ಆಚಾರ್ಯ ಏಸ್: ಜೂ. 9ರಿಂದ ಸಿಇಟಿ 9-10ನೇ ತರಗತಿ, ಪ್ರಥಮ, ದ್ವಿತೀಯ ಪಿಯುಸಿ ಬ್ಯಾಚ್ ಪ್ರಾರಂಭ
ಉಡುಪಿ: ಎಸ್ಸೆಸ್ಸೆಲ್ಸಿ, ಪಿಯುಸಿ, ಸಿಯುಟಿ, ಜೆಇಇ ಮೇನ್ಸ್, ನೀಟ್, ಕಾಮರ್ಸ್ ಹಾಗೂ ಬ್ಯಾಂಕಿಂಗ್ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ಆಯೋಜಿಸುತ್ತಿರುವ ಆಚಾರ್ಯಾಸ್ ಏಸ್ನಲ್ಲಿ 9ನೇ ತರಗತಿ, ಹತ್ತನೇ ತರಗತಿ, ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ, ವಿದ್ಯಾರ್ಥಿಗಳಿಗೆ ದೈನಂದಿನ ಬ್ಯಾಚ್ ಹಮ್ಮಿಕೊಳ್ಳಲಾಗಿದೆ. ಜೂನ್ 10ರಿಂದ ಈ ತರಗತಿಗಳು ಆರಂಭವಾಗಿ 2020ರ ಫೆಬ್ರವರಿಯವರೆಗೆ ಪ್ರತಿದಿನ ಸಂಜೆ 5ರಿಂದ 6.30ರ ವರೆಗೆ ಸೋಮವಾರದಿಂದ ಶನಿವಾರದವರೆಗೆ ನಡೆಯಲಿದೆ. ಸಿಇಟಿ ತರಗತಿಗಳು ಪ್ರತಿ ಭಾನುವಾರ ಬೆಳಗ್ಗೆ 8.30ರಿಂದ ಸಂಜೆ 4ರವರೆಗೆ, ನೀಟ್ ಹಾಗೂ ಜೆಇಇ […]
ನ್ಯಾಯವಾದಿ ಗಿರೀಶ್ ಐತಾಳ್ ರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ
ಉಡುಪಿ: ಆರ್ಯಭಟ ಕಲ್ಚರಲ್ ಆರ್ಗನೈಜೇಶನ್ ಸಂಸ್ಥೆ ವತಿಯಿಂದ ಕೊಡ ಮಾಡುವ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಉಡುಪಿ ನ್ಯಾಯಲಯದಲ್ಲಿ 18 ವರ್ಷಗಳಿಂದ ನ್ಯಾಯವಾದಿಯಾಗಿ, 16 ಸಂಸ್ಥೆಗಳಿಗೆ ಕಾನೂನು ಸಲಹೆಗಾರರಾಗಿ ಸೇವೆ ಸಲ್ಲಿಸುವುದರೊಂದಿಗೆ ಸಮಾಜ ಸೇವೆಗೈದ ನ್ಯಾಯಾವಾದಿ ಬಿ. ಗಿರೀಶ್ ಐತಾಳ್ ಅವರಿಗೆ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನಿಸಿ ಸಮ್ಮಾನಿಸಲಾಯಿತು. ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ| ಎಚ್.ಎಲ್.ಎನ್. ರಾವ್, ಉಚ್ಛ ನ್ಯಾಯಾಲಯದ ವಿಶ್ರಾಂತ ನ್ಯಾ| ಡಾ| ಎಚ್.ಎನ್. ನಾಗಮೋಹನ್ ದಾಸ್, ನಾಡೋಜ ಡಾ| ಮಹೇಶ್ […]
ಉಡುಪಿ: ಸಾರ್ವಜನಿಕ ಕುಂದು ಕೊರತೆ ಸಭೆ
ಉಡುಪಿ : ರಾಜ್ಯ ಕಂದಾಯ ಇಲಾಖೆಯ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಐವನ್ ಡಿಸೋಜಾ ಜೂನ್ 10 ರಂದು ಅಪರಾಹ್ನ 12 ಕ್ಕೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ ಹಾಗೂ ಪಿಂಚಣಿ ಯೋಜನೆಯ ಪ್ರಗತಿ ಬಗ್ಗೆ, ಪಿಂಚಣಿದಾರರ ಕುಂದುಕೊರತೆಗಳ ಬಗ್ಗೆ ಮಾಹಿತಿ ನೀಡಿ, ಅದಾಲತ್ನ್ನು ನಡೆಸಲಿರುತ್ತಾರೆ. ಸದ್ರಿ ದಿನದಂದು ಸಾರ್ವಜನಿಕರು ಅದಾಲತ್ನಲ್ಲಿ ಭಾಗವಹಿಸಿ, ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾನುವಾರು ಕಳವುಗೈದು ಕಾರಿನಲ್ಲಿ ಸಾಗಾಟ, ಕಾರು ಅಪಘಾತಕ್ಕೀಡಾಗಿ 5 ಹಸುಗಳು ಸಾವು
ಮಂಗಳೂರು: ಹಸುಗಳನ್ನು ಕಳವುಗೈದು ಸಾಗಾಟ ಮಾಡುತ್ತಿದ್ದ ಐಷಾರಾಮಿ ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲಿಯೇ ಐದು ಜಾನುವಾರುಗಳು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಸಮೀಪದ ಮುಂಡಾಜೆ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಕಳ್ಳರು ಐಷಾರಾಮಿ ಕಾರಿನಲ್ಲಿ ಆರು ಹಸುಗಳನ್ನು ಅಮಾನವೀಯ ರೀತಿಯಲ್ಲಿ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ ಅಪಘಾತಕ್ಕೀಡಾಗಿದೆ. ಪರಿಣಾಮ ಕಾರಿನಲ್ಲಿದ್ದ ಐದು ಹಸುಗಳು ಸಾವನ್ನಪ್ಪಿದ್ದು, ಹಸುವೊಂದರ ಸ್ಥಿತಿ ಗಂಭೀರವಾಗಿದೆ. ಒಂದು ಕಾರಿನಲ್ಲಿ ಆರು ಹಸುಗಳನ್ನು ತುಂಬಿಕೊಂಡು ತೆರಳಿದ್ದು, ಕಾರಿನ ಹಿಂದಿನ ಸೀಟ್ಗಳನ್ನು ತೆಗೆದು […]
ಜೂ.9: ಬೆಳ್ತಂಗಡಿಯಲ್ಲಿ ಗ್ರಾಮೀಣ ಉದ್ಯೋಗ ಮೇಳ
ಬೆಳ್ತಂಗಡಿ: ವಿದ್ಯಾಮಾತ ಫೌಂಡೇಶನ್ ಹಾಗೂ ಜಯ ಕರ್ನಾಟಕ ಸಂಘಟನೆಯ ಸಹಭಾಗಿತ್ವದಲ್ಲಿ ಜೂ. 9ರಂದು ಉಚಿತ ಪ್ರವೇಶದೊಂದಿಗೆ ಗ್ರಾಮೀಣ ಉದ್ಯೋಗ ಮೇಳ-2019 ಬೆಳ್ತಂಗಡಿ ಮಾದರಿ ಹಿರಿಯ ಪ್ರಥಮಿಕ ಶಾಲಾ ವಠಾರದಲ್ಲಿ ಜರಗಲಿದೆ ಎಂದು ವಿದ್ಯಾಮಾತ ಫೌಂಡೇಶನ್ ನ ಅಧ್ಯಕ್ಷ ಭಾಗ್ಯೇಶ್ ರೈ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಈ ಉದ್ಯೋಗ ಮೇಳದಲ್ಲಿ 7ನೇ ತರಗತಿಯಿಂದ ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೋಮ, ಐಟಿಐ, ಹಾಗೂ ವಿವಿಧ ಪದವಿ ಪಡೆದ ವಿದ್ಯಾರ್ಥಿಗಳು ಭಾಗವಹಿಸಬಹುದು. ಉದ್ಯೋಗ ಮೇಳವನ್ನು ಅಂದು ಬೆಳಿಗ್ಗೆ 9 ಗಂಟೆಗೆ ಶಾಸಕ ಹರೀಶ್ […]