ಡಿ. ದೇವರಾಜ ಅರಸು ಹಿ.ವ.ಅಭಿವೃದ್ಧಿ ನಿಗಮ: ಸಾಲ ಯೋಜನೆ

ಉಡುಪಿ : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2019-20 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.     ನಿಗಮದ ಯೋಜನೆಗಳಲ್ಲಿ ಸೌಲಭ್ಯ ಪಡೆಯಲಿಚ್ಛಿಸುವ ಅರ್ಜಿದಾರರು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದವರಾಗಿರಬೇಕು (ವಿಶ್ವಕರ್ಮ ಮತ್ತು ಅದರ ಉಪ ಸಮುದಾಯಗಳು, ಉಪ್ಪಾರ ಮತ್ತು ಅದರ ಉಪ ಸಮುದಾಯಗಳು, ಅಂಬಿಗ ಮತ್ತು ಅದರ ಉಪ ಸಮುದಾಯಗಳು ಮತ್ತು ಮತೀಯ […]

ಬಾಲ ಕಾರ್ಮಿಕರ ಪತ್ತೆಗೆ ದಾಳಿ ನಡೆಸಿ: ಉಡುಪಿ ಅಪರ ಜಿಲ್ಲಾಧಿಕಾರಿ

ಉಡುಪಿ :ಜಿಲ್ಲೆಯಲ್ಲಿ ಕಾರ್ಖಾನೆಗಳು ಸೇರಿದಂತೆ ಹಲವು ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಲು ಅನಿರೀಕ್ಷಿತ ದಾಳಿಗಳನ್ನು ನಡೆಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೂಚಿಸಿದ್ದಾರೆ.  ಅವರು ಗುರುವಾರ, ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಬಾಲ ಕಾರ್ಮಿಕ ವಿರೋಧಿ ದಿನ ಆಚರಣೆಗೆ ಮಾತ್ರ ಸಲ್ಲದು, ವಿವಿಧ ಉದ್ದಿಮೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ […]

ಉಡುಪಿ ಜಿಲ್ಲೆಯಲ್ಲಿ ಇನ್ಮುಂದೆ ಪ್ರತೀ ಸೋಮವಾರ ಎಸಿ ರಹಿತ ದಿನ: ಜಿಲ್ಲಾಧಿಕಾರಿ ಘೋಷಣೆ

ಉಡುಪಿ: ಪರಿಸರ ರಕ್ಷಣೆ  ಹಾಗೂ ಜಾಗತಿಕ ಪರಿಸರ ತಾಪಮಾನವನ್ನು ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲಾ ಸರ್ಕಾರಿ ಕಚೇರಿಗಳ ಎಸಿಗಳನ್ನು ಆಫ್ ಮಾಡಿ ಕಾರ್ಯ ನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.  ಅವರು ಗುರುವಾರ, ಸಮೂಹ ಸಾರಿಗೆಯಲ್ಲಿ ತಮ್ಮ ಕಚೇರಿಗೆ ತೆರಳುತ್ತಾ ಮಾತನಾಡಿದರು.  ವಿಶ್ವ ಪರಿಸರ ದಿನದ ಅಂಗವಾಗಿ, ಈ ವರ್ಷದ ಘೋಷವಾಕ್ಯ, ವಾಯು ಮಾಲಿನ್ಯ ನಿಯಂತ್ರಣ ಕುರಿತಾಗಿದ್ದು, ಇದನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಕುರಿತಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ, […]

ಸೋಲಾರ್‌ ದೀಪಗಳ ಕೊಡುಗೆಯ ಸಮಾರೋಪ ಸಮಾರಂಭ ಜೂ. 9 ಕ್ಕೆ

ಉಡುಪಿ: ಅಮಾಸೆಬೈಲು ಗ್ರಾಮದಲ್ಲಿ ಅನುಷ್ಠಾನಗೊಂಡಿರುವ ಸೋಲಾರ್‌ ದೀಪಗಳ ಕೊಡುಗೆಯ ಸಮಾರೋಪ ಸಮಾರಂಭ ಜೂ. 9ರಂದು ಬೆಳಿಗ್ಗೆ 10.30ಕ್ಕೆ ಅಮಾಸೆಬೈಲು ಪ್ರೌಢಶಾಲೆ ಆವರಣದಲ್ಲಿ ನಡೆಯಲಿದೆ ಎಂದು ಅಮಾಸೆಬೈಲು ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಎ.ಜಿ. ಕೊಡ್ಗಿ ಹೇಳಿದರು. ಅಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಆಶೀರ್ವಚನ ನೀಡುವರು. ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಕರ್ನಾಟಕ ಬ್ಯಾಂಕ್‌ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಭಟ್‌ ಅಧ್ಯಕ್ಷತೆ ವಹಿಸುವರು. ಸೆಲ್ಕೋ ಇಂಡಿಯಾದ ಅಧ್ಯಕ್ಷ ಡಾ. ಎಚ್‌. ಹರೀಶ್‌ […]

ಮಳೆಗಾಗಿ ಕರಾವಳಿಯ ದೇವಸ್ಥಾನಗಳಲ್ಲಿ ಪರ್ಜನ್ಯ ಜಪ ವಿಶೇಷ ಪೂಜೆ

ಮಂಗಳೂರು: ಮಳೆಗಾಗಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಮುಜರಾಯಿ ಇಲಾಖೆ ಸುತ್ತೋಲೆ ಹೊರಡಿಸಿದ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖಾ ವ್ಯಾಪ್ತಿಯ ಕರಾವಳಿಯ ದೇವಾಲಯಗಳಲ್ಲಿ ಗುರುವಾರ ಪರ್ಜನ್ಯ ಜಪ ಹಾಗೂ ವಿಶೇಷ ಪೂಜೆಗಳು ನಡೆಯಿತು. ಅದರಂತೆ ಇತಿಹಾಸ ಪ್ರಸಿದ್ಧ ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದಲ್ಲಿ ವಿಶ್ವಶ್ರೀ ವಿಠಲದಾಸ್ ತಂತ್ರಿ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಪರ್ಜನ್ಯ ಜಪ ನೆರವೇರಿಸಲಾಯಿತು. ಪೂಜಾ ಕೈಂಕರ್ಯದಲ್ಲಿ ವಿವಿಧ ಭಾಗಗಳ ನೂರಾರು ಭಕ್ತರು ಭಾಗವಹಿಸಿದ್ದರು.