ಯುವಕ ಯುವತಿಯರು ಜೀವನದಲ್ಲಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಂಡು ದೇಶ ಕಟ್ಟುವ ನಾಯಕರಾಗಬೇಕು: ಡಾ.ಲಕ್ಷ್ಮಣ ಕುಕ್ಕುಡೆ

ಗಂಗೊಳ್ಳಿ : ಯುವಕ ಯುವತಿಯರು ಜೀವನದಲ್ಲಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಂಡು ದೇಶ ಕಟ್ಟುವ ನಾಯಕರಾಗಬೇಕು. ಉನ್ನತ ಶಿಕ್ಷಣ ಪಡೆಯುವ ಮೂಲಕ ಸಶಕ್ತರಾಗಬೇಕು ಎಂದು ಮಂಗಳೂರು ಯುನಿರ್ವಸಿಟಿ ಕಾಲೇಜಿನ ಅಸೋಸಿಯೆಟ್ ಪ್ರೋಫೆಸರ್ ಡಾ.ಲಕ್ಷ್ಮಣ ಕುಕ್ಕುಡೆ ಹೇಳಿದರು. ಮೇಲ್‍ಗಂಗೊಳ್ಳಿಉ ಪೋರ್ಟ್ ಬಂಗ್ಲೆ ಮೈದಾನದಲ್ಲಿ ಜರಗಿದ ಡಾ.ಅಂಬೇಡ್ಕರ್ ಯುವಕ ಮಂಡಲ ಮೇಲ್‍ಗಂಗೊಳ್ಳಿ ಇದರ 32ನೇ ವಾರ್ಷಿಕೋತ್ಸವ, ಅಮೃತ ಯುವತಿ ಮಂಡಲ ಮತ್ತು ಅರ್ಚನಾ ಮಹಿಳಾ ಮಂಡಲ ಮೇಲ್‍ಗಂಗೊಳ್ಳಿ ಇವುಗಳ 26ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಡಾ.ಬಿ.ಆರ್.ಅಂಬೇಡ್ಕರ್‍ರವರ 128ನೇ ಜನ್ಮ ದಿನಾಚರಣೆ ಕಾರ್ಯಕ್ರಮದ […]

ಮೇ 26: ಗಂಗೊಳ್ಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಉಚಿತ ನೋಟ್ಸ್ ಪುಸ್ತಕ ವಿತರಣೆ

ಗಂಗೊಳ್ಳಿ : ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇವರ ಆಶ್ರಯದಲ್ಲಿ ಶಾಲಾ ಕಾಲೇಜುಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಮಕ್ಕಳಿಗೆ ಉಚಿತ ನೋಟ್ಸ್ ಪುಸ್ತಕ ವಿತರಣಾ ಸಮಾರಂಭ ಗಂಗೊಳ್ಳಿ ಶ್ರೀ ಇಂದುಧರ ದೇವಸ್ಥಾನದ ಸಭಾಂಗಣದಲ್ಲಿ ಮೇ 26ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಮತ್ಸ್ಯೋದ್ಯಮಿ ಜಿ.ಟಿ.ಮಂಜುನಾಥ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬೀಡಿ ಕಾರ್ಮಿಕರ ಮಾಹಿತಿ ನೋಂದಣಿ ಅಭಿಯಾನ

ಉಡುಪಿ, ಮೇ 22: ಕಾರ್ಮಿಕ ಕಲ್ಯಾಣ ಇಲಾಖೆಯಲ್ಲಿ ಬೀಡಿ ಕಾರ್ಮಿಕರ ಮಾಹಿತಿಯನ್ನು ಡಿಜಿಟಲೀಕರಣಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಬೀಡಿ ಕಾರ್ಮಿಕರು ತಮ್ಮ ಗುರುತಿನ ಚೀಟಿ, ಬ್ಯಾಂಕ್ ಖಾತೆ ವಿವರ, ರೇಷನ್ ಕಾರ್ಡ್ ಹಾಗೂ ಕುಟುಂಬ ಸದಸ್ಯರ ಆಧಾರ್ ಕಾರ್ಡ್ ಜೊತೆ ಹತ್ತಿರದ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿ ಮಾಹಿತಿ ನೋಂದಾಯಿಸಬೇಕಾಗಿ ಕಾರ್ಮಿಕ ಕಲ್ಯಾಣ ಆಯುಕ್ತ ಕೆ.ಶೇಖರ್ ತಿಳಿಸಿರುತ್ತಾರೆ. ಈ ಪ್ರಕ್ರಿಯೆ ಕಳೆದ ವರ್ಷ ಪ್ರಾರಂಭವಾಗಿದ್ದು, ಈವರೆಗೆ ಕೇವಲ ಶೇ.30 ಬೀಡಿ ಕಾರ್ಮಿಕರು ತಮ್ಮ […]

ಕುಂದಾಪುರ: ವಸತಿ ನಿಲಯ, ಆಶ್ರಮ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉಡುಪಿ, ಮೇ 22: ಕುಂದಾಪುರ ತಾಲೂಕಿನಲ್ಲಿ ನಡೆಯುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ / ಬಾಲಕಿಯರ ವಸತಿ ನಿಲಯಗಳಲ್ಲಿ ಹಾಗೂ ಆಶ್ರಮ ಶಾಲೆಗಳಲ್ಲಿ 2019-20 ನೇ ಸಾಲಿನಲ್ಲಿ ಖಾಲಿ ಇರುವ ಸ್ಥಳಗಳಿಗೆ ಅರ್ಹ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ / ಇತರೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವಸತಿ ನಿಲಯ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವೇಶ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ www.sw.kar.nic.in (ಪ.ಜಾತಿ ವಸತಿ ನಿಲಯಗಳಿಗೆ), www.tw.kar.nic.in (ಪ.ಪಂಗಡ […]

ವಿದ್ವಾಂಸರು ಅಸಹನೆಯನ್ನು ತೊರೆಯಬೇಕು  ಡಾ. ಉಪ್ಪಂಗಳ ರಾಮಭಟ್ಟ

ಉಡುಪಿ: ವಿದ್ವಾಂಸರು ತಮ್ಮ ಅಸಹನೆಯನ್ನು ತೊರೆದು ಇತರ ವಿದ್ವಾಂಸರನ್ನು ಅರ್ಥಮಾಡಿಕೊಳ್ಳುವ ಗುಣಬೆಳೆಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಪ್ರೊ. ಉಪಂಗಳ ರಾಮ ಭಟ್ಟ ನುಡಿದರು. ಅವರು   ಬುಧವಾರ ನೂತನ ರವೀಂದ್ರ ಮಂಟಪದಲ್ಲಿ ಪ್ರೊ. ತಾಳ್ತಜೆ ಕೇಶವ ಭಟ್ಟರ ನೆನಪಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇದರ ಸಂಯುಕ್ತಾಶ್ರಯದಲ್ಲಿ ನಡೆದ  ತಾಳ್ತಜೆ ಕೇಶವ ಭಟ್ಟ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡುತ್ತಿದ್ದರು. ಯಾವ ವಿದ್ವಾಂಸರು ಕೂಡ ತಾವು ಪೂರ್ಣರು ಎಂಬ ಅಹಂನ್ನು ಹೊಂದಬಾರದು. ಜ್ಞಾನಕ್ಕೆ […]