ಯಾಂತ್ರೀಕೃತ ಮೀನುಗಾರಿಕೆ ನಿಷೇಧ: ಉಲ್ಲಂಘಿಸಿದರೆ ಸಬ್ಸಿಡಿ ಇಲ್ಲ

ಉಡುಪಿ, ಮೇ 27: ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆಯನ್ವಯ ಉಡುಪಿ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಇನ್‍ಬೋರ್ಡ್ ಅಥವಾ ಔಟ್‍ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳ ನಿಷೇಧ ಆದೇಶ ಹೊರಡಿಸಿರುತ್ತಾರೆ. ಅಲ್ಲದೆ ಕೇಂದ್ರ ಕೃಷಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯವು […]

ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ

ಉಡುಪಿ, ಮೇ 27: 2018-19 ನೇ ಸಾಲಿನ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಿ ಮತ್ತು ಅನುದಾನಿತ ಶಾಲಾ/ ಕಾಲೇಜುಗಳ ಕ್ರೀಡಾ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂತರರಾಷ್ಟ್ರ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ, ಬೆಳ್ಳಿ ಕಂಚಿನ ಪದಕ ವಿಜೇತರಾದವರು ಹಾಗೂ ವಿಕಲಚೇತನ ಕ್ರೀಡಾಪಟುಗಳು ಕೂಡಾ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಅರ್ಹ ಅಭ್ಯರ್ಥಿಗಳು ಕಚೇರಿಯವೆಬ್‍ಸೈಟ್  http://serviceonline.gov.in/Karnataka  ಮೂಲಕ […]

ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉಡುಪಿ, ಮೇ 27: 2019-20 ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲ್ಲೂಕಿನ ಹೊನ್ನಾಳ ಮತ್ತು ಕಾಪು ತಾಲ್ಲೂಕಿನ ಮಲ್ಲಾರುವಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅತಿಥಿ ಶಿಕ್ಷಕರ ಸೇವೆಯನ್ನು ಪಡೆಯಲು ಸೂಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಂಗ್ಲ ಭಾಷಾ ಶಿಕ್ಷಕರು ( 2 ಹುದ್ದೆ – ಬಿ.ಎ, ಬಿ.ಎಡ್), ಹಿಂದಿ ಭಾಷಾ ಶಿಕ್ಷಕರು( 2 ಹುದ್ದೆ – ಬಿ.ಎ, ಬಿ.ಎಡ್), ಗಣಿತ ಶಿಕ್ಷಕರು ( 2 […]

ಮಹಿಳಾ ಬೀದಿ ನಾಟಕ, ಸಂಗೀತ ಕಲಾ ತಂಡಗಳಿಂದ ಅರ್ಜಿ

ಉಡುಪಿ, ಮೇ 27: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಉಡುಪಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 2019-20 ನೇ ಸಾಲಿನಲ್ಲಿ ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧಾರಿತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳ ಪ್ರದರ್ಶಿಸಲು ಮಹಿಳಾ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಕಲಾ ತಂಡಗಳು ಬೀದಿ ನಾಟಕ ಪ್ರದರ್ಶನದಲ್ಲಿ ಅನುಭವ ಹೊಂದಿರಬೇಕು. ಅಭಿನಯ, ಹಾಡು, ಸಂಗೀತ, ನಿರೂಪಣೆ ಸಾಮಥ್ರ್ಯ ಹೊಂದಿರಬೇಕು. ಒಂದು ಬೀದಿ ನಾಟಕ ತಂಡದಲ್ಲಿ ಕಡ್ಡಾಯವಾಗಿ ಎಂಟು ಜನ ಮಹಿಳಾ ಕಲಾವಿದರಿರಬೇಕು. […]

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಬಹುಮಾನ ಹಣ ಮಂಜೂರು

ಉಡುಪಿ, ಮೇ 27: 2019-20 ರಲ್ಲಿ ನಡೆದ ದ್ವಿತೀಯ ಪಿಯುಸಿ, 3 ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಬಿಎಡ್, ಬಿಪಿಎಡ್, ಸ್ನಾತ್ತಕೋತ್ತರ ಪದವಿ, ಎಂಎಡ್, ಎಂಪಿಎಡ್, ಕೃಷಿ, ಪಶುಸಂಗೋಪನೆ, ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕೋರ್ಸುಗಳಿಗೆ ಸಂಬಂಧಿಸಿದಂತೆ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು […]