ಹೆಚ್ಚು ಬಾರಿ ರಕ್ತದಾನ ಮಾಡಿದ ರಕ್ತದಾನಿಗಳಿಗೆ ಸನ್ಮಾನ
ಉಡುಪಿ, ಮೇ 27: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯು “ಎ” “ಬಿ” “ಒ” ರಕ್ತದ ಗುಂಪನ್ನು ಕಂಡುಹಿಡಿದ ಡಾ. ಕಾರ್ಲ್ ಲ್ಯಾಂಡ್ ಸ್ಟೇನಿಯರ್‍ರವರ ಹುಟ್ಟುಹಬ್ಬವನ್ನು ಸ್ಮರಿಸಿ ಪ್ರತಿ ವರ್ಷ ವಿಶ್ವದಾದ್ಯಂತ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯಾವುದೇ ಪ್ರತಿಫಲವನ್ನು ಅಪೇಕ್ಷಿಸದೇ ಇನ್ನೊಬ್ಬರ ಅಮೂಲ್ಯವಾದ ಜೀವವನ್ನು ಉಳಿಸಬೇಕೆಂಬ ಉದ್ದೇಶವನ್ನು ಇಟ್ಟುಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನವನ್ನು ಮಾಡುವ ರಕ್ತದಾನಿಗಳಿಗೆ ಗೌರವ ಮತ್ತು ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸುವ ಮುಖ್ಯ ಉದ್ದೇಶವೇ ವಿಶ್ವ ರಕ್ತದಾನಿಗಳ ದಿನಾಚರಣೆ. ಈ ವರ್ಷ […]
ಪಡಿತರ ಚೀಟಿಗೆ ಕೆವೈಸಿ ಅಪ್ಲೋಡ್ ಮಾಡಲು ಸೂಚನೆ: ಜಿಲ್ಲಾಧಿಕಾರಿ
ಉಡುಪಿ, ಮೇ 27: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ನಿಯಮದಂತೆ ಆಹಾರ ಧಾನ್ಯ ಪಡೆಯುತ್ತಿರುವ (ಬಿಪಿಎಲ್, ಎಎವೈ & ಎಪಿಎಲ್) ಕಾರ್ಡುದಾರರು ಹೊಸದಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಕಾರ್ಡಿನಲ್ಲಿರುವ ಎಲ್ಲಾ ಸದಸ್ಯರ ಇ-ಕೆವೈಸಿಯನ್ನು ಅಪ್ಲೋಡ್ ಮಾಡಬೇಕಾಗಿದ್ದು, ನ್ಯಾಯಬೆಲೆ ಅಂಗಡಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ತಂತ್ರಾಂಶದಲ್ಲಿ ಮಾಹಿತಿ ಅಪ್‍ಲೋಡ್ ಮಾಡುವಾಗ ಪಡಿತರ ಕಾರ್ಡಿನ ಕುಟುಂಬದ ಹಿರಿಯ ಮಹಿಳಾ ಸದಸ್ಯರನ್ನು ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಬೇಕು ಮತ್ತು ಹೊಸ ಕುಟುಂಬದ ಮುಖ್ಯಸ್ಥರೊಂದಿಗೆ (ಹಿರಿಯ ಮಹಿಳಾ ಸದಸ್ಯ) ಇತರೆ ಸದಸ್ಯರ ಸಂಬಂಧದ […]
ಗಂಗೊಳ್ಳಿ:ಬೈಲು ಸ್ವಾಮಿ, ಅಶ್ವಥ ಮರ ಹಾಗೂ ನವಗ್ರಹ ಮಂದಿರಗಳಿಗೆ ಭಕ್ತರು ಕಾಯಕಲ್ಪ:ವಿವಿಧ ಧಾರ್ಮಿಕ ಅನುಷ್ಠಾನ
ಗಂಗೊಳ್ಳಿ : ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮದ ಶ್ರೀ ಇಂದುಧರ ದೇವಸ್ಥಾನದ ಎದುರುಗಡೆ ಇರುವ ನಾಗಬನ, ಬೈಲು ಸ್ವಾಮಿ, ಅಶ್ವಥ ಮರ ಹಾಗೂ ನವಗ್ರಹ ಮಂದಿರಗಳಿಗೆ ಭಕ್ತರು ಕಾಯಕಲ್ಪ ನೀಡಿದ್ದು, ಮೇ ೨೯ರಂದು ಈ ಸಂಬಂಧ ವಿವಿಧ ಧಾರ್ಮಿಕ ಅನುಷ್ಠಾನಗಳು ಸಂಪನ್ನಗೊಳ್ಳಲಿದೆ.ನಾಗದೇವರ ಸಂಕಲ್ಪದಂತೆ ಅಂದು ಬೆಳಿಗ್ಗೆ ೯ ಗಂಟೆಯಿಂದ ನಾಗಸನ್ನಿಧಿಯಲ್ಲಿ ಶ್ರೀ ಅಂಬಿಕಾ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಅನಂತಕೃಷ್ಣ ಭಟ್ ನೇತೃತ್ವದಲ್ಲಿ ಶ್ರೀ ನಾಗದೇವರು, ಬೈಲು ಸ್ವಾಮಿ, ಅಶ್ವಥನಾರಾಯಣ ನವಗ್ರಹ ಸಾನಿಧ್ಯದಲ್ಲಿ ಕಲಾಭಿವೃದ್ಧಿಗೋಸ್ಕರ ನವಕಲಶ ಹಾಗೂ […]
ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ :ಸನ್ಮಾನ ಸಮಾರಂಭ
ಗಂಗೊಳ್ಳಿ : ವಿದ್ಯಾದಾನ ಶ್ರೇಷ್ಠ ದಾನಗಳಲ್ಲಿ ಒಂದಾಗಿದ್ದು, ವಿದ್ಯೆಗೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ. ಇಂದಿನ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಎಲ್ಲಾ ರೀತಿಯ ವ್ಯವಸ್ಥೆಗಳಿದ್ದು, ಮಕ್ಕಳಿಗೆ ವಿದ್ಯಾಭ್ಯಾಸ ನೀಡುವಲ್ಲಿ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು. ಎಂದು ಉಡುಪಿ ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಹೇಳಿದರು.ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿಮಲಾ ವಿ.ಪೈ ಸಭಾಂಗಣದಲ್ಲಿ ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇವರ ಆಶ್ರಯದಲ್ಲಿ ಭಾನುವಾರ ಜರಗಿದ ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ […]
ಉಡುಪಿ ಶ್ರೀಕೃಷ್ಣನಿಗೆ ಸುವರ್ಣ ಗೋಪುರ ರಜತ ಕಲಶ ಸಮರ್ಪಣೆ, ಜೂ.1ರಿಂದ ವೈಭವದ ಶೋಭಾಯಾತ್ರೆ
ಉಡುಪಿ ಮೇ 26: ಉಡುಪಿ ಶ್ರೀಕೃಷ್ಣ ಮಠದಲ್ಲಿ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಕೃಷ್ಣನಿಗೆ ಸುವರ್ಣ ಗೋಪುರ ಸಮರ್ಪಣೆ ಯಾಗಲಿದ್ದು ಜೂನ್ 1 ರಂದು ಅಪರಾಹ್ನ 4ಗಂಟೆಗೆ ಶ್ರೀಕೃಷ್ಣ ಮುಖ್ಯಪ್ರಾಣ ಸೇವಾ ಸಮಿತಿ ಮತ್ತು ಕಿರಿಯರು ವಿಷ್ಣುಮೂರ್ತಿ ಹಾಗೂ ವನದುರ್ಗಾ ಸೇವಾ ಸಮಿತಿಯ ನೇತೃತ್ವದಲ್ಲಿ ಸುವರ್ಣ ಶಿಖರ ಮತ್ತು ರಜದ ಕಲಶದ ವೈಭವದ ಮೆರವಣಿಗೆ ನಡೆಯಲಿದೆ. 1008 ರಜತ ಕಲಶಗಳನ್ನು ಬ್ರಹ್ಮರಥದ ಮಾದರಿಯಲ್ಲಿ ಜೋಡಿಸಿ ಸ್ತಬ್ಧಚಿತ್ರ ನಿರ್ಮಿಸಲಾಗಿದೆ. ವಾದಿರಾಜ ಸ್ವಾಮೀಜಿಗಳ ನೇತೃತ್ವದಲ್ಲಿ ರಚಿತವಾದ […]