ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಅರಣ್ಯ ಇಲಾಖೆ: ಮ್ಯಾಂಗ್ರೋವ್ ಗಿಡ ನೆಡುವ ಕಾರ್ಯಕ್ರಮ
ಉಡುಪಿ, ಮೇ 31: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಹಾಗೂ ಅರಣ್ಯ ಇಲಾಖೆ ಕುಂದಾಪುರ ಇವರ ನೇತೃತ್ವದಲ್ಲಿ ಮೇ 27 ರಂದು ಕುಂದಾಪುರದ ಮೂವತ್ತು ಮೂಡಿ ಎಂಬ ಸಮುದ್ರ ಮತ್ತು ನದಿ ಸೇರುವ ಸ್ಥಳದಲ್ಲಿ 3000 ಮ್ಯಾಂಗ್ರೋವ್ ಗಿಡವನ್ನು ಸ್ಕೌಟ್ಸ್-ಗೈಡ್ಸ್, ರೋವರ್-ರೇಂಜರ್ ಸಹಕಾರದಿಂದ ಗಿಡ ನೆಡುವ ಮೂಲಕ ಪ್ರಕೃತಿ ರಕ್ಷಣೆಯನ್ನು ಸ್ಕೌಟ್ಸ್ ಗೈಡ್ಸ್‍ಗಳು ಯಾವ ರೀತಿ ಮಾಡಬಹುದು ಎಂಬುದನ್ನು ಸಮಾಜಕ್ಕೆ ನೀದರ್ಶನ ನೀಡುವ ಒಂದು ಉತ್ತಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಅಲ್ಲಿನ ಅರಣ್ಯಧಿಕಾರಿಗಳು ಮ್ಯಾಂಗ್ರೋವ್ ಗಿಡದ […]
ಉಡುಪಿ,ಬ್ರಹ್ಮಾವರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಮನವಿ
ಉಡುಪಿ, ಮೇ 31: ಉಡುಪಿ, ಬ್ರಹ್ಮಾವರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ಗ್ರಾಮ ಪಂಚಾಯತ್, ನಗರಸಭೆ ಹಾಗೂ ಪುರಸಭೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿ ಹಾಗೂ ಬ್ರಹ್ಮಾವರ ಕಚೇರಿಯ ನೋಟೀಸ್ ಬೋರ್ಡಿನಲ್ಲಿ ಹಾಕಲಾಗಿರುತ್ತದೆ. ಈ ಆಯ್ಕೆ ಪಟ್ಟಿಯ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಜೂನ್ 6 ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇವರಿಗೆ ಮುದ್ದಾಂ ಆಗಿ ಅಥವಾ ಅವರ ಕಚೇರಿಗೆ ಸಲ್ಲಿಸುವಂತೆ ಉಡುಪಿ ಹಾಗೂ ಬ್ರಹ್ಮಾವರ ಶಿಶು […]
ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಸ್ಥಾನ ಪಡೆಯಲು ಯತ್ನ: ದಿನಕರ ಬಾಬು
ಉಡುಪಿ, ಮೇ 31: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯಬೇಕೆನ್ನುವ ಉಡುಪಿ ಜಿಲ್ಲೆಯ ಅತಿಯಾದ ಆತ್ಮವಿಶ್ವಾಸ ಮತ್ತು ತಂತ್ರಗಾರಿಕೆಯನ್ನು ಬೇರೆ ಜಿಲ್ಲೆಯವರು ಅನುಕರಣೆ ಮಾಡಿದ್ದರಿಂದ ಜಿಲ್ಲೆಗೆ ಹಿನ್ನೆಡೆಯಾಗಿದ್ದು, ರಾಜ್ಯದಲ್ಲಿ 5 ನೇ ಸ್ಥಾನ ಪಡೆಯುವಂತಾಗಿದೆ, ಮುಂದಿನ ಸಾಲಿನಲ್ಲಿ ಬೇರೆ ರೀತಿಯ ವಿಭಿನ್ನ ತಂತ್ರಗಾರಿಕೆ ಹಾಗೂ ಮಕ್ಕಳಲ್ಲಿ ಕಲಿಯುವಿಕೆಯ ಬಗ್ಗೆ ಹೆಚ್ಚಿನ ಜಾಗೃತಿಯನ್ನು ವಹಿಸುವುದರ ಮೂಲಕ , ರಾಜ್ಯದಲ್ಲಿ ಮತ್ತೆ ಪ್ರಥಮ ಸ್ಥಾನ ಪಡೆಯುವಲ್ಲಿ ಎಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರುಗಳು ಸಹಕರಿಸಬೇಕೆಂದು ಜಿಲ್ಲಾ […]
ಕೃಷ್ಣಮಠದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ
ಉಡುಪಿ: ಕೃಷ್ಣಮಠದಲ್ಲಿ ಸುವರ್ಣಗೋಪುರ ಶಿಖರ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪೂರ್ವಭಾವಿಯಾಗಿ ಹಾಗೂ ಮಳೆಗಾಗಿ ಬುಧವಾರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಚಂದ್ರಮೌಳೇಶ್ವರ ಹಾಗೂ ಅನಂತೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಪಲಿಮಾರು ವಿದ್ಯಾಧೀಶ ಶ್ರೀಪಾದರು, ಅದಮಾರು ಕಿರಿಯ ಈಶಪ್ರಿಯ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ವಿದ್ಯಾರಾಜೇಶ್ವರ ಶ್ರೀಪಾದರು ವಿಶೇಷ ಪೂಜೆ ಸಲ್ಲಿಸಿದರು. ಪರ್ಯಾಯ ಮಠದ ದಿವಾನ ವೇದವ್ಯಾಸ ತಂತ್ರಿ, ಪುರೋಹಿತ ಮಧುಸೂದನ ಆಚಾರ್ಯ, ಮಠದ ಪಿಆರ್‌ಒ ಶ್ರೀಶ ಭಟ್ ಕಡೆಕಾರ್, […]
ಕುಡಿವ ನೀರಿಗೆ ರೂ.32.14 ಕೋಟಿ ಅನುದಾನ ಬಿಡುಗಡೆ
ಉಡುಪಿ: ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ 2019- 20ನೇ ಸಾಲಿಗೆ ಜಿಲ್ಲೆಗೆ ಒಟ್ಟು ರೂ. 32.14 ಕೋಟಿ ಅನುದಾನ ಮಂಜೂರಾಗಿದೆ. ಈ ಬಗ್ಗೆ ಮಾರ್ಗಸೂಚಿಯನುಸಾರ ಕ್ರಿಯಾ ಯೋಜನೆ ತಯಾರಿಸುವ ಸಂಬಂಧಿಸಿದಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಿತು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧೂ ಬಿ. ರೂಪೇಶ್, ಮುಖ್ಯ ಯೋಜನಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.