ವಿಶ್ವಕಪ್ ನಿಂದ ಶಿಖರ್ ಧವನ್ ಔಟ್..! ಬೆರಳಿನ‌ ಗಾಯದ ಸಮಸ್ಯೆ ಹಿನ್ನೆಲೆ

ನವದೆಹಲಿ: ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ತೋರುತ್ತಿರುವ ಸಮಯದಲ್ಲೇ ತಂಡಕ್ಕೆ ದೊಡ್ಡ ಆಘಾತ ಎದುರಾಗಿದ್ದು, ಆರಂಭಿಕ ಆಟಗಾರ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ವಿಶ್ವಕಪ್​ನಿಂದ ಹೊರಗುಳಿದಿದ್ದಾರೆ. ಕಳೆದ ಆಸ್ಟ್ರೇಲಿಯಾ ವಿರುದ್ದದ ಪಂದ್ಯದ ವೇಳೆ ಎಡಗೈ ಹೆಬ್ಬರಳಿಗೆ ಗಾಯವಾಗಿತ್ತು. ಹೀಗಾಗಿ ವೈದ್ಯಾಧಿಕಾರಿಗಳು ಪರೀಕ್ಷೆ ನಡೆಸಿದ್ದು, ಇನ್ನು ಮೂರು ವಾರಗಳ ಕಾಲ ವಿಶ್ರಾಂತಿ ಮಾಡುವಂತೆ ಸೂಚಿಸಿದ್ದಾರೆ. ಬೆರಳಿಗೆ ಆಗಿರುವ ಗಾಯದ ಪ್ರಮಾಣವನ್ನು ಪತ್ತೆ ಹಚ್ಚಲು ಸ್ಕಾನಿಂಗ್ ಮಾಡಲಾಗಿದ್ದು, ಅನಂತರ ವರದಿ ಪರಿಶೀಲಿಸಿದ ವೈದ್ಯರು, ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಆಸ್ಟ್ರೇಲಿಯಾ […]

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಯಕ್ಷ-ಗಾನಗೋಪುರಮ್

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ,ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ತರ ಯೋಜನೆಯಾದ   ಸುವರ್ಣಗೋಪುರ ಶಿಖರಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಕಾರ್ಯಕ್ರಮದಲ್ಲಿ ಸತೀಶ್ ಶೆಟ್ಟಿ ಪಟ್ಲ,ಕನ್ನಡಿಕಟ್ಟೆ ರವಿಚಂದ್ರ,ಜನ್ಸಾಲೆ ರಾಘವೇಂದ್ರ ಆಚಾರ್ಯ,ಕಾವ್ಯಶ್ರೀ ಮತ್ತು ವೃಂದದವರಿಂದ  ಯಕ್ಷ- ಗಾನಗೋಪುರಮ್ ನಡೆಯಿತು.

ಕುಂದಾಪುರ: ವಿದ್ಯುತ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ

ಕುಂದಾಪುರ: ಜಿಲ್ಲೆಯ ಜನಸಾಮಾನ್ಯರು ಹಲವಾರು ಸಮಸ್ಯೆಗಳಿಂದ ಕೆಲಸವಿಲ್ಲದೇ ಆದಾಯ ಕುಂಠಿತವಾಗಿರುವುದು ಒಂದಡೆಯಾದರೆ ರಾಜ್ಯದಲ್ಲಿ ಬರಪರಿಸ್ಥಿತಿ ಇರುವ ಸನ್ನಿವೇಶದಲ್ಲಿ ಸರಕಾರವು ವಿದ್ಯುತ್ ದರ ಏರಿಕೆ ಮಾಡಿರುವುದು ಜನರಿಗೆ ಬಗೆದ ದ್ರೋಹವಾಗಿದೆ ಎಂದು ಸಿಪಿಎಂ ಪಕ್ಷದ ಕುಂದಾಪುರ ಕಾರ್ಯದರ್ಶಿ ಎಚ್ ನರಸಿಂಹ ಹೇಳಿದರು. ಅವರು ಕುಂದಾಪುರ ಮೆಸ್ಕಾಂ ಕಛೇರಿ ಎದುರು ವಿದ್ಯುತ್ ದರ ಏರಿಕೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.ಜನರು ಸಂಕಷ್ಟದಲ್ಲಿದ್ದರೂ ವಿದ್ಯುತ್ ಬಿಲ್ ಗಳನ್ನು ಪಾವತಿ ಮಾಡುತ್ತಿದ್ದಾರೆ.ವಿದ್ಯುತ್ ಸೋರಿಕೆಯು ತಡೆಯಲಾಗುತ್ತಿದೆ ಎಂದು ಹೇಳಲಾಗುತ್ತಿದ್ದರೂ ಸರಕಾರವು ದರ ಏರಿಕೆ ಮಾಡಿ […]

ಕುಂದಾಪುರ:ಹಲ್ಲೆ ನಡೆಸಿದ್ದ ವ್ಯಕ್ತಿಗೆ ಶಿಕ್ಷೆ:

ಕುಂದಾಪುರ: 2016 ಜುಲೈ 10 ರಂದು ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ವೆ ಗ್ರಾಮದ ಸೂರ್ಗೋಳಿ ಜಲ್ಲಿ ಕ್ರಷರ್ ಲೇಬರ್ ರೂಂನಲ್ಲಿ ಸಾಲದ ಹಣದ ವಿಚಾರದಲ್ಲಿ ವ್ಯಕ್ತಿಯೋರ್ವ ಕತ್ತಿಯಿಂದ ಇನ್ನೋರ್ವನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ ಬಗ್ಗೆ ಅಪರಾಧ ಸಾಭೀತಾಗಿದ್ದು ಕುಂದಾಪುರದಲ್ಲಿನ ಹೆಚ್ಚುವರಿ ಜಿಲ್ಲ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಪ್ರಕಾಶ್ ಖಂಡೇರಿ ಈ ಬಗ್ಗೆ ಮಂಗಳವಾರ ಅಪರಾಧಿಗೆ ಶಿಕ್ಷೆ ಪ್ರಮಾಣ ಪ್ರಕಟಿಸಿದ್ದಾರೆ. ಕಾರ್ಮಿಕ ರಾಜಕುಮಾರ್ ಹಾಗೂ ಗದಗದ ಯಲ್ಲಪ್ಪ ನಡುವಿನ ಹಣಕಾಸು ವಿಚಾರದ ಮಾತುಕತೆಯಲ್ಲಿ ಯಲ್ಲಪ್ಪ ರಾಜಕುಮಾರ್ ಮೇಲೆ […]

ಕರಾವಳಿಯಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ:

ಕರಾವಳಿ: ಮುಂದಿನ ಮೂರು ದಿನಗಳಲ್ಲಿ ಕರಾವಳಿಯಾದ್ಯಂತ ಭಾರೀ ಮಳೆಯಾಗುವ ಸಂಭವವಿದ್ದು, ಭಾರೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.ಈಗಾಗಲೇ ಮಳೆ ಕೊರತೆಯಿಂದ ಬಳಲುತ್ತಿರುವ ಕರಾವಳಿಯ ಬಹುತೇಕ ಕಡೆಗಳಲ್ಲಿ ಮಂಗಳವಾರ ಉತ್ತಮ ಮಳೆಯಾಗಿದ್ದು, ಜನತೆ ಖಷ್ ಆಗಿದ್ದಾರೆ .ಇದೀಗ ಮುಂಗಾರು ಚುರುಕುಗೊಂಡಿದ್ದು ಪೂರ್ಣಪ್ರಮಾಣದಲ್ಲಿ ಆವರಿಸಿಕೊಳ್ಳಲಿದೆ ಎಂದು ಹವಾಮನ ಇಲಾಖೆ ತಿಳಿಸಿದೆ.