ಯಕ್ಷಗಾನ ಸ್ಪರ್ಧೆಯಿಂದ ಕಲೆಯ ಬೆಳವಣಿಗೆ:ರಘುಪತಿ ಭಟ್
ಉಡುಪಿ: ವಕೀಲರ ಸಂಘದ ವತಿಯಿಂದ ಅಜ್ಜರಕಾಡು ಪುರಭವನದಲ್ಲಿ ನಡೆದ ರಾಜ್ಯ ಮಟ್ಟದ ವಕೀಲರ ಯಕ್ಷಗಾನ ಸ್ಪರ್ಧೆ “ಯಕ್ಷ ಕಲಾ ವೈಭವ – 2019” ಕಾರ್ಯಕ್ರಮ ಮಂಗಳವಾರ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ ರಘುಪತಿ ಭಟ್ , ಈ ಯಕ್ಷಗಾನ ಸ್ಪರ್ಧೆ ನಿಜಕ್ಕೂ ಒಂದು ಅದ್ಭುತ ಕೆಲಸ, ಈ ಅಕಾಡಮಿ ಮೂಲಕ ಅದೆಷ್ಟೋ ಮಕ್ಕಳು ಯಕ್ಷಗಾನದ ಜೊತೆಗೆ ವಿದ್ಯಾಭ್ಯಾಸ ಕೂಡ ಮಾಡುವಂತಾಗಿದೆ, ಅದರ ಪರಿಣಾಮವಾಗಿ ಇಂದು ಈ ವೇದಿಕೆಯಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವಂತಾಗಿದೆ ಎಂದರು. […]
ಮೇ 23 ಮತ ಎಣಿಕೆ, ಮೂರು ಸುತ್ತಿನ ಭದ್ರತೆ: ಜಿಲ್ಲಾಧಿಕಾರಿ
ಉಡುಪಿ, ಮೇ 21: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆಗಳು ಅಂತಿಮಘಟ್ಟ ತಲುಪಿದ್ದು, ಗುರುವಾರ ಬೆಳಿಗ್ಗೆ 8 ಗಂಟೆಗೆ ಎಣಿಕಾ ಕಾರ್ಯ ಆರಂಭವಾಗಲಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ. ಅವರು ಮಂಗಳವಾರ ಮತ ಎಣಿಕೆ ನಡೆಯುವ ಸಂತ ಸಿಸಿಲಿ ವಿದ್ಯಾಸಂಸ್ಥೆಗೆ ಭೇಟಿ ನೀಡಿ ಅಂತಿಮ ಹಂತದ ಸಿದ್ಧತೆಗಳನ್ನು ಪರಿಶೀಲಿಸಿದರು. ಗುರುವಾರ ಬೆಳಿಗ್ಗೆ 7.30 ಗಂಟೆಗೆ ಭದ್ರತಾ ಕೊಠಡಿಯನ್ನು ತೆರೆಯಲಾಗುವುದು. ಮತ ಎಣಿಕಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ […]
ಮೀನುಗಾರರ ನಾಪತ್ತೆ ಪ್ರಕರಣ ನ್ಯಾಯಾಂಗ ತನಿಖೆಗೆ ಒಪ್ಪಿಸಿ:ಸಿಐಟಿ ಆಗ್ರಹ
ಉಡುಪಿ: ಏಳು ಮಂದಿ ಮೀನುಗಾರ ನಾಪತ್ತೆ ಪ್ರಕರಣದಲ್ಲಿ ವಾಸ್ತವ ಸಂಗತಿಯನ್ನು ಮರೆಮಾಚಲಾಗಿದ್ದು ಈ ಕುರಿತು ಸುದೀರ್ಘ ತನಿಖೆಯಾಗಬೇಕು. ರಾಜ್ಯ ಸರಕಾರ ಪರಿಹಾರ ಘೋಷಣೆ ಮಾಡಿದೆ. ಅದೇ ರೀತಿ ಕೇಂದ್ರ ಸರ್ಕಾರವೂ ಗರಿಷ್ಠ ಪ್ರಮಾಣದ ಪರಿಹಾರ ನೀಡಬೇಕು ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ಆಗ್ರಹಿಸಿದೆ. ಹೈಕೋರ್ಟ್ ಆದೇಶದಂತೆ ಕನಿಷ್ಠ ಕೂಲಿ ಜಾರಿಗೊಳಿಸುವಂತೆ ಹಾಗೂ ವಿವಿಧಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಸಿಐಟಿಯು) ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು […]
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ.ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ
ಉಡುಪಿ, ಮೇ 21: 2019-20 ರಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ. ಪ್ರಥಮ ಪ್ರಯತ್ನದಲ್ಲಿ ಶೇ.60 -74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 7000 ರೂ.ಗಳನ್ನು ಮತ್ತು ಶೇ.75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15000 ರೂ. ಗಳನ್ನು ಮಂಜೂರು ಮಾಡಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರೆ ವಿವರಗಳನ್ನು ಇಲಾಖೆಯ ವೆಬ್ಸೈಟ್ […]
ಎಸ್ಎಸ್ಎಲ್ಸಿ ತೇರ್ಗಡೆಯಾದ ಪ.ಜಾತಿ/ ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭ
ಉಡುಪಿ, ಮೇ 21: 2018 -19 ನೇ ಸಾಲಿಗೆ ಎಸ್ಎಸ್ಎಲ್ಸಿಯಲ್ಲಿ ಪ್ರಥಮ ಬಾರಿಗೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಆನ್ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. SC ವಿದ್ಯಾರ್ಥಿಗಳು ದಾಖಲೆಗಳೊಂದಿಗೆ www.sw.kar.nic.in SSLC prize money, ಹಾಗೂ ST ವಿದ್ಯಾರ್ಥಿಗಳು www.tw.kar.nic.in SSLC prize money ಸ್ಕೀಮ್ನಲ್ಲಿ ಸಂಪೂರ್ಣ ಮಾಹಿತಿಯನ್ನು (ಎಸ್ಎಸ್ಎಲ್ಸಿ ಅಂಕ ಪಟ್ಟಿ, ಆಧಾರ್ಕಾರ್ಡ್, ಬ್ಯಾಂಕ್ ಖಾತೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ) ನೀಡಿ ಕಡ್ಡಾಯವಾಗಿ ಆನ್ ಲೈನ್ನಲ್ಲಿ […]