ಸಾಲಮನ್ನಾ: ರೈತರಿಗೆ ಮಾಹಿತಿ ನೀಡಲು ಐವನ್ ಸೂಚನೆ, ಉಡುಪಿ ಜಿಲ್ಲೆಗೆ ರೂ. 77.72 ಕೋಟಿ ಸಾಲಮನ್ನಾ ಮೊತ್ತ ಬಿಡುಗಡೆ

ಉಡುಪಿ, ಜೂನ್: ರಾಜ್ಯ ಸರಕಾರದ ಸಾಲಮನ್ನಾ ಯೋಜನೆಯಡಿ ಜಿಲ್ಲೆಯಲ್ಲಿ ರೈತರ ಖಾತೆಗೆ ಬಿಡುಗಡೆಯಾದ ಮೊತ್ತದ ಬಗ್ಗೆ ಪ್ರತಿಯೊಬ್ಬ ರೈತನಿಗೂ ಸಮರ್ಪಕ ಮಾಹಿತಿ ನೀಡುವಂತೆ ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ಸೋಮವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಂದಾಯ ಅಧಿಕಾರಿಗಳ ಸಭೆ ನಡೆಸಿ ಹಾಗೂ ಸಾರ್ವಜನಿಕರ ಕುಂದುಕೊರತೆ ಸ್ವೀಕರಿಸಿ ಮಾತನಾಡಿದರು. ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕ್‍ನಲ್ಲಿ 4720 ಖಾತೆಗಳು ಹಾಗೂ ಸಹಕಾರ ಸಂಘಗಳಲ್ಲಿ 24232 ರೈತರ ಖಾತೆಗಳು ಸಾಲಮನ್ನಾಗೊಳಿಸಲು ಅರ್ಹತೆ ಪಡೆದಿವೆ. […]

ಕೃಷಿ ಮಾಡುವ ಮೊದಲು ಸಂಪೂರ್ಣ ಮಾಹಿತಿ ಅಗತ್ಯ: ತಾ.ಪಂ. ಅಧ್ಯಕ್ಷೆ

ಉಡುಪಿ:ರೈತರು ಯಾವುದೇ ಕೃಷಿ ಮಾಡಲು ಮೊದಲು ಆ ಕೃಷಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತಮ್ಮ ಕೃಷಿಯಲ್ಲಿ ಅಳವಡಿಸಿಕೊಂಡಾಗ ಕೃಷಿಯಲ್ಲಿ ಉತ್ತಮ ಇಳುವರಿ ಪಡೆದು ರೈತರ ಸ್ವಯಂ ಅಭಿವೃದ್ಧಿ ಜೊತೆಗೆ ದೇಶದ ಅಭಿವೃದ್ಧಿ ಸಾಧ್ಯ ಎಂದು ತಾಲೂಕು ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರದೀಪ್‍ರಾವ್ ತಿಳಿಸಿದ್ದಾರೆ. ಅವರು ಭಾನುವಾರ ಜಿಲ್ಲಾ ಪಂಚಾಯತ್, ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖೆಗಳು, ಕೃಷಿ ಸಂಘ ಪೆರಂಪಳ್ಳಿ ಹಾಗೂ ಕೆಥೋಲಿಕ್ ಸಭಾ ಪೆರಂಪಳ್ಳಿ ಘಟಕದ ಸಂಯುಕ್ತ ಆಶ್ರಯದಲ್ಲಿ ಪೆರಂಪಳ್ಳಿ ಚರ್ಚ್ ಸಭಾಭವನದಲ್ಲಿ ನಡೆದ […]

ವಾಯುಭಾರ ಕುಸಿತ, ಸುರಕ್ಷತೆ ಕ್ರಮ ವಹಿಸಲು ಸೂಚನೆ: ಜಿಲ್ಲಾಧಿಕಾರಿ

ಉಡುಪಿ: ಪ್ರಸಕ್ತ ಸಾಲಿನ ಮುಂಗಾರು ಮಳೆ ಕೇರಳ ರಾಜ್ಯಕ್ಕೆ ಜೂನ್ 8 ರಂದು ಪ್ರವೇಶಿಸಿದ್ದು, ಜೂನ್ 10 ರ ಒಳಗಾಗಿ ಕರ್ನಾಟಕ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಕೆಲವು ಭಾಗಗಳಿಗೆ ವ್ಯಾಪಿಸಲಿದೆ. ಅರಭಿ ಸಮುದ್ರದಲ್ಲಿ ವಾಯುಭಾರ ಕುಸಿತವುಂಟಾಗುವ ಸಾಧ್ಯತೆಯಿರುವುದರಿಂದ ಮುಂದಿನ 2-3 ದಿನಗಳಲ್ಲಿ ರಾಜ್ಯದ ಕರಾವಳಿ ಒಳನಾಡು ಪ್ರದೇಶದ ಹಲವು ಭಾಗಗಳಲ್ಲಿ ಗಂಟೆಗೆ 35-45 ಕಿ.ಮೀ ವೇಗವಾಗಿ ಗಾಳಿ ಬೀಸಲಿದ್ದು, ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ […]