12ನೇ ವಿಶ್ವಕಪ್ ಮೊದಲ ಪಂದ್ಯ,  ದಕ್ಷಿಣ ಆಫ್ರಿಕಾ ವಿರುದ್ದ ಇಂಗ್ಲೆಂಡ್ ಗೆ ಭರ್ಜರಿ‌ ಜಯ 

ಲಂಡನ್: 12ನೇ ವಿಶ್ವಕಪ್ ನಲ್ಲಿ ಪ್ರಶಸ್ತಿ ಗೆಲ್ಲುವ ಹಾಟ್ ಫೇವರಿಟ್ ಇಂಗ್ಲೆಂಡ್ ತಂಡ ಮೊದಲ ಪಂದ್ಯದಲ್ಲಿ ಭರ್ಜರಿ ಶುಭಾರಂಭ ಕಂಡಿದೆ. ಗುರುವಾರ ನಡೆದ ಪಂದ್ಯದಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಉತ್ತಮ‌ ಪ್ರದರ್ಶನ‌ ನೀಡಿದ ಇಂಗ್ಲೆಂಡ್ ದ.ಆಫ್ರಿಕಾ ತಂಡವನ್ನು 104 ರನ್ಗಳಿಂದ ಬಗ್ಗು ಬಡಿದಿದೆ. ಟಾಸ್ ಗೆದ್ದ ದ.ಆಫ್ರಿಕಾ ಬೌಲಿಂಗ್ ಆಯ್ದುಕೊಂಡಿತು.‌ ಹೀಗಾಗಿ ಮೊದಲು‌ ಬ್ಯಾಟಿಂಗ್ ಇಳಿದ ಇಂಗ್ಲೆಂಡ್ 50 ಒವರ್ಗಳಲ್ಲಿ 311 ರನ್ ಕಲೆ‌ ಹಾಕಿತು. ಜಾನಿ ಬೈರ್ಸ್ಟೋ ಸೊನ್ನೆಗೆ ಔಟಾದರೂ ಇಂಗ್ಲೆಂಡ್ ಪರ ಜೇಸನ್ […]

ಮೋದಿ ಸರ್ಕಾರ್ 2: ಕೇಂದ್ರ ಸಚಿವ ಸಂಪುಟ ಸೇರಿದವರ ಪಟ್ಟಿ

ನವದೆಹಲಿ, ಮೇ 30: ನರೇಂದ್ರ ಮೋದಿ  ಪ್ರಧಾನಿಯಾಗಿ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಗುರುವಾರ ರಾಷ್ಟ್ರಪತಿ ಭವನದ ರೈಸಿನಾ ಹಿಲ್ಸ್ ನಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ದಾಮೋದರ್ ದಾಸ್ ಮೋದಿ ಅವರು 2ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.  ಕಾರ್ಯಕ್ರಮದಲ್ಲಿ 8 ಸಾವಿರಕ್ಕೂ ಹೆಚ್ಚು ಆಹ್ವಾನಿತ ಅತಿಥಿಗಳು ಪಾಲ್ಗೊಂಡಿದ್ದರು. ಮೋದಿ ಸರ್ಕಾರದ ಸಚಿವರ ಪಟ್ಟಿ : ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದರು.20 […]

ಜೋಪಡಿಯಲ್ಲೇ ಕಮರುತ್ತಿದೆ ಕೊರಗರ ಬೆಚ್ಚಗಿನ ಸೂರಿನ ಕನಸು!:ಕೊರಗರ ಕೊರಗು ಕೇಳೋರ್ಯಾರು?

ಕುಂದಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಎಷ್ಟೇ ಬಾರಿ ಗೆದ್ದು ಬಂದರೂ ಮೂಲನಿವಾಸಿಗಳ ಮೂಲಭೂತ ಸಮಸ್ಯೆಗಳು ಹಾಗೇ ಇರುತ್ತವೆ ಎಂಬುದಕ್ಕೆ ತಾಜಾ ಉದಾಹರಣೆ ಇದು. ಕಳೆದ ಹಲವು ವರ್ಷಗಳಿಂದ ಸುಭದ್ರ ಮನೆ ಇಲ್ಲದೆ, ತೆಂಗಿನಗರಿ, ಟಾರ್ಪಾಲಿನಡಿಯಲ್ಲಿ ಜೀವನ ಸಾಗಿಸುತ್ತಿರುವ ಕೊರಗ ಕುಟುಂಬವೊಂದರ ಕರುಣಾಜಕನಕ ಕತೆ ಇಲ್ಲಿದೆ. ಬೈಂದೂರು ವಿಧಾನಸಭಾ ಕ್ಷೇತ್ರದ ಜಡ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾಟಿಗುಂಡಿಯಲ್ಲಿರುವ ಎರಡು ಕೊರಗ ಕುಟುಂಬಗಳು ಇಂದಿಗೂ ಸುಭದ್ರ ಮನೆ, ವಿದ್ಯುತ್ ಇಲ್ಲದೇ ಗುಡಿಸಲಿನಲ್ಲಿ ಭಯದ ನೆರಳಲ್ಲೇ ಜೀವನ ಸಾಗಿಸುತ್ತಿವೆ. ಜಡ್ಕಲ್ ಪಂಚಾಯತ್ […]

ಪ್ಲಾಸ್ಟಿಕ್ ತಂತ್ರಜ್ಞಾನ: ಡಿಪ್ಲೋಮಾ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಉಡುಪಿ, ಮೇ 30: ಮೈಸೂರಿನ ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ ಸಿಪೆಟ್ (ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ) ಸಂಸ್ಥೆಯು ಭಾರತ ಸರ್ಕಾರದ ರಸಾಯನ, ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ. 2019-20 ನೇ ಸಾಲಿನ 2 ನೇ ವರ್ಷದ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ-2 ವರ್ಷ, ಡಿಪ್ಲೋಮಾ […]

ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮ

ಉಡುಪಿ, ಮೇ 30: ಉಡುಪಿ ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳ ಹಾಗೂ ಗ್ರಾಮ ಪಂಚಾಯತ್ ಯಡ್ತಾಡಿ ಇವರ ಸಹಯೋಗದಲ್ಲಿ ಕೋಟ ಹೋಬಳಿ ಮಟ್ಟದ ಕೃಷಿ ಅಭಿಯಾನ ಕಾರ್ಯಕ್ರಮವು ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ ಎಂಬ ಘೋಷವಾಕ್ಯದಡಿಯಲ್ಲಿ ಜೂನ್ 6 ರಂದು ಬೆಳಗ್ಗೆ 10.30 ಕ್ಕೆ ಯಡ್ತಾಡಿ ಗ್ರಾಮ ಪಂಚಾಯತ್ ಸಭಾಭವನ (ಸಾೈಬರಕಟ್ಟೆ) ದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದು, ಯಡ್ತಾಡಿ ಗ್ರಾಮ ಪಂಚಾಯತ್ […]