ಉಡುಪಿ: ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ತರಬೇತಿ

ಉಡುಪಿ : 2019-20 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು.  ಸವಿತಾ ಸಮಾಜದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ನಮೂನೆಯನ್ನು ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಜೂನ್ 4 ರೊಳಗೆ ಜಿಲ್ಲಾ ಅಧಿಕಾರಿ, ಹಿಂದುಳಿದ […]

ವಿಶ್ವ ಪರಿಸರ ದಿನಾಚರಣೆ :ಜೂ. 1 ಚಿತ್ರಕಲಾ ಸ್ಪರ್ಧೆ

ಉಡುಪಿ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ, ಉಡುಪಿಯು 2019 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂನ್ 1 ರಂದು ಬೆಳಗ್ಗೆ 10 ಕ್ಕೆ ಉಡುಪಿ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾಯು ಮಾಲಿನ್ಯ ತಡೆಗಟ್ಟುವ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಿರುತ್ತದೆ.     ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ  ಪಾಲ್ಗೊಳ್ಳಬಹುದಾಗಿದ್ದು, ಪ್ರಾಥಮಿಕ ಶಾಲಾ ವಿಭಾಗದಲ್ಲಿ 1 ರಿಂದ 4 […]

ರಜನಿಕಾಂತ್ “ದರ್ಬಾರ್” ಗೆ ವಿಲನ್ ಆದ ಸುನೀಲ್ ಶೆಟ್ಟಿ  

ಬೆಂಗಳೂರು: ಸೂಪರ್ ಸ್ಟಾರ್, ತಲೈವ ರಜನಿಕಾಂತ್ ದರ್ಬಾರ್ ಗೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ವಿಲನ್ ಆಗಿ ಅಭಿನಯಿಸಲಿದ್ದಾರೆ. ಪೈಲ್ವಾನ್ ನಲ್ಲಿ ಕಿಚ್ಚ ಸುದೀಪ್ ಜತೆ ಕಾಣಿಸಿಕೊಂಡು ಅಬ್ಬರಿಸಿದ್ದ ಸುನೀಲ್ ಈಗ ವಿಲನ್ ಆಗಿದ್ದು, ಈ ಸಿನಿಮಾದಲ್ಲಿ ಸುನೀಲ್ ಶೆಟ್ಟಿ ಖಳ ನಟನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಸುನೀಲ್ ಶೆಟ್ಟಿ ಸದ್ಯ ಕನ್ನಡ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷೆಯ ಪೈಲ್ವಾನ್ ಚಿತ್ರದಲ್ಲಿ ಸುನೀಲ್ ಶೆಟ್ಟಿ ಪ್ರಮುಖ […]

ಕಾರ್ಕಳ: ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದ ದಾಳಿ

ಉಡುಪಿ, ಮೇ 25: ಉಡುಪಿ ಜಿಲ್ಲೆಯಲ್ಲಿ COTPA 2003 ಕಾಯ್ದೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣಾ ತನಿಖಾ ದಳದ ವತಿಯಿಂದ ಕಾರ್ಕಳ ತಾಲೂಕಿನ ಕಾರ್ಕಳ ಬಸ್ ನಿಲ್ದಾಣ ಮತ್ತು ಕೋರ್ಟ್ ವ್ಯಾಪ್ತಿ ಪ್ರದೇಶಗಳಲ್ಲಿ ತಂಬಾಕು ಮಾರಾಟದ ಅಂಗಡಿಗಳು, ಹೋಟೇಲ್‍ಗಳು, ಬಾರ್ ಮತ್ತು ರೆಸ್ಟೋರೆಂಟ್‍ಗಳಿಗೆ ದಾಳಿ ನಡೆಸಿ ಸೆಕ್ಷನ್ 4, 6 (ಎ) ಮತ್ತು 6(ಬಿ) ಅಡಿಯಲ್ಲಿ 44 ಪ್ರಕರಣ ದಾಖಲಿಸಿ 5000 ರೂ. ದಂಡ ವಸೂಲಿ ಮಾಡಲಾಗಿದೆ. ಅದರಂತೆ ಸೆಕ್ಷನ್ 4, 6 (ಎ) ಮತ್ತು […]

ಎಲೆಯಲ್ಲಿದೆ ಆರೋಗ್ಯದ ಗುಟ್ಟು: ಎಲೆಯಲ್ಲಿ ಮಾಡಿದ ತಿಂಡಿಗಳನ್ನು ತಿಂದ್ರೆ ಆಗುವ ಲಾಭ ಏನೇನ್ ಗೊತ್ತಾ?

 ಎಲೆಯಲ್ಲಿ ಬೇಯಿಸಿದ ಆಹಾರದ ರುಚಿಯೇ ಅದ್ಬುತ. ಎಲೆಯಲ್ಲಿ ಮಾಡುವ  ಊಟ ಆಹಾ  ಎಂಥಾ ಪರಿಮಳ, ಎಂಥ ರುಚಿ ಎನ್ನುವವರಿದ್ದಾರೆ. ಅಡುಗೆಯಲ್ಲಿ ವಿವಿಧ ರೀತಿಯ ಎಲೆಗಳನ್ನು ಬಳಸಿ ಆಹಾರ ಮಾಡುವುದು ಸಾಮಾನ್ಯ. ಆದರೆ ಕೆಲವು ಎಲೆಗಳನ್ನು ತಿನ್ನಲು ಸಾಧ್ಯವಾಗದ ಕಾರಣ, ಆ ಎಲೆಗಳನ್ನು ಬಳಸಿಯೇ  ಆಹಾರ ಬೇಯಿಸಲು ಉಪಯೋಗಿಸುತ್ತಾರೆ.  ನಮ್ಮ ಕರಾವಳಿ ಪ್ರದೇಶದಲ್ಲಿ ವಿವಿಧ ಎಲೆಗಳನ್ನು ಬಳಸಿ ಆಹಾರವನ್ನು ಬೇಯಿಸುವ ಹಾಗೂ ಆಹಾರ ಬಡಿಸುವ  ಕ್ರಮ ಹಿಂದಿನ ಕಾಲದಿಂದ ರೂಢಿಯಲ್ಲಿದೆ.  ಆಹಾರವನ್ನು ಎಲೆಯಲ್ಲಿಟ್ಟು  ಬೇಯಿಸುವುದರಿಂದ ಎಲೆಯಲ್ಲಿರುವ ಸತ್ವವು ಆಹಾರದಲ್ಲಿ […]