮಾಡುವ 2019ನೇ ಸಾಲಿನ ಮಟ್ಟಿ ಮುರಳಿಧರ ರಾವ್‌ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಹಿರಿಯ ಅರ್ಥಧಾರಿ ಕೆ.ವಿ. ಗಣಪಯ್ಯ ಹಾಗೂ ಹಿರಿಯ ಅರ್ಥಧಾರಿ ಪೆರ್ಲ ಕೃಷ್ಣ ಭಟ್‌ ಸ್ಮರಣಾರ್ಥ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಹಿರಿಯ ಅರ್ಥಧಾರಿ ಹರಿದಾಸ ನೀವಣೆ ಗಣೇಶ್‌ ಭಟ್‌ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರದಾನ‌ ಸಮಾರಂಭ ಮೇ. ೨೫ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.  ಪ್ರಶಸ್ತಿಗಳು ೨೦ ಸಾವಿರ ನಗದು ಪುರಸ್ಕಾರ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿವೆ […]

ಸೋಮೇಶ್ವರ- ಕೋಟೇಶ್ವರ ರಸ್ತೆ ಕಾಮಗಾರಿ: ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಉಡುಪಿ: ಕುಂದಾಪುರ ತಾಲೂಕು ಸೋಮೇಶ್ವರ- ಕೋಟೇಶ್ವರ (ಹಾಲಾಡಿ- ಕೋಟೇಶ್ವರ ರಸ್ತೆ) ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಸಬೇಕಾಗಿರುವುದರಿಂದ ಮೇ 16 ರಿಂದ ಜುಲೈ 16 ರ ವರೆಗೆ ಸೋಮೇಶ್ವರ- ಕೋಟೇಶ್ವರ (ಹಾಲಾಡಿ- ಕೋಟೇಶ್ವರ ರಸ್ತೆ) ರಸ್ತೆಯಲ್ಲಿ ಸಂಚರಿಸುವ ಭಾರೀ ವಾಹನ ಹಾಗೂ ಬಸ್ಸುಗಳ ಸಂಚಾರದ ವ್ಯವಸ್ಥೆಯಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.     ಈ ಆದೇಶದನ್ವಯ ಕುಂದಾಪುರ ಹಾಗೂ ಉಡುಪಿ ಕಡೆಯಿಂದ ಹಾಲಾಡಿ ಕಡೆಗೆ ಹೋಗುವ ಬಸ್‍ಗಳು ಹಾಗೂ ಇತರೆ ವಾಹನಗಳಿಗೆ […]

ಡೆಂಗ್ಯೂ ನಿಯಂತ್ರಣ ಕ್ರಮಗಳನ್ನು ಅನುಸರಿಸಿ:ಡಾ.ಪ್ರಶಾಂತ್ ಭಟ್

ಉಡುಪಿ: ಡೆಂಗ್ಯೂ ಮತ್ತು ಚಿಕಂಗುನ್ಯಾ ರೋಗವನ್ನು ನಿಯಂತ್ರಿಸಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಮಲೇರಿಯಾಧಿಕಾರಿ ಡಾ.ಪ್ರಶಾಂತ್ ಭಟ್ ತಿಳಿಸಿದ್ದಾರೆ.  ಅವರು ಗುರುವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ, ಮದರ್ ಆಫ್ ಸಾರೋಸ್ ಚರ್ಚ್ ಆವರಣದಲ್ಲಿ, ವಿಶ್ವ ಡೆಂಗ್ಯೂ ನಿಯಂತ್ರಣ ದಿನದ ಪ್ರಯುಕ್ತ ನಡೆದ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.     ಡೆಂಗ್ಯೂ ಮತ್ತು […]