ಜೂನ್ 14 ರಂದು ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ : ಜಿಲ್ಲಾ ಆಡಳಿತ ಉಡುಪಿ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ ಉಡುಪಿ, ಜಯಲಕ್ಷ್ಮೀ ಸಿಲ್ಕ್ಸ್, ಜಯಲಕ್ಷ್ಮೀ ಆರ್ಕೇಡ್ ಉದ್ಯಾವರ, ಟ್ರಿನಿಟಿ ಕೈಗಾರಿಕಾ ತರಬೇತಿ ಕೇಂದ್ರ, ಜ್ಞಾನ ಸಾದನಾ ಉದ್ಯಾವರ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಬೃಹತ್ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಾಗೂ ಅತಿ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳಿಗೆ ಸನ್ಮಾನ ಕಾರ್ಯಕ್ರಮವು ಜೂನ್ […]
ಬಾಲ ಕಾರ್ಮಿಕರು ಕಂಡುಬಂದಲ್ಲಿ 1098 ಗೆ ಮಾಹಿತಿ ನೀಡಿ- ಸಿ.ಎಂ.ಜೋಷಿ

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಬಾಲ ಕಾರ್ಮಿಕರು ಕಂಡು ಬಂದಲ್ಲಿ, ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಸಾರ್ವಜನಿಕರು ಕರೆ ಮಾಡಿ, ಮಾಹಿತಿ ನೀಡುವುದರ ಮೂಲಕ, ಸಮಾಜದಲ್ಲಿ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ.ಜೋಷಿ ತಿಳಿಸಿದ್ದಾರೆ. ಅವರು ಬುಧವಾರ, ಜಿಲ್ಲಾಡಳಿತ ಉಡುಪಿ ಜಿಲ್ಲೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ಕಾರ್ಮಿಕ ಇಲಾಖೆ ಉಡುಪಿ, ಜಿಲ್ಲಾ […]
ಮಂಗಳೂರು: ಗಣಿ-ಭೂ ವಿಜ್ಞಾನ ಇಲಾಖೆ ಅಭಿಯಂತರರ ಮನೆಗೆ ಎಸಿಬಿ ದಾಳಿ

ಮಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇರೆಗೆ ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರರ ಮಂಗಳೂರು, ಬೆಂಗಳೂರು, ಚಿತ್ರದುರ್ಗದ ಮನೆ ಹಾಗೂ ಕಚೇರಿಗೆ ಏಕಕಾಲದಲ್ಲಿ ಎಸಿಬಿ ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಹಾಯಕ ಅಭಿಯಂತರರಾಗಿ 18 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಮಹದೇವಪ್ಪರ ಮಂಗಳೂರಿನ ಕದ್ರಿ ಕಂಬಳದಲ್ಲಿರುವ ಬಾಡಿಗೆ ಮನೆ, ಕದ್ರಿ ಮಲ್ಲಿಕಟ್ಟೆ ಯಲ್ಲಿರುವ ಕಚೇರಿಗೆ ದಾಳಿ ನಡೆಸಲಾಗಿದೆ. ಜತೆಗೆ ಬೆಂಗಳೂರಿನ ಸಿದ್ದೇನಹಳ್ಳಿಯಲ್ಲಿರುವ ಮನೆ ಹಾಗೂ […]
ಪಡುಕೆರೆ: ಕಡಲು ಪ್ರಕ್ಷುಬ್ದಗೊಂಡು ಕಡಲ್ಕೊರೆತದ ಭೀತಿ, ಅಧಿಕಾರಿಗಳ ಜತೆ ಜಿ.ಪಂ. ಅಧ್ಯಕ್ಷ ಭೇಟಿ

ಉಡುಪಿ: ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕರೆಯಲ್ಲಿ ಕಡಲು ಪ್ರಕ್ಷುಬ್ದಗೊಂಡಿದ್ದು, ಹೀಗಾಗಿ ಪಕ್ಕದಲ್ಲಿರುವ ಮನೆಗೆ ಅಪಾಯ ಎದುರಾಗಿದೆ. ನೀರು ಮನೆಯಂಗಳ ದಾಟಿ ನದಿಯನ್ನು ಸೇರುತ್ತಿದ್ದು, ಕಡಲ್ಕೊರೆತ ಸಂಭವಿಸುವ ಸಾಧ್ಯತೆ ಎದುರಾಗಿದೆ. ಈ ಬಗ್ಗೆ ಮಾಹಿತಿ ತಿಳಿದು ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅವರು ಮಂಗಳವಾರ ಆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ತುರ್ತಾಗಿ ಸೂಕ್ತ ಕ್ರಮವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ತಾ.ಪಂ. ಮಾಜಿ ಉಪಾಧ್ಯಕ್ಷ ಗಣೇಶ್ ಕುಮಾರ್ ಸಂಪಿಗೆ, […]
ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ತಂದೆ ಮಗಳ ಸಾವು: ವಾಮದಪದವಿನಲ್ಲಿ ದಾರುಣ ಘಟನೆ

ಮಂಗಳೂರು: ತುಂಡಾಗಿ ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಮತ್ತು ಪುತ್ರಿ ಸಾವನ್ನಪ್ಪಿದ ಘಟನೆ ಮಂಗಳವಾರ ಬಂಟ್ವಾಳ ತಾಲೂಕಿನ ವಾಮದಪದವು ಎಂಬಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪ್ರಗತಿಪರ ಕೖಷಿಕ ಗೋಪಾಲಕೖಷ್ಣ ಶೆಟ್ಟಿ (65) ಮತ್ತು ಅವರ ಪುತ್ರಿ ದಿವ್ಯಾ ಶೆಟ್ಟಿ (29) ಮೃತಪಟ್ಟ ದುರ್ದೈವಿಗಳು. ಅಡಿಕೆ ತೋಟದ ಸಮೀಪದಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬಿದ್ದಿತ್ತು. ಅದನ್ನರಿಯದೇ ತುಳಿದು ಸಾವನ್ನಪಿದ್ದಾರೆ ಎನ್ನಲಾಗಿದೆ. ಮೆಸ್ಕಾಂ ನಿಲ೯ಕ್ಷ್ಯ ವಹಿಸಿದೆ ಎಂದು ಆರೋಪಿಸಿದ ಸ್ಥಳೀಯರು ಮೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.