ಪಿಲಿಕುಳ ನಿಸರ್ಗಧಾಮದಲ್ಲಿ ಅದ್ದೂರಿ ಹಲಸಿನ ಮೇಳ,ಹಲಸು ಪ್ರಿಯರ ಬಾಯಿ ನೀರೂರಿಸಿದ ವಿವಿಧ ಖಾದ್ಯಗಳು

ಮಂಗಳೂರು: ಕಡಲ ತಡಿ ಮಂಗಳೂರಿನ ಪ್ರಸಿದ್ಧ ಪಿಲಿಕುಲ ನಿಸರ್ಗಧಾಮದಲ್ಲಿ ನಿಸರ್ಗಧಾಮ ಮತ್ತು ತೋಟಗಾರಿಕಾ ಇಲಾಖೆಯ ವತಿಯಿಂದ ಎರಡು ದಿನಗಳ ಹಣ್ಣುಗಳ ಉತ್ಸವ ಮತ್ತು ಹಸಲು ಮೇಳದಲ್ಲಿ ನಡೆಯುತ್ತಿರುವ ಹಲಸಿನ ಹಬ್ಬ ಹಲಸಿನ ಹಣ್ಣು ಪ್ರೀಯರ ಹಬ್ಬವಾಗಿತ್ತು. ಎರಡು ದಿನಗಳಲ್ಲಿ ಸಾವಿರಾರು ಮಂದಿ ಈ ಹಲಸಿನ ಹಬ್ಬಕ್ಕೆ ಸಾಕ್ಷಿಯಾದರು. ಹಲಸಿನ ವಿವಿಧ ಖಾದ್ಯಗಳಾದ ಹಲಸಿನ ಪಾಯಸ, ಕಬಾಬ್, ಮುಳ್ಳ, ಚಟ್ಟಂಬಡೆ, ಮಾಂಬಳ, ಹಪ್ಪಳ, ಸಂಡಿಗೆ, ಬಿಸಿ ಬಿಸಿಯಾಗಿ ಅಲ್ಲೇ ತಟ್ಟಿ ಕಾಯಿಸಿಕೊಡುವ ಹಲಸಿನ ಹೋಳಿಗೆ.. ಹೀಗೆ ಬಾಯಿ ಚಪ್ಪರಿಸುವಂತಹ […]
ಸೋಲಾರ್ ಉಪಯೋಗದ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇದೆ:ವಿಶ್ವೇಶತೀರ್ಥ ಸ್ವಾಮೀಜಿ

ಉಡುಪಿ: ಪ್ರತಿಯೊಂದು ಗ್ರಾಮ ಮಟ್ಟದಲ್ಲಿ ಸೋಲಾರ್ ಉಪಯೋಗದ ಕುರಿತು ಜಾಗೃತಿ ಮೂಡಿಸುವ ಅಗತ್ಯತೆ ಇಂದಿನ ದಿನಗಳಲ್ಲಿ ಹೆಚ್ಚಾಗಿದೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಹೇಳಿದರು. ಅವರು ಭಾನುವಾರ ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕರ್ಣಾಟಕ ಬ್ಯಾಂಕ್ ಲಿ ಮಂಗಳೂರು, ಅಮಾಸೆಬೈಲು ಗ್ರಾಮಪಂಚಾಯತ್, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ, ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ಅಮಾಸೆಬೈಲು ಪ್ರೌಢಶಾಲೆ ಆವರಣದಲ್ಲಿ ಜರುಗಿದ ಅಮಾಸೆಬೈಲು ಗ್ರಾಮದಲ್ಲಿ ಅನುಷ್ಠಾನಗೊಂಡಿರುವ […]
ಉಡುಪಿ: ಶ್ರೀಶ ಭಟ್ ಕಡೆಕಾರ್ ಅವರಿಗೆ ಸನ್ಮಾನ

ಉಡುಪಿ:ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದ ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಸಮರ್ಪಣಾಗೋಪುರಮ್ ಕಾರ್ಯಕ್ರಮದಲ್ಲಿ ಪೇಜಾವರ ಮಠಾಧೀಶರಾದ ಶ್ರೀವಿಶ್ವೇಶತೀರ್ಥ ಶ್ರೀಪಾದರು,ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಪರ್ಯಾಯ ಶ್ರೀ ವಿದ್ಯಾ ಧೀಶತೀರ್ಥ ಶ್ರೀಪಾದರು ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರ್ ಇವರನ್ನು ಸನ್ಮಾನಿಸಿ ಅನುಗ್ರಹಿಸಿದರು.
ಉಡುಪಿ :ಶ್ರೀಕೃಷ್ಣ ದೇವರಿಗೆ ಬ್ರಹ್ಮಕಲಶಾಭಿಷೇಕ

ಉಡುಪಿ :ಶ್ರೀ ಕೃಷ್ಣ ಮಠದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದಸುವರ್ಣಗೋಪುರ ಸಮರ್ಪಣೋತ್ಸವದ ಅಂಗವಾಗಿ ಪರ್ಯಾಯ ಪಲಿಮಾರು ಮಠಾಧೀಶರಾದಶ್ರೀವಿದ್ಯಾಧೀಶತೀರ್ಥ ಶ್ರೀಪಾದರ ನೇತೃತ್ವದಲ್ಲಿ ಪೇಜಾವರ ಮಠಾಧೀಶರಾದಶ್ರೀವಿಶ್ವೇಶತೀರ್ಥ ಶ್ರೀಪಾದರು,ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು,ಅದಮಾರು ಮಠಾಧೀಶರಾದ ಶ್ರೀವಿಶ್ವಪ್ರಿಯ ತೀರ್ಥ ಶ್ರೀಪಾದರು,ಪೇಜಾವರ ಕಿರಿಯ ಮಠಾಧೀಶರಾದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು,ಸೋದೆ ಮಠಾಧೀಶರಾದ ಶ್ರೀವಿಶ್ವವಲ್ಲಭ ತೀರ್ಥಶ್ರೀಪಾದರು,ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರುಗಳಿಂದ 108 ರಜತ ಕಲಶಗಳು ಪ್ರತಿಷ್ಠಿತವಾಗಿ ಪೂಜೆಗೊಂಡು ಶ್ರೀಕೃಷ್ಣ ದೇವರಿಗೆ ಬ್ರಹ್ಮಕಲಶಾಭಿಷೇಕನಡೆಯಿತು. ಕಿರಿಯಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
ಶ್ರೀ ಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದ ಸುವರ್ಣಗೋಪುರ ಶಿಖರ ಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಅಂಗವಾಗಿ ನಡೆದ ಸಪ್ತೋತ್ಸವದಲ್ಲಿ ಮೂರು ರಥಗಳ ಉತ್ಸವ ನಡೆಯಿತು.