ಮಣಿಪಾಲ ಆರೋಗ್ಯ ಕಾರ್ಡ್: ಅರ್ಜಿ ಆಹ್ವಾನ
ಕುಂದಾಪುರ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಿಂದ ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಉದ್ದೇಶದಿಂದ ಜಾರಿಗೆ ತರಲಾದ ಮಣಿಪಾಲ ಆರೋಗ್ಯ ಕಾರ್ಡ್ ಮತ್ತು ದಂತ ಆರೋಗ್ಯ ಕಾರ್ಡ್ ಬಿಡುಗಡೆಗೊಂಡಿದ್ದು, ಜನತೆ ಅದರ ಪ್ರಯೋಜನ ಪಡೆಯಬೇಕು ಎಂದು ಮಣಿಪಾಲದ ಸಹಾಯಕ ವ್ಯವಸ್ಥಾಪಕ ಕೃಷ್ಣಪ್ರಸಾದ್ ಬಿ.ಎಸ್. ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆರೋಗ್ಯ ಕಾರ್ಡ್ ಹೊಂದಿರುವ ರೋಗಿಗಳು ವೈದ್ಯರ ಸಮಾಲೋಚನೆಯಲ್ಲಿ ಶೇ. 50, ಪ್ರಯೋಗಾಲಯದಲ್ಲಿ ಶೇ.30, ಹೊರರೋಗಿ ವಿಭಾಗದಲ್ಲಿ ಶೇ. 20 ಹಾಗೂ ವಿವಿಧ ಸೌಲಭ್ಯಗಳಿಗೆ ರಿಯಾಯಿತಿ ನೀಡಲಾಗುತ್ತದೆ. ಇದು ಸಾಮಾನ್ಯ […]
ಕ್ರಿಶ್ಚಿಯನ್ ರೈತರೋರ್ವರಿಗೆ ಕೃಪೆ ತೋರಿದ ನಾಗದೇವ..! ಕಿನ್ನಿಗೋಳಿಯಲ್ಲೊಂದು ಅಚ್ಚರಿಯ ಘಟನೆ
ಮಂಗಳೂರು: ನೀರಿಲ್ಲದೆ ಒಣಗಿ ಹೋಗಿದ್ದ ಕ್ರಿಶ್ಚಿಯನ್ ರೈತರೋರ್ವರ ಕೃಷಿ ತೋಟಕ್ಕೆ ನಾಗದೇವ ಕೃಪೆ ತೋರಿದ್ದಾನೆ. ಈ ಅಚ್ಚರಿಯ ಘಟನೆ ನಡೆದಿದ್ದು, ಮಂಗಳೂರು ತಾಲೂಕಿನ ಕಿನ್ನಿಗೋಳಿ ಬಳಿಯ ನಿಡ್ಡೋಡಿಯ ಗುಂಡೆಲ್ ಎಂಬಲ್ಲಿ. ಇಲ್ಲಿನ ನಿವಾಸಿ ವಿಕ್ಟರ್ ಡಿಸಿಲ್ವರ ಕೃಷಿ ತೋಟಕ್ಕೆ ಈ ಬಾರಿ ಮಳೆ ಇಲ್ಲದೆ ನೀರಿನ ಅಭಾವ ಎದುರಾಗಿತ್ತು. ಹೀಗಾಗಿ ಅವರು ಕಳೆದ ಕೆಲವು ಸಮಯದಿಂದ ತಮ್ಮ ಏಳು ಎಕರೆ ವ್ಯಾಪ್ತಿಯ ಅಡಿಕೆ ತೋಟಗಳ ಮಧ್ಯೆ ನಾಲ್ಕು ಕಡೆ ಕೊಳವೆ ಬಾವಿ ತೋಡಿಸಿದ್ದಾರೆ. ಅದರೆ ನೀರು ಸಿಕ್ಕಿರಲಿಲ್ಲ. […]
ಉಡುಪಿಯಲ್ಲಿ ಮಳೆಗಾಗಿ ಕಪ್ಪೆಗಳಿಗೆ ಮದ್ವೆ..! ಮಳೆ ಬರಲು ಹೀಗೊಂದು ವಿನೂತನ ಪ್ರಾರ್ಥನೆ
ಉಡುಪಿ: ದೇಶದಾದ್ಯಂತ ಮಳೆಗಾಗಿ ಒಂದಿಲ್ಲೊಂದು ರೀತಿಯಲ್ಲಿ ಪ್ರಾರ್ಥನೆ ನಡೆಯುತ್ತಿದೆ. ಆದರೆ ಉಡುಪಿಯ ಕಿದಿಯೂರ್ ಹೋಟೆಲಿನ ಸಭಾಂಗಣದಲ್ಲಿ ಶನಿವಾರ ವಿಶೇಷ ಹಾಗೂ ವಿಭಿನ್ನವಾಗಿ ಕಪ್ಪೆ ಗಳಿಗೆ ಮದ್ವೆ ಮಾಡುವ ಮೂಲಕ ಮಳೆಗಾಗಿ ಪ್ರಾರ್ಥನೆ ಮಾಡಲಾಯಿತು. ಹಿಂದೂ ಸಂಪ್ರದಾಯದಂತೆ ಕಾಲು ಉಂಗುರ ತೊಡಿಸಿ, ಮಾಂಗಲ್ಯವನ್ನು ಕಟ್ಟಿ ಕಪ್ಪೆಗಳ ಮದುವೆಯನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಹಾಗೂ ಪಂಚರತ್ನಾ ಸೇವಾ ಟ್ರಸ್ಟ್ ವತಿಯಿಂದ ಮಂಡೂಕ ಕಲ್ಯಾಣೋತ್ಸವ ಹಮ್ಮಿ ಕೊಳ್ಳಲಾಯಿತು. ಉಡುಪಿಯ ಕೊಳಲಗಿರಿ ಸಮೀಪದ ಕೀಳಿಂಜೆ ಎಂಬಲ್ಲಿ ಪತ್ತೆಯಾದ […]
ಉಡುಪಿ: ಸೇಡಿಯಾಪು ಕೃಷ್ಣಭಟ್ಟ ಪ್ರಶಸ್ತಿ ಪ್ರಧಾನ ಸಮಾರಂಭ
ಉಡುಪಿ: ಒಂದು ಭಾಷೆಯಿಂದ ಇನ್ನೊಂದು ಭಾಷೆಗೆ ಭಾವ ಮತ್ತು ಅರ್ಥವನ್ನು ದಾಟಿಸುವಾಗ ಬಹಳಷ್ಟು ಪರಿಶ್ರಮದ ಅಗತ್ಯವಿದೆ. ಈ ನಿಟ್ಟಿನಲ್ಲಿ ಅನುವಾದಕರ ಜ್ಞಾನವಿಸ್ತಾರ ಬಹಳ ಮುಖ್ಯಎಂದು ಬಹುಭಾಷಾತಜ್ಞ ಡಾ. ಎನ್. ಟಿ. ಭಟ್ಟ ಹೇಳಿದರು.ಶನಿವಾರ ನೂತನ ರವೀಂದ್ರ ಮಂಟಪದಲ್ಲಿ ಸೇಡಿಯಾಪು ಕೃಷ್ಣ ಭಟ್ಟರ ನೆನಪಿನಲ್ಲಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇದರ ಸಂಯುಕ್ತಾಶ್ರಯದಲ್ಲಿ ನಡೆದ ಸೇಡಿಯಾಪು ಕೃಷ್ಣಭಟ್ಟ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡುತ್ತಿದ್ದರು. ಅನುವಾದಕನಾಗಿ ಕೆಲವೊಂದು ಪ್ರಯತ್ನಗಳು ನನ್ನಿಂದ ಆಗಲ್ಪಟ್ಟಿವೆ ಯಾದರೂ […]
ಆರ್ಯುವೇದ ಎನ್ನುವುದು ಜೀವನಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆ
ಉಡುಪಿ: ಆರ್ಯುವೇದಕ್ಕೆ ಮನುಷ್ಯನ ಪಂಚೇಂದ್ರಿಯಗಳನ್ನು ನಿಯಂತ್ರಿಸುವ ಶಕ್ತಿಯಿದೆ. ಆರ್ಯುವೇದವನ್ನು ಚಿಕಿತ್ಸಾ ಪದ್ಧತಿಗಿಂತಲೂ ಜೀವನ ಕ್ರಮವೆಂದು ಪರಿಗಣಿಸಲಾಗುತ್ತದೆ ಎಂದು ಧಾರವಾಡ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯದ ಕುಲಪತಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಕುತ್ಪಾಡಿ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಭಾವಪ್ರಕಾಶ ಸಭಾಂಗಣದಲ್ಲಿ ಶನಿವಾರ ನಡೆದ ಕಾಲೇಜಿನ ವಿಶಿಖಾನುಪ್ರವೇಶ- ಪದವಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಲೋಪತಿ ವೈದ್ಯಕೀಯ ಪದ್ಧತಿಯಲ್ಲಿ ಆಹಾರದ ಕ್ರಮದಲ್ಲಿ ಯಾವುದೇ ಬದಲಾವಣೆಯನ್ನು ಅವರು ಪರಿಗಣಿಸುವುದಿಲ್ಲ. ಇದರಿಂದ ರೋಗಗಳು ಮತ್ತೆ ಉಲ್ಬಣಿಸುವ ಸಾಧ್ಯತೆಗಳಿರುತ್ತದೆ. […]